1367 ವಿವಿಧ ಹುದ್ದೆಗಳ ನೇಮಕಾತಿ: ಅರ್ಜಿ ಹಾಕಿ

1367 ವಿವಿಧ ಹುದ್ದೆಗಳಿಗೆ ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾಸಿಲಾಗಿದ್ದು, ಈ  ಬಗ್ಗೆ ಇನ್ನುಷ್ಟು ಮಾಹಿತಿ ಈ ಕೆಳಗಿನಂತಿದೆ.

hdfc bank recruitment 2020 for 1367 various posts rbj

ಬೆಂಗಳೂರು, (ನ.27): ಹೌಸಿಂಗ್ ಡೆವಲಪ್ಮೆಂಟ್ ಫಿನಾನ್ಸ್ ಕಾರ್ಪೋರೇಶನ್ ಲಿಮಿಟೆಡ್ (ಹೆಚ್‌ಡಿಎಫ್‌ಸಿ) 1367 ಹುದ್ದೆಗಳ ನೇಮಕಾತಿಗೆ ಆನ್‌ಲೈನ್ ಅರ್ಜಿ ಆಹ್ವಾನಿಸಲಾಗಿದೆ.

ಪ್ರೊಬೆಷನರಿ ಅಧಿಕಾರಿ, ಅಸಿಸ್ಟೆಂಟ್ ಮ್ಯಾನೇಜರ್, ಎಕ್ಸಿಕ್ಯುಟಿವ್ ಸೇರಿದಂತೆ ಒಟ್ಟು 1367 ಹುದ್ದೆಗಳ ನೇಮಕಾತಿ ನಡೆಯಲಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಡಿಸೆಂಬರ್ 31,2020ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ವಿದ್ಯಾರ್ಹತೆ: ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. 

ವಯೋಮಿತಿ: ಕನಿಷ್ಟ 21 ರಿಂದ ಗರಿಷ್ಟ 26 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಹಾಕಬಹುದು. 

ವೇತನ ಶ್ರೇಣಿ: ವಿವಿಧ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 58,200 ರೂ. ವೇತನವನ್ನು ನಿಗದಿ ಮಾಡಲಾಗಿದೆ.

ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. 

ಅರ್ಜಿ ಸಲ್ಲಿಕೆ ವಿಧಾನ: ಅರ್ಹ ಅಭ್ಯರ್ಥಿಗಳು ಅನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://www.hdfcbank.com/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಡಿಸೆಂಬರ್ 31,2020ರೊಳಗೆ ಅರ್ಜಿಯನ್ನು ಸಲ್ಲಿಸಬಹುದು,

ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.

Latest Videos
Follow Us:
Download App:
  • android
  • ios