1163 ಹುದ್ದೆಗಳಿಗೆ ನೇಮಕಾತಿ: ಅರ್ಜಿ ಹಾಕಿ
ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ ಸಂಸ್ಥೆ (ಐಬಿಪಿಎಸ್) 2019ನೇ ಸಾಲಿನ ನೇಮಕಾತಿ ಪ್ರಕ್ರಿಯೆಯನ್ನು ಮುಂದುವರೆಸಿದ್ದು, ಮತ್ತೆ 1163 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಈ ಬಗ್ಗೆ ಇನ್ನಷ್ಟು ಮಾಹಿತಿ ಈ ಕೆಳಗಿನಂತಿದೆ.
ನವದೆಹಲಿ, (ನ.16): ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ ಸಂಸ್ಥೆ (ಐಬಿಪಿಎಸ್) 1163 ವಿಶೇಷ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ, ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ 26.11.2019ರೊಳಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ.
ವಿದ್ಯಾರ್ಹತೆ: ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲದಿಂದ ಯಾವುದೇ ಪದವಿ, ಎಂಬಿಎ, ಸಿಎ ಅಥವ ತತ್ಸಮಾನ ವಿದ್ಯಾರ್ಹತೆಯನ್ನು ಪಡೆದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಜಾಬ್ಸ್ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
ವಯೋಮಿತಿ: ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 20 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. ಗರಿಷ್ಠ ವಯೋಮಿತಿ 30 ವರ್ಷಗಳು(ನವೆಂಬರ್ 26, 2019ರಂತೆ) ಎಸ್ ಸಿ/ ಎಸ್ಟಿ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿಯಲ್ಲಿ 05 ವರ್ಷ ಹಾಗೂ ಒಬಿಸಿ ಅಭ್ಯರ್ಥಿಗಳಿಗೆ 03ವರ್ಷಗಳ ವಿನಾಯಿತಿ ಇದೆ.
ನೇಮಕಾತಿ ಪ್ರಕ್ರಿಯೆ: ಪ್ರಾಥಮಿಕ ಪರೀಕ್ಷೆ, ಮುಖ್ಯ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಶುಲ್ಕ: ಅರ್ಜಿ ಸಲ್ಲಿಸುವ ಎಸ್‌ಸಿ/ಎಸ್‌ಟಿ/ಅಂಗವಿಕಲ ಅಭ್ಯರ್ಥಿಗಳು 100 ರೂ. ಇತರ ಅಭ್ಯರ್ಥಿಗಳು 600 ರೂ. ಅರ್ಜಿ ಶುಲ್ಕವನ್ನು ಪಾವತಿಸಬೇಕಿದೆ.
ಅರ್ಜಿ ಸಲ್ಲಿಸುವ ಪ್ರಕ್ರಿಯೆ ಹಾಗೂ ಇನ್ನಿತರ ಮಾಹಿತಿಗಾಗಿ ಕ್ಲಿಕ್ ಮಾಡಿ