ದೇಶದ ವಿವಿಧ ನಗರಗಳಲ್ಲಿ ಖಾಲಿ ಇರುವ 8400 ಹುದ್ದೆಗಳನ್ನು ಭರ್ತಿ ಮಾಡಲು ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ ಸಂಸ್ಥೆ ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನಿಸಿದೆ. ಈ ಹುದ್ದೆಗಳಿಗೆ ಬೇಕಾದ ಅರ್ಹತೆಗಳು ಏನು ಎನ್ನುವ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ.

ಬೆಂಗಳೂರು, (ಜೂ.19):8400 ಹುದ್ದೆಗಳನ್ನು ಭರ್ತಿ ಮಾಡಲು ಇನ್ಸ್‌ಟಿಟ್ಯೂಟ್‌ ಆಫ್‌ ಬ್ಯಾಂಕಿಂಗ್‌ ಪರ್ಸನಲ್‌ ಸೆಲೆಕ್ಷನ್‌(ಐಬಿಪಿಎಸ್‌) ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಆಫೀಸ್ ಅಸಿಸ್ಟೆಂಟ್, ಆಫೀಸರ್ ಹುದ್ದೆಗಳಿಗೆ ನೇಮಕಾತಿ ನಡೆಯಲಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು 4/7/2019ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೋರಲಾಗಿದೆ.

ಕರ್ನಾಟಕ ಪೋಸ್ಟಲ್ ಸರ್ಕಲ್‌ನಲ್ಲಿ ನೇಮಕಾತಿ: ಅರ್ಜಿ ಹಾಕಿ

ವಿದ್ಯಾರ್ಹತೆ:: ಯಾವುದೇ ಪದವಿ, ಎಂಬಿಎ, ಸಿಎ ಅಥವ ತತ್ಸಮಾನ ವಿದ್ಯಾರ್ಹತೆಯನ್ನು ಪಡೆದಿರುವ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. 

ಆಯ್ಕೆ ವಿಧಾನ: ಪ್ರಾಥಮಿಕ ಪರೀಕ್ಷೆ, ಮುಖ್ಯ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಶುಲ್ಕ: ಎಸ್‌ಸಿ/ಎಸ್‌ಟಿ/ಅಂಗವಿಕಲ ಅಭ್ಯರ್ಥಿಗಳಿಗೆ 100 ರು. ಇತರೆ ವರ್ಗದ ಅಭ್ಯರ್ಥಿಗಳಿಗೆ 600 ರು. ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.

ವಯೋಮಿತಿ: ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯೋಮಿತಿ ಹಾಗೂ ಗರಿಷ್ಟ 40 ವರ್ಷ ವಯೋಮಿತಿಯನ್ನು ನಿಗದಿ ಮಾಡಲಾಗಿದೆ.

ಈ ಬಗ್ಗೆ ಇನ್ನಷ್ಟು ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ