ಕರ್ನಾಟಕ ಬ್ಯಾಂಕ್  ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಜನವರಿ 28ರೊಳಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ.

ಬೆಂಗಳೂರು(ಜ.26): ಕರ್ನಾಟಕ ಬ್ಯಾಂಕ್ (Karnataka Bank) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಮುಖ್ಯ ಭದ್ರತಾ ಅಧಿಕಾರಿ (Chief Security Officer) ಹುದ್ದೆ ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಆಸಕ್ತರು ಆನ್‌ಲೈನ್ (Online)​ ಮೂಲಕ ಅಥವಾ ಈ ಮೇಲ್ ಮೂಲಕ ಜನವರಿ 28ರೊಳಗೆ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು karnatakabank.com ಗೆ ಭೇಟಿ ನೀಡಿ.

ಶೈಕ್ಷಣಿಕ ವಿದ್ಯಾರ್ಹತೆ: ಕರ್ನಾಟಕ ಬ್ಯಾಂಕ್ ನೇಮಕಾತಿಯ ಮುಖ್ಯ ಭದ್ರತಾ ಅಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ನೇಮಕಾತಿ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಶೈಕ್ಷಣಿಕ ಅರ್ಹತೆ ಹೊಂದಿರಬೇಕು.

ಕೆಲಸದ ಅನುಭವ: ಕರ್ನಾಟಕ ಬ್ಯಾಂಕ್ ನೇಮಕಾತಿಯ ಮುಖ್ಯ ಭದ್ರತಾ ಅಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ರಕ್ಷಣಾ ಇಲಾಖೆಯಲ್ಲಿ ಕನಿಷ್ಠ 5 ವರ್ಷ ಸೇವೆ ಸಲ್ಲಿಸಿರಬೇಕು.

EAST COAST RAILWAY RECRUITMENT 2022: ನರ್ಸಿಂಗ್​ ಸೂಪರಿಂಟೆಂಡೆಂಟ್​ ಸೇರಿ ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನ

ವಯೋಮಿತಿ: ಕರ್ನಾಟಕ ಬ್ಯಾಂಕ್ ನೇಮಕಾತಿ ಅರ್ಜಿ ಸಲ್ಲಿಸಿದ ಅಭ್ಯರ್ಥಿಯ ಗರಿಷ್ಠ ವಯಸ್ಸು 35-55 ವರ್ಷದೊಳಗಿರಬೇಕು. SC/ST ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ನೀಡಲಾಗಿದೆ. ಜೊತೆಗೆ ಆಯಾಯ ವರ್ಗಾನುಸಾರ ವಯೋಮಿತಿ ಸಡಿಲಿಕೆ ನೀಡಲಾಗಿದೆ.

ಅರ್ಜಿ ಶುಲ್ಕ: ಕರ್ನಾಟಕ ಬ್ಯಾಂಕ್ ನೇಮಕಾತಿಯ ಮುಖ್ಯ ಭದ್ರತಾ ಅಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವಿಲ್ಲ.

ಆಯ್ಕೆ ಪ್ರಕ್ರಿಯೆ:  ಕರ್ನಾಟಕ ಬ್ಯಾಂಕ್ ನೇಮಕಾತಿಯ ಮುಖ್ಯ ಭದ್ರತಾ ಅಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಮೆರಿಟ್ ಲಿಸ್ಟ್ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ. 

ವೇತನ ಮತ್ತು ಉದ್ಯೋಗ ಸ್ಥಳ: ಆಯ್ಕೆಯಾದ ಅಭ್ಯರ್ಥಿಗಳು ಮಂಗಳೂರಿನಲ್ಲಿ ಕೆಲಸ ಮಾಡಬೇಕಾಗುತ್ತದೆ. ಮತ್ತು ತಿಂಗಳಿಗೆ ನಿಯಮಾನುಸಾರ ವೇತನ ದೊರೆಯಲಿದೆ. 

ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು : https://karnatakabank.com/ ಗೆ ಭೇಟಿ ನೀಡಿ

ಈ ಮೇಲ್ ಮೂಲಕ ಅರ್ಜಿ ಸಲ್ಲಿಸಲು: recruitment@ktkbank.com ಈ ಮೇಲ್ ಐಡಿಗೆ ಅಗತ್ಯ ದಾಖಲೆಗಳನ್ನು ಇಟ್ಟು ಮೇಲ್ ಮಾಡಿ.

Bank of Baroda Recruitment 2022: ಒಟ್ಟು 220 ಹುದ್ದೆಗಳ ಭರ್ತಿಗೆ ಮುಂದಾದ ಬ್ಯಾಂಕ್ ಆಫ್​ ಬರೋಡ

ಬರೋಡ ಬ್ಯಾಂಕ್ ನಲ್ಲಿ ಪದವೀಧರರಿಗೆ ಸುವರ್ಣಾವಕಾಶ, ಇಂದೇ ಅರ್ಜಿ ಸಲ್ಲಿಸಿ: ಬ್ಯಾಂಕ್ ಆಫ್​ ಬರೋಡ (Bank of Baroda) ಖಾಲಿ ಇರುವ 198 ಹುದ್ದೆಗಳನ್ನು ತುಂಬಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಮ್ಯಾನೇಜರ್, ಜನರಲ್ ಮ್ಯಾನೇಜರ್, ವೈಸ್ ಪ್ರೆಸಿಡೆಂಟ್, ಪ್ರೊಡಕ್ಟ್ ಮ್ಯಾನೇಜರ್, ಹೆಡ್ ಪ್ರಾಜೆಕ್ಟ್​ & ಪ್ರೊಸೆಸ್, ಅಸಿಸ್ಟೆಂಟ್ ವೈಸ್ ಪ್ರೆಸಿಡೆಂಟ್, MIS ಮ್ಯಾನೇಜರ್ ಹುದ್ದೆಗಳು ಖಾಲಿ ಇದ್ದು, ಪದವಿ ಪಾಸಾಗಿರುವ ಅಭ್ಯರ್ಥಿಗಳನ್ನು ಈ ಹುದ್ದೆಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ. ಆಸಕ್ತರು ಆನ್​ಲೈನ್ (Online)​ ಮೂಲಕ ಅರ್ಜಿ ಸಲ್ಲಿಸಬೇಕು. ಈಗಾಗಲೇ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಫೆಬ್ರವರಿ 1 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ ಉದ್ಯೋಗ ಆಸಕ್ತರು ಬ್ಯಾಂಕ್​ ಆಫ್​ ಬರೋಡದ ಅಧಿಕೃತ ವೆಬ್​ಸೈಟ್​​ www.bankofbaroda.in ಗೆ ಭೇಟಿ ನೀಡಿ ಮಾಹಿತಿ ಪಡೆದುಕೊಳ್ಳಲು ಕೋರಲಾಗಿದೆ. 

ಸಂಪತ್ತು ನಿರ್ವಹಣಾ ಸೇವೆಗಳ ವಿಭಾಗದಲ್ಲಿ ಹುದ್ದೆಗಳ ಭರ್ತಿಗೆ ಕರೆ ನೀಡಿದ BOB: ಬ್ಯಾಂಕ್ ಆಫ್ ಬರೋಡಾ (Bank of Baroda) ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಮುಂದಾಗಿದೆ. ಗುತ್ತಿಗೆ ಆಧಾರದ ಮೇಲೆ ಸಂಪತ್ತು ನಿರ್ವಹಣಾ ಸೇವೆಗಳ (Wealth Management Services) ವಿಭಾಗದಲ್ಲಿ ಖಾಲಿ ಇರುವ 58 ಹುದ್ದೆಗಳನ್ನು ತುಂಬಲು ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ಈಗಾಗಲೇ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ಜನವರಿ 27 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಅರ್ಜಿ ಸಲ್ಲಿಸಲು ಬಯಸುವ ಅರ್ಹ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗೆ ಬ್ಯಾಂಕ್ ಆಫ್ ಬರೋಡಾದ ಅಧಿಕೃತ ವೆಬ್‌ಸೈಟ್ bankofbaroda.in ಗೆ ಭೇಟಿ ನೀಡಿ.