Karnataka Bank Recruitment 2023: ಕರ್ನಾಟಕ ಬ್ಯಾಂಕ್ ನಲ್ಲಿ ಖಾಲಿ ಇರುವ ಪ್ರೊಬೇಷನರಿ ಆಫಿಸರ್ ಹುದ್ದೆಗೆ ನೇಮಕಾತಿ
ಕರ್ನಾಟಕ ಬ್ಯಾಂಕ್ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಪ್ರೊಬೇಷನರಿ ಆಫಿಸರ್ ಹುದ್ದೆ ಖಾಲಿ ಇದ್ದು, ಅರ್ಜಿ ಸಲ್ಲಿಸಲು ಜನವರಿ 19 ಕೊನೆಯ ದಿನವಾಗಿದೆ.
ಬೆಂಗಳೂರು (ಜ.1): ಕರ್ನಾಟಕ ಬ್ಯಾಂಕ್ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಪ್ರೊಬೇಷನರಿ ಆಫಿಸರ್ ಹುದ್ದೆ ಖಾಲಿ ಇದ್ದು, ಅಧಿಕೃತ ವೆಬ್‌ಸೈಟ್ www.karnatakabank.com ನಲ್ಲಿ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆಯನ್ನು ಪ್ರಕಟಿಸಿದೆ. ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಜನವರಿ 19 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗೆ ಅಧಿಕೃತ ವೆಬ್‌ತಾಣಕ್ಕೆ ಭೇಟಿ ನೀಡಲು ಕೋರಲಾಗಿದೆ.
ಶೈಕ್ಷಣಿಕ ವಿದ್ಯಾರ್ಹತೆ: ಕರ್ನಾಟಕ ಬ್ಯಾಂಕ್ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಹುದ್ದೆಗೆ ಅನುಸಾರವಾಗಿ ಯಾವುದೇ ವಿಭಾಗದಲ್ಲಿ ಸ್ನಾತಕೋತ್ತರ ಪದವಿ ಪಡೆದಿರಬೇಕು.
ವಯೋಮಿತಿ: ಕರ್ನಾಟಕ ಬ್ಯಾಂಕ್ ನಲ್ಲಿ ಖಾಲಿ ಇರುವ ಪ್ರೊಬೇಷನರಿ ಆಫಿಸರ್ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳ ಗರಿಷ್ಠ ವಯೋಮಿತಿ 28 ವರ್ಷ ಆಗಿದೆ. ಕಾಯ್ದಿರಿಸಿದ ವರ್ಗದ ಅಭ್ಯರ್ಥಿಗಳಿಗೆ ವಯೋಮಿತಿಯಲ್ಲಿ 5 ವರ್ಷ ಸಡಿಲಿಕೆ ಇರುತ್ತದೆ.
ಅರ್ಜಿ ಶುಲ್ಕ: ಕರ್ನಾಟಕ ಬ್ಯಾಂಕ್ ನಲ್ಲಿ ಖಾಲಿ ಇರುವ ಪ್ರೊಬೇಷನರಿ ಆಫಿಸರ್ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಸಾಮಾನ್ಯ ವರ್ಗದ ಅಭ್ಯರ್ಥಿಗಳು 800 ರೂ. ಮತ್ತು ಎಸ್ಸಿ/ಎಸ್ಟಿ ಅಭ್ಯರ್ಥಿಗಳು 700 ರೂ. ಅರ್ಜಿ ಶುಲ್ಕ ಪಾವತಿಸಬೇಕು.
ಆಯ್ಕೆ ಪ್ರಕ್ರಿಯೆ: ಕರ್ನಾಟಕ ಬ್ಯಾಂಕ್ ನಲ್ಲಿ ಖಾಲಿ ಇರುವ ಪ್ರೊಬೇಷನರಿ ಆಫಿಸರ್ ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಆನ್ಲೈನ್ ಪರೀಕ್ಷೆ ಹಾಗೂ ಸಂದರ್ಶನ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.
CRPF RECRUITMENT 2023: ಕೇಂದ್ರೀಯ ಮೀಸಲು ಪೊಲೀಸ್ ಪಡೆಯಲ್ಲಿ 1458 ಹುದ್ದೆಗಳಿಗೆ ಅರ್ಜಿ ಆಹ್ವಾನ
ವೇತನ ವಿವರ: ಕರ್ನಾಟಕ ಬ್ಯಾಂಕ್ ನಲ್ಲಿ ಖಾಲಿ ಇರುವ ಪ್ರೊಬೇಷನರಿ ಆಫಿಸರ್ ಹುದ್ದೆಗೆ ಅರ್ಜಿ ಸಲ್ಲಿಸಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 84 ಸಾವಿರ ರೂ. ವೇತನ ದೊರೆಯಲಿದೆ.
ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ: ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಯ ಸಂಘದಡಿಯ ಮೊರಾರ್ಜಿ ದೇಸಾಯಿ/ಕಿತ್ತೂರು ರಾಣಿ ಚನ್ನಮ್ಮ/ಏಕಲವ್ಯ/ಅಟಲ್ ಬಿಹಾರಿ ವಾಜಪೇಯಿ/ಡಾ.ಬಿ.ಆರ್.ಅಂಬೇಡ್ಕರ್/ಇಂದಿರಾ ಗಾಂಧಿ ಶಾಲೆಗೆ 2023-24 ನೇ ಸಾಲಿನ 6 ನೇ ತರಗತಿ ಪ್ರವೇಶ ಪರೀಕ್ಷೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಮುಂದಿನ ಜ.5 ರಿಂದ ವಿದ್ಯಾರ್ಥಿಗಳು ತಮ್ಮ ಸಮೀಪದ ಮೇಲೆ ಸೂಚಿಸಲಾದ ವಸತಿ ಶಾಲೆಗಳಲ್ಲಿಯೇ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ.ಜ.22 ಅರ್ಜಿ ಸಲ್ಲಿಸಲು ಕೊನೆ ದಿನವಾಗಿದೆ. ವಿದ್ಯಾರ್ಥಿ ಆಧಾರ್ ಕಾರ್ಡ್, ಎಸ್‌ಎಟಿಎಸ್ ನಂಬರ್, ಶಾಲಾ ದೃಢೀಕರಣ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ವಿದ್ಯಾರ್ಥಿಯ ಇತ್ತೀಚಿÜನ ಭಾವಚಿತ್ರಗಳನ್ನು ಅರ್ಜಿಯೊಂದಿಗೆ ಸಲ್ಲಿಸಬೇಕಿದ್ದು ಪ್ರವೇಶ ಪರೀಕ್ಷೆ ಮಾ.12 ರಂದು ನಡೆಯಲಿದೆ.