Asianet Suvarna News Asianet Suvarna News

ಬ್ಯಾಂಕ್‌ ಉದ್ಯೋಗ ಬಯಸುವವರಿಗೆ ಸುವರ್ಣಾವಕಾಶ, ಕರ್ನಾಟಕ ಗ್ರಾಮೀಣ ಬ್ಯಾಂಕ್‌ನಲ್ಲಿ 586 ಹುದ್ದೆ

ಕರ್ನಾಟಕ ಗ್ರಾಮೀಣ ಬ್ಯಾಂಕ್ ನಲ್ಲಿ ಆಫೀಸ್ ಅಸಿಸ್ಟೆಂಟ್​, ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ಜೂನ್ 27ರೊಳಗಾಗಿ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು.

Karnataka Gramin Bank Recruitment 586 Vacancies gow
Author
First Published Jun 25, 2024, 11:06 AM IST | Last Updated Jun 25, 2024, 11:06 AM IST

ಕರ್ನಾಟಕ ಗ್ರಾಮೀಣ ಬ್ಯಾಂಕ್ ನಲ್ಲಿ ಆಫೀಸ್ ಅಸಿಸ್ಟೆಂಟ್​, ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ಜೂನ್ 27ರೊಳಗಾಗಿ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು.

ಕರ್ನಾಟಕ ಗ್ರಾಮೀಣ ಬ್ಯಾಂಕ್ ನಲ್ಲಿ ರಾಜ್ಯದಾದ್ಯಂತ ಖಾಲಿ ಇರುವ ಆಫೀಸ್ ಅಸಿಸ್ಟೆಂಟ್​, ಆಫೀಸರ್ ಒಟ್ಟು 586 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ಜೂನ್ 27ರೊಳಗಾಗಿ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು. ಹುದ್ದೆಗಳಿಗೆ ಬೇಕಾದ ವಯೋಮಿತಿ, ವಿದ್ಯಾರ್ಹತೆ, ಹುದ್ದೆಗಳ ವಿವರಗಳನ್ನು ಇಲ್ಲಿ ನೀಡಲಾಗಿದೆ.

ತನ್ನ ಅಗಾಧ ಸೌಂದರ್ಯಕ್ಕೆ ಅವಿವಾಹಿತಳಾಗಿಯೇ ಉಳಿದ ಜಗತ್ತಿನ ಅತ್ಯಂತ ಸುಂದರಿ!

ಕರ್ನಾಟಕ ಗ್ರಾಮೀಣ ಬ್ಯಾಂಕ್‌ನಲ್ಲಿ ಖಾಲಿ ಇರುವ ಒಟ್ಟು 586 ಆಫೀಸ್ ಅಸಿಸ್ಟೆಂಟ್​, ಆಫೀಸರ್ ಹುದ್ದೆಗಳಿಗೆ ನೇಮಕಾತಿಯನ್ನು ಘೋಷಿಸಿದೆ. ಆಸಕ್ತ ಅಭ್ಯರ್ಥಿಗಳು 2024ರ ಜೂನ್ 27ರೊಳಗಾಗಿ ವೆಬ್ ಸೈಟ್ ಮೂಲಕ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದು. ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಹುಡುಕುತ್ತಿರುವ ಆಸಕ್ತರಿಗೆ ಇದೊಂದು ಸುವರ್ಣ ಅವಕಾಶವಾಗಿದ್ದು, ಅಭ್ಯರ್ಥಿಗಳಿಗೆ ಆನ್ ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿದೆ.

ಹುದ್ದೆಯ ವಿವರ: ಕರ್ನಾಟಕ ಗ್ರಾಮೀಣ ಬ್ಯಾಂಕ್‌ನಲ್ಲಿ 386, ಕರ್ನಾಟಕ ವಿಕಾಸ್ ಗ್ರಾಮೀಣ ಬ್ಯಾಂಕ್ 200 ಸೇರಿ ಒಟ್ಟು 586 ಹುದ್ದೆಗಳಲ್ಲಿ ಆಫೀಸ್ ಅಸಿಸ್ಟೆಂಟ್ 200, ಆಫೀಸರ್ ಸ್ಕೇಲ್-1(ಅಸಿಸ್ಟೆಂಟ್ ಮ್ಯಾನೇಜರ್) 386 ಸ್ಥಾನಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕದಾದ್ಯಂತ ಹುದ್ದೆಗಳು ಖಾಲಿ ಇದೆ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ವೇತನ ನಿಗದಿಪಡಿಸಿಲ್ಲ. ಅನುಭವ ಮತ್ತು ಕಾರ್ಯಕ್ಷಮತೆಯ ಆಧಾರದ ಮೇಲೆ ಸಂಬಳ ಕೊಡಲಾಗುತ್ತದೆ.

ವಿಶ್ವೇಶ್ವರಯ್ಯ ಎಂಜಿನಿಯರಿಂಗ್‌ ವಿವಿ ಮೊದಲ ನಿರ್ದೇಶಕರಾಗಿ ಪಶ್ಚಿಮ ಬಂಗಾಳದ ಡಾ। ತ್ರಿಪಾಠಿ

ಅರ್ಹತೆ ಏನು?: ಕರ್ನಾಟಕ ಗ್ರಾಮೀಣ ಬ್ಯಾಂಕ್ ನೇಮಕಾತಿ ಅಧಿಸೂಚನೆ ಪ್ರಕಾರ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪದವಿ ಪೂರ್ಣಗೊಳಿಸಿರಬೇಕು. ಆಫೀಸ್ ಅಸಿಸ್ಟೆಂಟ್ ಹುದ್ದಗೆ 18ರಿಂದ 28 ವರ್ಷ ಮತ್ತು ಆಫೀಸರ್ ಸ್ಕೇಲ್-1 (ಅಸಿಸ್ಟೆಂಟ್ ಮ್ಯಾನೇಜರ್) ಹುದ್ದೆಗೆ 18ರಿಂದ 30 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಎಸ್‌ಸಿ ಮತ್ತು ಎಸ್‌ಟಿ ಅಭ್ಯರ್ಥಿ ಗಳಿಗೆ 5 ವರ್ಷ, ಒಬಿಸಿ (ಎನ್‌ಸಿಎಲ್ ) ಅಭ್ಯರ್ಥಿಗಳಿಗೆ 3ವರ್ಷ, ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳಿಗೆ 10 ವರ್ಷ ಸಡಿಲಿಕೆ ಇದೆ.

ಅರ್ಜಿ ಶುಲ್ಕ: ಆಫೀಸರ್ (ಸ್ಕೇಲ್ I) ಹುದ್ದೆಗಳಿಗೆ ಎಸ್‌ಸಿ ಮತ್ತು ಎಸ್ ಟಿ, ಪಿಡಬ್ಲ್ಯೂ ಬಿಡಿ ಅಭ್ಯರ್ಥಿಗಳಿಗೆ 175 ರು. ಇತರ ಅಭ್ಯರ್ಥಿಗಳಿಗೆ 850 ರು. ಶುಲ್ಕ ವಿಧಿಸಲಾಗಿದೆ. ಆಫೀಸ್ ಅಸಿಸ್ಟೆಂಟ್ (ಮಲ್ಟಿಪರ್ಪಸ್​) ಹುದ್ದೆಗಳಿಗೆ ಎಸ್ ಸಿ/ಎಸ್ ಟಿ/ಪಿಡಬ್ಲ್ಯೂ ಬಿಡಿ/ಇಎಸ್ ಎಂ/ಡಿಇಎಸ್ ಎಂ ಅಭ್ಯರ್ಥಿಗಳಿಗೆ 175 ರು. ಇತರ ಅಭ್ಯರ್ಥಿಗಳಿಗೆ 850 ರು. ಶುಲ್ಕ ವಿಧಿಸಲಾಗಿದ್ದು, ಆನ್‌ಲೈನ್ ಮೂಲಕ ಪಾವತಿ ಮಾಡಬೇಕಾಗುತ್ತದೆ.

ಅರ್ಜಿ ಪ್ರಕ್ರಿಯೆ: ಅಭ್ಯರ್ಥಿಗಳು ಆನ್​ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ನೇರವಾಗಿ ನೋಂದಣಿ ಮಾಡಿಕೊಳ್ಳಲು ವೆಬ್ ಸೈಟ್ https://ibpsonline.ibps.in/rrb13oamay24/ ಅನ್ನು ಕ್ಲಿಕ್ ಮಾಡಿ.

ಆಯ್ಕೆ ಪ್ರಕ್ರಿಯೆ: ಆಯ್ಕೆ ಪ್ರಕ್ರಿಯೆಯಲ್ಲಿ ಮೊದಲು ಅರ್ಹ ಅಭ್ಯರ್ಥಿಗಳಿಗೆ ಪೂರ್ವ ಭಾವಿ ಪರೀಕ್ಷೆ ನಡೆಸಲಾಗುತ್ತದೆ. ಬಳಿಕ ಮುಖ್ಯ ಪರೀಕ್ಷೆ ನಡೆಸಿ ಆಯ್ಕೆಯಾದವರಿಗೆ ಸಂದರ್ಶನ ನಡೆಸಲಾಗುತ್ತದೆ. ಉತ್ತಮ ಪ್ರದರ್ಶನ ನೀಡಿದ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

Latest Videos
Follow Us:
Download App:
  • android
  • ios