10ನೇ ತರಗತಿ ಉತ್ತೀರ್ಣರಾದವರಿಗೆ ಉದ್ಯೋಗಾವಕಾಶ: ತ್ವರೆ ಮಾಡಿ
ಕೊಟಕ್ ಮಹೀಂದ್ರಾ ಬ್ಯಾಂಕ್ ನಲ್ಲಿ ಕೆಲಸ ಮಾಡಲು ನಿರುದ್ಯೋಗಿಗಳಿಗೆ ಅವಕಾಶ. ಎರಡು ಬಗ್ಎ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಈ ಗ್ಗೆ ಇನ್ನಷ್ಟು ವಿವರ ಈ ಕೆಳಗಿನಂತಿದೆ ನೋಡಿ.
ಬೆಂಗಳೂರು, (ಸೆ.24): ಕೊಟಕ್ ಮಹೀಂದ್ರಾ ಬ್ಯಾಂಕ್ ನಲ್ಲಿ ಗಾರ್ಡ್ ಹಾಗೂ ಕ್ಲರ್ಕ್ ಹುದ್ದೆಗಳ ನೇಮಕಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
700 ಹುದ್ದೆಗಳ ನೇಮಕಾತಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಕ್ಟೋಬರ್ 10ರೊಳಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ.
ಜಾಬ್ಸ್ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
ವಿದ್ಯಾರ್ಹತೆ: ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯದಲ್ಲಿ 10 ಮತ್ತು 12ನೇ ತರಗತಿ ಪಾಸ್ ಆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ವಯೋಮಿತಿ: ಕನಿಷ್ಠ 18 ವರ್ಷ ವಯಸ್ಸಿನ ಹಾಗೂ ಗರಿಷ್ಠ 40 ವರ್ಷ ಒಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಕೊಟಕ್ ಮಹೀಂದ್ರಾ ಬ್ಯಾಂಕ್ ವೆಬ್ಸೈಟ್ ನಲ್ಲಿ ಈ ಬಗ್ಗೆ ಹೆಚ್ಚಿನ ಮಾಹಿತಿ ಲಭ್ಯವಿದೆ. ಆನ್ಲೈನ್ ಸಂದರ್ಶನ ಮೂಲಕ ಆಯ್ಕೆ ನಡೆಯಲಿದೆ.
ಇಲ್ಲಿಯೇ ಅಭ್ಯರ್ಥಿಗಳು ಅರ್ಜಿ ತುಂಬಬೇಕು. ಅರ್ಜಿಗೆ ಯಾವುದೇ ಶುಲ್ಕ ವಿಧಿಸಲಾಗಿಲ್ಲ.