Asianet Suvarna News Asianet Suvarna News

RBI Recruitment 2022: ಸ್ಪೆಷಲಿಸ್ಟ್ ಆಫೀಸರ್ ನೇಮಕಾತಿ ಅಧಿಸೂಚನೆ ಪ್ರಕಟಿಸಿದ ರಿಸರ್ವ್ ಬ್ಯಾಂಕ್

ಭಾರತೀಯ ರಿಸರ್ವ್ ಬ್ಯಾಂಕ್ ಶೀಘ್ರದಲ್ಲೇ 14  ಸ್ಪೆಷಲಿಸ್ಟ್ ಆಫೀಸರ್ ನೇಮಕಾತಿಗಾಗಿ ಅಧಿಸೂಚನೆಯನ್ನು ಬಿಡುಗಡೆ ಮಾಡಲಿದೆ.  ಫೆಬ್ರವರಿ 4, 2022 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.

RBI Recruitment 2022 For 14 Specialist Officer Posts gow
Author
Bengaluru, First Published Jan 3, 2022, 7:34 PM IST

ಬೆಂಗಳೂರು (3): ಭಾರತೀಯ ರಿಸರ್ವ್ ಬ್ಯಾಂಕ್ (Reserve Bank of India -RBI)  ಶೀಘ್ರದಲ್ಲೇ 14  ಸ್ಪೆಷಲಿಸ್ಟ್ ಆಫೀಸರ್ ನೇಮಕಾತಿಗಾಗಿ ಅಧಿಸೂಚನೆಯನ್ನು ಬಿಡುಗಡೆ ಮಾಡಲಿದೆ. ವರದಿಗಳ ಪ್ರಕಾರ, RBI ತನ್ನ ಅಧಿಕೃತ ವೆಬ್‌ಸೈಟ್‌ ನಲ್ಲಿ ಜನವರಿ 15, 2022 ರಂದು ನೇಮಕಾತಿ ಲಿಂಕ್ ಅನ್ನು  ಪ್ರಕಟಿಸಲಿದೆ. RBI ನೇಮಕಾತಿಯ ತಜ್ಞ ಅಧಿಕಾರಿ (Specialist Officer) ಹುದ್ದೆಗಳಿಗೆ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಫೆಬ್ರವರಿ 4, 2022ರವರೆಗೂ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಿದ ಅಭ್ಯರ್ತಿಗಳಿಗೆ ಆರ್‌ಬಿಐ ಮಾರ್ಚ್ 6 ರಂದು ಆನ್‌ಲೈನ್/ಲಿಖಿತ ಪರೀಕ್ಷೆ ನಡೆಸಲಿದೆ.

14 ತಜ್ಞ ಅಧಿಕಾರಿ ಹುದ್ದೆಯ ವಿವರ ಈ ಕೆಳಗಿನಂತಿದೆ: 
ಕಾನೂನು ಅಧಿಕಾರಿ (Law Officer) - 2
ಮ್ಯಾನೇಜರ್ (Civil) -6
ಮ್ಯಾನೇಜರ್ (Electrical) -3
ಗ್ರಂಥಾಲಯ ಪ್ರೊಫೆಷನಲ್ (Library Professional) -1
ವಾಸ್ತುಶಿಲ್ಪಿ (Architect) -1
ಪೂರ್ಣ ಸಮಯದ ಕ್ಯುರೇಟರ್ (Full-Time Curator on Contract) -14

ಅರ್ಹತೆಯ ಮಾನದಂಡಗಳು: ಆರ್‌ಬಿಐ  ಅಧಿಸೂಚನೆ ಬಿಡುಗಡೆ ಮಾಡಿದ ಬಳಿಕ ಅರ್ಜಿದಾರರು ಶಿಕ್ಷಣ ಅರ್ಹತೆ, ವಯಸ್ಸಿನ ಮಿತಿ ಮತ್ತು ಇತರ ಷರತ್ತುಗಳನ್ನು ಪರಿಶೀಲಿನೆ ನಡೆಸಬಹುದು.

ಆಯ್ಕೆ ಪ್ರಕ್ರಿಯೆ: ಆನ್‌ಲೈನ್ ಪರೀಕ್ಷೆಯ ಆಧಾರದ ಮೇಲೆ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಅರ್ಜಿ ಸಲ್ಲಿಸಲು ಇಚ್ಚಿಸುವ  ಅಭ್ಯರ್ಥಿಗಳು ಆಗಾಗ  https://www.rbi.org.in/ ಅಥವಾ https://opportunities.rbi.org.in/Scripts/Vacancies.aspx  ಗೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿರಿ.

SOUTH EASTERN RAILWAY RECRUITMENT 2022: ಸ್ಪೋರ್ಟ್ಸ್​ ಕೋಟಾದಡಿ ಖಾಲಿ ಹುದ್ದೆಗಳ ಭರ್ತಿಗೆ ಮುಂದಾದ ಆಗ್ನೇಯ ರೈಲ್ವೆ

ಸೌತ್​ ಇಂಡಿಯನ್​ ಬ್ಯಾಂಕ್ ಸ್ಪೆಷಲಿಸ್ಟ್​ ಆಫೀಸರ್ ಸೇರಿ ಹಲವು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಜ.4 ಕೊನೆ ದಿನ: ಸೌತ್​ ಇಂಡಿಯನ್​ ಬ್ಯಾಂಕ್​ ಲಿಮಿಟೆಡ್ (South Indian Bank Limited)​ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.  ಸ್ಪೆಷಲಿಸ್ಟ್​ ಆಫೀಸರ್ ಸೇರಿ ಒಟ್ಟು 28 ಹುದ್ದೆಗಳು ಖಾಲಿ ಇದ್ದು, ಬಿಇ, ಬಿ.ಟೆಕ್, ಬಿಎಸ್ಸಿ, ಬಿಎ, ಎಂಎಸ್ಸಿ, ಎಂಸಿಎ ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಈಗಾಗಲೇ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಅಭ್ಯರ್ಥಿಗಳು ಆನ್​ಲೈನ್ (Online)​ ಮೂಲಕ ಅರ್ಜಿ ಸಲ್ಲಿಸಲು ಜನವರಿ 4, 2022. ಕೊನೆಯ ದಿನಾಂಕವಾಗಿದೆ. ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ಅಧಿಕೃತ ವೆಬ್‌ತಾಣ www.southindianbank.com ಗೆ ಭೇಟಿ ನೀಡಬಹುದು.

ಶೈಕ್ಷಣಿಕ ವಿದ್ಯಾರ್ಹತೆ: South Indian Bank ನಲ್ಲಿ ಖಾಲಿ ಇರುವ ಸ್ಪೆಷಲಿಸ್ಟ್​ ಆಫೀಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಬೋರ್ಡ್​ನಿಂದ ಕಡ್ಡಾಯವಾಗಿ ಬಿಇ, ಬಿ.ಟೆಕ್, ಬಿಎಸ್ಸಿ, ಬಿಎ, ಎಂಎಸ್ಸಿ, ಎಂಸಿಎ ಪೂರ್ಣಗೊಳಿಸಿರಬೇಕು. ಮಾತ್ರವಲ್ಲ ಶೇ.60 ಅಂಕಗಳನ್ನು ಪಡೆದಿರಬೇಕು.

ಉದ್ಯೋಗದ ಸ್ಥಳ: ನೇಮಕಾತಿಯ ಸ್ಪೆಷಲಿಸ್ಟ್​ ಆಫೀಸರ್ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳು ಭಾರತದಲ್ಲಿ ಎಲ್ಲಿ ಬೇಕಾದರೂ ಕೆಲಸ ಮಾಡಲು ತಯಾರಿರಬೇಕು.

KAPL Recruitment 2022: ಮಾಸಿಕ 87,000 ರೂ ವೇತನ , ಆಯುಷ್ ವಿಭಾಗದಲ್ಲಿ ಮ್ಯಾನೇಜರ್

ವಯೋಮಿತಿ ಮತ್ತು ಅರ್ಜಿ ಶುಲ್ಕ: ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಗರಿಷ್ಠ 45 ವರ್ಷ ವಯಸ್ಸಾಗಿರಬೇಕು. ಹುದ್ದೆಗನುಗುಣವಾಗಿ ವಯೋಮಿತಿ ನಿಗದಿಯಾಗಿದೆ. ಅಭ್ಯರ್ಥಿಗಳು 100 ರೂ ಅರ್ಜಿ ಶುಲ್ಕ ಪಾವತಿಸಬೇಕಾಗುತ್ತದೆ.

ಆಯ್ಕೆ ಪ್ರಕ್ರಿಯೆ ಮತ್ತು ವೇತನ: ದಾಖಲಾತಿ ಪರಿಶೀಲನೆ ಮತ್ತು ವೈಯಕ್ತಿಕ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ತಿಂಗಳಿಗೆ 20,000 ರಿಂದ 80,000 ರೂ ವೇತನ ನೀಡಲಾಗುತ್ತದೆ.

Follow Us:
Download App:
  • android
  • ios