Asianet Suvarna News Asianet Suvarna News

RBI Recruitment 2022: ಪದವೀಧರರಿಗೆ RBIನಲ್ಲಿ ಉದ್ಯೋಗವಕಾಶ, ಇಂದೇ ಅರ್ಜಿ ಸಲ್ಲಿಸಿ

ಭಾರತೀಯ ರಿಸರ್ವ್ ಬ್ಯಾಂಕ್  ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ.   ಮಾರ್ಚ್ 8 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.

RBI recruitment 2022 Notification  for various Assistant  posts gow
Author
Bengaluru, First Published Feb 16, 2022, 1:57 PM IST

ಬೆಂಗಳೂರು (3): ಭಾರತೀಯ ರಿಸರ್ವ್ ಬ್ಯಾಂಕ್ (Reserve Bank of India -RBI)  ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ.  ಒಟ್ಟು 950 ಅಸಿಸ್ಟೆಂಟ್ (Assistant)​ ಹುದ್ದೆಗಳು ಖಾಲಿ ಇದ್ದು, ಈ ಹುದ್ದೆಗಳಿಗೆ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು  ಫೆಬ್ರವರಿ 17ರಿಂದ  ಮಾರ್ಚ್ 8ರವರೆಗೂ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.  ಹೆಚ್ಚಿನ ಮಾಹಿತಿಗಾಗಿ www.rbi.org.in ಗೆ ಭೇಟಿ ನೀಡಬಹುದು.

ಶೈಕ್ಷಣಿಕ ವಿದ್ಯಾರ್ಹತೆ: ಭಾರತೀಯ ರಿಸರ್ವ್ ಬ್ಯಾಂಕ್ ನಲ್ಲಿ ಖಾಲಿ ಇರುವ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ಪದವಿಯಲ್ಲಿ  50% ಅಂಕಗಳೊಂದಿಗೆ ಪಾಸಾಗಿರಬೇಕು. ಮಾಜಿ ಸೈನಿಕ ಅಭ್ಯರ್ಥಿಯು ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯದಿಂದ ಪದವೀಧರರಾಗಿರಬೇಕು ಅಥವಾ ಸಶಸ್ತ್ರ ಪಡೆಗಳ ಮೆಟ್ರಿಕ್ಯುಲೇಷನ್ ಅಥವಾ ಅದರ ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಮತ್ತು ಕನಿಷ್ಠ 15 ವರ್ಷಗಳ ರಕ್ಷಣಾ ಸೇವೆಯನ್ನು ಸಲ್ಲಿಸಿರಬೇಕು.

ವಯೋಮಿತಿ: ಭಾರತೀಯ ರಿಸರ್ವ್ ಬ್ಯಾಂಕ್ ನಲ್ಲಿ ಖಾಲಿ ಇರುವ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು 20 ರಿಂದ 28 ವರ್ಷದೊಳಗಿನಾಗಿರಬೇಕು.

Oil India Limited Recruitment 2022: ಗ್ರೇಡ್ III, V ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಆಯ್ಕೆ ಪ್ರಕ್ರಿಯೆ: ಭಾರತೀಯ ರಿಸರ್ವ್ ಬ್ಯಾಂಕ್ ನಲ್ಲಿ ಖಾಲಿ ಇರುವ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಆನ್‌ಲೈನ್ ಪರೀಕ್ಷೆಯ ಆಧಾರದ ಮೇಲೆ ಜೊತೆಗೆ ಭಾಷಾ ಪ್ರಾವೀಣ್ಯತೆ ಪರೀಕ್ಷೆ ಆದಾರದಲ್ಲಿ ಆಯ್ಕೆ ಪ್ರಕ್ರಿಯೆ ನಡೆಯಲಿದೆ. 

ಉದ್ಯೋಗದ ಸ್ಥಳ: ಭಾರತೀಯ ರಿಸರ್ವ್ ಬ್ಯಾಂಕ್ ನಲ್ಲಿ ಖಾಲಿ ಇರುವ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಸಲ್ಲಿಸಿ ಆಯ್ಕೆಯಾದ ಅಭ್ಯರ್ಥಿಗಳನ್ನು ಭಾರತದಲ್ಲಿ ಎಲ್ಲಿ ಬೇಕಾದರೂ ಪೋಸ್ಟಿಂಗ್ ಮಾಡಲಾಗುತ್ತದೆ.

ವೇತನ: ಭಾರತೀಯ ರಿಸರ್ವ್ ಬ್ಯಾಂಕ್ ನಲ್ಲಿ ಖಾಲಿ ಇರುವ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಸಲ್ಲಿಸಿ ಆಯ್ಕೆಯಾದ ಅಭ್ಯರ್ಥಿಗಳಿಗೆ ನಿಯಮಾನುಸಾರ ವೇತನ ದೊರೆಯಲಿದೆ.

NIMHANS Recruitment 2022: ಕಿರಿಯ ಸಂಶೋಧಕ ಸೇರಿ ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನ

ಖಾಲಿ ಇರುವ 500 ಹುದ್ದೆಗಳಿಗೆ ಬ್ಯಾಂಕ್ ಆಫ್ ಮಹಾರಾಷ್ಟ್ರ  ಅರ್ಜಿ ಆಹ್ವಾನ: ಬ್ಯಾಂಕ್ ಆಫ್ ಮಹಾರಾಷ್ಟ್ರ (Bank of Maharashtra - BOM) ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು  500 ಜನರಲಿಸ್ಟ್ ಅಧಿಕಾರಿ (Generalist Officer) ಸ್ಕೇಲ್ II, III ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ  ಮತ್ತು ಅರ್ಹ ಅಭ್ಯರ್ಥಿ ಫೆಬ್ರವರಿ 22ರೊಳಗೆ ಅರ್ಜಿ ಸಲ್ಲಿಸಬಹುದು . ವರ್ಗಾನುಸಾರ ಹುದ್ದೆಯನ್ನು ವರ್ಗೀಕರಣ ಮಾಡಲಾಗಿದ್ದು, ಹೆಚ್ಚಿನ ಮಾಹಿತಿಗೆ ಅಧಿಕೃತ ವೆಬ್‌ತಾಣ bankofmaharashtra.in ಗೆ ಭೇಟಿ ನಿಡಲು ಕೊರಲಾಗಿದೆ. 

ಶೈಕ್ಷಣಿಕ ವಿದ್ಯಾರ್ಹತೆ: ಬ್ಯಾಂಕ್ ಆಫ್ ಮಹಾರಾಷ್ಟ್ರದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಬೋರ್ಡ್/ವಿಶ್ವವಿದ್ಯಾಲಯ/ಸಂಸ್ಥೆಯಿಂದ ಯಾವುದೇ ಪದವಿ ವಿದ್ಯಾರ್ಹತೆಯನ್ನು ಶೇ.60ರಷ್ಟು ಅಂಕಗಳೊಂದಿಗೆ ಹೊಂದಿರುವ ಅಥವಾ ಸಿಎ/ಸಿಎಂಎ/ಸಿಎಫ್‌ಎ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಕೆ: ಬ್ಯಾಂಕ್ ಆಫ್ ಮಹಾರಾಷ್ಟ್ರ (ಬಿಒಎಂ) ನೇಮಕಾತಿಯ ಜನರಲಿಸ್ಟ್ ಅಧಿಕಾರಿ ಸ್ಕೇಲ್ II ಮತ್ತು ಸ್ಕೇಲ್   III ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ  ಅಭ್ಯರ್ಥಿಗಳು https://bankofmaharashtra.in ಭೇಟಿ ನೀಡಿ. ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ಫೆಬ್ರವರಿ 22,2022ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

Follow Us:
Download App:
  • android
  • ios