ಎಸ್‌ಬಿಐನಲ್ಲಿ 69 ಅಧಿಕಾರಿಗಳ ಹುದ್ದೆಗೆ ನೇಮಕಾತಿ
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ(ಎಸ್‌ಬಿಐ) 69 ಅಧಿಕಾರಿಗಳ ಹುದ್ದೆಗೆ ನೇಮಕಾತಿಯನ್ನು ಆರಂಭಿಸಿದೆ. ಒಟ್ಟು 69 ಹುದ್ದೆಗಳಿಗೆ ಈಗಾಗಲೇ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದೆ. ಸೆಪ್ಟೆಂಬರ್ 2 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲೊಂದಾದ, ಅತ್ಯಂತ ಪ್ರಮುಖ ಬ್ಯಾಂಕ್‌ನಲ್ಲಿ ಕೆಲಸ ಮಾಡಲು ಬಯಸುತ್ತಿರುವವರಿಗೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಉತ್ತಮವಾದ ಆಫರ್ ನೀಡಿದೆ. ಎಸ್ ಬಿಐ, ಸ್ಪೆಷಲಿಸ್ಟ್ ಕೇಡರ್ ಅಧಿಕಾರಿಗಳನ್ನು ನೇಮಕ ಮಾಡಿಕೊಳ್ಳಲು ಮುಂದಾಗಿದೆ. ಅದಕ್ಕಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.
ಎಸ್ ಬಿಐ ಬ್ಯಾಂಕ್ ನಲ್ಲಿ ಅಸಿಸ್ಟೆಂಟ್ ಮ್ಯಾನೇಜರ್, ಮಾರ್ಕೆಟಿಂಗ್ ಆ್ಯಂಡ್ ಕಮ್ಯುನಿಕೇಶನ್ ಅಸಿಸ್ಟೆಂಟ್ ಮ್ಯಾನೇಜರ್, ಡೆಪ್ಯೂಟಿ ಮ್ಯಾನೇಜರ್/ರಿಲೇಶನ್‌ಶಿಪ್ ಮ್ಯಾನೇಜರ್/ಪ್ರಾಡಕ್ಟ್ ಮ್ಯಾನೇಜರ್ ಮತ್ತು ಸರ್ಕಲ್ ಡಿಫೆನ್ಸ್ ಬ್ಯಾಂಕಿಂಗ್ ಸಲಹೆಗಾರ ಹುದ್ದೆ ಸೇರಿ ಒಟ್ಟು 69 ಖಾಲಿ ಇರುವ ಹುದ್ದೆಗಳನ್ನ ಭರ್ತಿ ಮಾಡಿಕೊಳ್ಳಲಾಗುತ್ತದೆ.
ಈಗಾಗಲೇ ಆಗಸ್ಟ್ 13 ರಿಂದಲೇ ನೇಮಕಾತಿ ಪ್ರಕ್ರಿಯೆ ಶುರುವಾಗಿದ್ದು, ಅಧಿಕೃತ ವೆಬ್‌ಸೈಟ್‌ನಲ್ಲಿ 69 ಹುದ್ದೆಗಳಿಗೆ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಕೆ ಮಾಡಬೇಕಿದ್ದು, sbi.co.in ನಲ್ಲಿ ಅರ್ಜಿ ಸಲ್ಲಿಸಬಹುದು. ಸೆಪ್ಟೆಂಬರ್ 2 ರವರೆಗೆ ಅರ್ಜಿ ಸಲ್ಲಿಕೆಗೆ ಕಾಲಾವಕಾಶವಿರಲಿದೆ.
ಶೇ.57 ಭಾರತೀಯರಿಗೆ ವರ್ಕ್ ಫ್ರಮ್ ಹೋಮ್‌ನಲ್ಲಿ ಹೆಚ್ಚು ಕೆಲಸದ ಭಾರ; ಸಮೀಕ್ಷಾ ವರದಿ!
ಅಸಿಸ್ಟೆಂಟ್ ಮ್ಯಾನೇಜರ್- ಇಂಜಿನಿಯರ್ (ಸಿವಿಲ್) 36 ಹುದ್ದೆಗಳು,ಅಸಿಸ್ಟೆಂಟ್ ಮ್ಯಾನೇಜರ್- ಇಂಜಿನಿಯರ್ (ಎಲೆಕ್ಟ್ರಿಕಲ್) 10 ಹುದ್ದೆಗಳು, ಡೆಪ್ಯೂಟಿ ಮ್ಯಾನೇಜರ್ (ಅಗ್ರಿ ಎಸ್ಪಿಎಲ್) 10 ಹುದ್ದೆಗಳು, ರಿಲೇಶನ್ ಶಿಪ್ ಮ್ಯಾನೇಜರ್ (ಒಎಂಪಿ) 6 ಹುದ್ದೆ, ಪ್ರಾಡಕ್ಟ್ ಮ್ಯಾನೇಜರ್ (ಒಎಂಪಿ) 2 ಹುದ್ದೆ, ಅಸಿಸ್ಟೆಂಟ್ ಮ್ಯಾನೇಜರ್ (ಮಾರ್ಕೆಟಿಂಗ್ & ಕಮ್ಯುನಿಕೇಷನ್) 4 - ಸರ್ಕಲ್ ಡಿಫೆನ್ಸ್ ಬ್ಯಾಂಕಿಂಗ್ ಸಲಹೆಗಾರ -1 ಹುದ್ದೆ ಸೇರಿ 69 ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲಾಗುವುದು. ಈ ಎಲ್ಲ ಹುದ್ದೆಗಳಿಗೆ ಉತ್ತಮವಾದ ಸ್ಯಾಲರಿ ಪ್ಯಾಕೇಜ್ ಇದೆ.
ಅಸಿಸ್ಟೆಂಟ್ ಮ್ಯಾನೇಜರ್- ಎಂಜಿನಿಯರ್ (ಸಿವಿಲ್) ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸಿವಿಲ್ ಇಂಜಿನಿಯರಿಂಗ್‌ನಲ್ಲಿ 60% ಅಥವಾ ಅದಕ್ಕಿಂತ ಹೆಚ್ಚಿನ ಅಂಕಗಳೊಂದಿಗೆ ಪದವಿ ಹೊಂದಿರಬೇಕು. ಹಾಗೇ ಅಸಿಸ್ಟೆಂಟ್ ಮ್ಯಾನೇಜರ್- ಎಂಜಿನಿಯರ್ (ಎಲೆಕ್ಟ್ರಿಕಲ್ಸ್) ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಲೆಕ್ಟ್ರಿಕಲ್ ಇಂಜಿನಿಯರಿಂಗ್‌ನಲ್ಲಿ 60% ಅಥವಾ ಅದಕ್ಕಿಂತ ಹೆಚ್ಚಿನ ಅಂಕಗಳೊಂದಿಗೆ ಪದವಿ ಹೊಂದಿರಬೇಕು. ಇನ್ನು ಅಸಿಸ್ಟೆಂಟ್ ಮ್ಯಾನೇಜರ್ (ಮಾರ್ಕೆಟಿಂಗ್ ಮತ್ತು ಕಮ್ಯುನಿಕೇಶನ್) ಹುದ್ದೆಗೆ ಅರ್ಜಿ ಹಾಕುವ ಅಭ್ಯರ್ಥಿಗಳು ಮಾರ್ಕೆಟಿಂಗ್ ನಲ್ಲಿ ಎಂಬಿಎ/ ಪಿಜಿಡಿಎಂ ಅಥವಾ ಅದಕ್ಕೆ ಸಮನಾದ ಸರ್ಕಾರದಿಂದ ಮಾನ್ಯತೆ ಪಡೆದ / ಅಂಗೀಕರಿಸಿದ ಸಂಸ್ಥೆಗಳಿಂದ ಮಾರ್ಕೆಟಿಂಗ್‌ನಲ್ಲಿ ಪರಿಣತಿ ಹೊಂದಿರಬೇಕು.
ಏರ್‌ಫೋರ್ಸ್‌ನಲ್ಲಿ ಗ್ರೂಪ್ ‘ಸಿ’ ನಾಗರಿಕ 282 ಹುದ್ದೆಗಳಿಗೆ ನೇಮಕಾತಿ
ರಿಲೇಷನ್ ಶಿಪ್ ಮ್ಯಾನೇಜರ್ (OMP) ಹುದ್ದೆಗೆ ಅಭ್ಯರ್ಥಿಗಳು B.E./ B. ಟೆಕ್ ಜೊತೆಗೆ MBA/ PGDM ಅಥವಾ ತತ್ಸಮಾನ ಪದವಿ (ಪೂರ್ಣ ಸಮಯದ ಕೋರ್ಸ್ ಆಗಿ) ಮಾರ್ಕೆಟಿಂಗ್ ನಲ್ಲಿ ವಿಶೇಷ ಪರಿಣಿತಿ ಹೊಂದಿರಬೇಕು. 01.07.2021 ಕ್ಕೆ ಅನ್ವಯ ಆಗುವಂತೆ ಕನಿಷ್ಠ 5 ವರ್ಷಗಳ ಅನುಭವ ಇರಬೇಕು. ಸರ್ಕಲ್ ಡಿಫೆನ್ಸ್ ಬ್ಯಾಂಕಿಂಗ್ ಸಲಹೆಗಾರ ಹುದ್ದೆಗೆ ಅರ್ಜಿ ಸಲ್ಲಿಸುವವರು ಭಾರತೀಯ ಸೇನೆಯ ನಿವೃತ್ತ ಮೇಜರ್ ಜನರಲ್ ಅಥವಾ ಬ್ರಿಗೇಡಿಯರ್ ಆಗಿರಬೇಕು, ಅಥವಾ ಭಾರತೀಯ ನೌಕಾಪಡೆ ಅಥವಾ ವಾಯುಪಡೆಯಲ್ಲೂ ಹೋಲಿಸಬಹುದಾದ ಶ್ರೇಣಿಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾಗಿರಬೇಕು.
ಈ ಹುದ್ದೆಗಳಿಗೆ ಅನುಸಾರವಾಗಿ ವಯೋಮಿತಿ ಯನ್ನು ನಿಗದಿಪಡಿಸಲಾಗಿದೆ. ಎಎಮ್ ಹುದ್ದೆಗಳಿಗೆ 30 ವರ್ಷ, ಡೆಪ್ಯುಟಿ ಮ್ಯಾನೇಜರ್, ರಿಲೇಶನ್ ಶಿಪ್ ಮ್ಯಾನೇಜರ್ (ಒಎಂಪಿ) ಮತ್ತು ಪ್ರಾಡಕ್ಟ್ ಮ್ಯಾನೇಜರ್ ಹುದ್ದೆಗಳಿಗಳಿ 25 ರಿಂದ 35 ವರ್ಷದೊಳಗಿನ ವರು ಅರ್ಜಿ ಸಲ್ಲಿಸಬಹುದು. ಹಾಗೇ ಸರ್ಕಲ್ ಡಿಫೆನ್ಸ್ ಬ್ಯಾಂಕಿಂಗ್ ಸಲಹೆಗಾರ ಹುದ್ದೆಗೆ 60 ವರ್ಷದವರು, ಸೇವೆಯಿಂದ ನಿವೃತ್ತಿ ಪಡೆದವರು ಅರ್ಜಿ ಸಲ್ಲಿಸಬಹುದು. ಅಸಿಸ್ಟೆಂಟ್ ಮ್ಯಾನೇಜರ್ (ಸಿವಿಲ್ & ಎಲೆಕ್ಟ್ರಿಕಲ್ಸ್) ಹುದ್ದೆಗೆ ಆನ್‌ಲೈನ್ ಟೆಸ್ಟ್ ನಡೆಸಿ, ಬಳಿಕ ಸಂದರ್ಶನ ಮಾಡಿ ಆಯ್ಕೆ ಮಾಡಲಾಗುತ್ತದೆ.
ಇನ್ನು ಅಸಿಸ್ಟೆಂಟ್ ಮ್ಯಾನೇಜರ್ (ಮಾರ್ಕೆಟಿಂಗ್ & ಕಮ್ಯುನಿಕೇಶನ್) , ಸರ್ಕಲ್ ಡಿಫೆನ್ಸ್ ಬ್ಯಾಂಕಿಂಗ್ ಸಲಹೆಗಾರ, ಡೆಪ್ಯುಟಿ ಮ್ಯಾನೇಜರ್, ರಿಲೇಶನ್ ಶಿಪ್ ಮ್ಯಾನೇಜರ್ (ಒಎಂಪಿ) ಮತ್ತು ಪ್ರಾಡಕ್ಟ್ ಮ್ಯಾನೇಜರ್ ಹುದ್ದೆಗಳಿಗೆ ಶಾರ್ಟ್‌ಲಿಸ್ಟ್ ಮತ್ತು ಸಂದರ್ಶನ ಆಧರಿಸಿ ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಸಾಮಾನ್ಯ ಅಭ್ಯರ್ಥಿಗಳ ಅರ್ಜಿ ಶುಲ್ಕ 750 ರೂಪಾಯಿ ಇದ್ರೆ, ಎಸ್ ಸಿ/ಎಸ್ಟಿ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕ ಇರುವುದಿಲ್ಲ.
BELನಲ್ಲಿ ಎಂಜಿನಿಯರ್ ಪದವೀಧರ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ