2 ಸಾವಿರ ಹುದ್ದೆಗಳ ನೇಮಕಾತಿಗೆ SBI ಅರ್ಜಿ ಆಹ್ವಾನ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಈ ಬಗ್ಗೆ ಇನ್ನಷ್ಟು ಮಾಹಿತಿ ಈ ಕೆಳಗಿನಂತಿದೆ. 
 

SBI PO recruitment 2020: Deadline to apply for 2000 vacancies for Probationary Officers rbj

ಬೆಂಗಳೂರು, (ನ.16):  ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) 2000 ಪ್ರೊಬೆಷನರಿ ಅಧಿಕಾರಿ (ಪಿಓ) ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ. 

ಆಸಕ್ತರು ಹಾಗೂ ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಡಿಸೆಂಬರ್ 4,2020 ರೊಳಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ. 

ವಿದ್ಯಾರ್ಹತೆ:  ಯಾವುದೇ ಪದವಿ ಮುಗಿಸಿದ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು.

ಜಾಬ್ಸ್ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

ವಯೋಮಿತಿ: ಏಪ್ರಿಲ್ 1,2020ರ ಅನ್ವಯ ಗರಿಷ್ಟ 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. -ಪ.ಜಾ/ಪ.ಪಂ ಅಭ್ಯರ್ಥಿಗಳಿಗೆ 5 ವರ್ಷ, ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಅಂಗವಿಕಲ (ಪ.ಜಾ/ಪ.ಪಂ) ಅಭ್ಯರ್ಥಿಗಳಿಗೆ 15 ವರ್ಷ, ಅಂಗವಿಕಲ (ಓಬಿಸಿ) ಅಭ್ಯರ್ಥಿಗಳಿಗೆ 12 ವರ್ಷ ಮತ್ತು ಅಂಗವಿಕಲ (ಸಾಮಾನ್ಯ/ಆರ್ಥಿಕವಾಗಿ ಹಿಂದುಳಿದ) ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.

ವೇತನ ಶ್ರೇಣಿ:   27,620  ರಿಂದ 42,020 ರೂ ತಿಂಗಳಿಗೆ. ಇದರ ಜೊತೆಗೆ ಡಿಎ, ಎಚ್‌ಆರ್‌ಎ, ಗುತ್ತಿಗೆ ಬಾಡಿಗೆ, ಸಿಸಿಎ, ವೈದ್ಯಕೀಯ ಮತ್ತು ಇತರ ಭತ್ಯೆಗಳು ಮತ್ತು ಅಗತ್ಯತೆಗಳುನ ಸಿಗಲಿದೆ.

ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಪ್ರಿಲಿಮಿನರಿ ಪರೀಕ್ಷೆ, ಮುಖ್ಯ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ: ಸಾಮಾನ್ಯ/ಆರ್ಥಿಕವಾಗಿ ಹಿಂದುಳಿದ/ ಓಬಿಸಿ ಅಭ್ಯರ್ಥಿಗಳು 750 ರೂ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದ್ದು, ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ಮತ್ತು ಅಂಗವಿಕಲ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಅರ್ಜಿ ಸಲ್ಲಿಸುವುದು ಹೇಗೆ?: ಎಸ್‌ಬಿಐ ನ ಅಧಿಕೃತ ವೆಬ್‌ಸೈಟ್‌ https://sbi.co.in/web/careers ಗೆ ಭೇಟಿ ನೀಡಿ. ನಂತರ ಅಲ್ಲಿ ನೀಡಲಾಗಿರುವ ಮಾಹಿತಿಯನ್ನು ಬಳಿಕ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಹಾಗೂ ಅರ್ಜಿ ಸಲ್ಲಿಸಬೇಕು. 

Latest Videos
Follow Us:
Download App:
  • android
  • ios