ಎಸ್‌ಬಿಐ ಬ್ಯಾಂಕಿನಲ್ಲಿ ಉದ್ಯೋಗವಕಾಶ: ಅರ್ಜಿ ಹಾಕಿ

ಸ್ಟೆಷಲಿಸ್ಟ್ ಕೇಡರ್ ಅಧಿಕಾರಿ ಹುದ್ದೆಗಳಿಗೆ SBI ಅರ್ಜಿ ಆಹ್ವಾನಿಸಿದೆ.  ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಸೆಪ್ಟೆಂಬರ್ 25,2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳಿಗೆ ನೀಡಲಾಗುವ ವೇತನ ಮತ್ತು ಇನ್ನಿತರೆ ಮಾಹಿತಿಗಾಗಿ ಮುಂದೆ ಓದಿ.

SBI Recruitment 2019 Apply for 477 sco posts

ಬೆಂಗಳೂರು, (ಸೆ.7): ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) 477 ಸ್ಟೆಷಲಿಸ್ಟ್ ಕೇಡರ್ ಅಧಿಕಾರಿ ಹುದ್ದೆಗಳನ್ನು ಭರ್ತಿ ಅರ್ಜಿ ಆಹ್ವಾನಿಸಿದೆ.

ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು 25 ಸೆಪ್ಟೆಂಬರ್  2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. 

ಶೈಕ್ಷಣಿಕ ವಿದ್ಯಾರ್ಹತೆ : ಹುದ್ದೆಗಳಿಗನುಸಾರ ಬಿ.ಇ,ಬಿ.ಟೆಕ್,ಪದವಿ,ಎಂ.ಎಸ್ಸಿ ಮತ್ತು ಎಂಸಿಎ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದಿರುವ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. 

ಜಾಬ್ಸ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ ಮಾಡಿ

ವಯೋಮಿತಿ: ಜೂನ್ 30,2019ರ ಅನ್ವಯ ಹುದ್ದೆಗಳಿಗನುಸಾರ ಗರಿಷ್ಟ 30,35,38 ಮತ್ತು 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. 

ವೇತನ ವಿವರ: ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಸಾರ ವೇತನವನ್ನು ನೀಡಲಾಗುವುದು. ಅಭ್ಯರ್ಥಿಗಳು ವೇತನದ ಬಗೆಗೆ ಹೆಚ್ಚಿನ ಮಾಹಿತಿಯನ್ನು ಪಡೆಯಲು ಈ ಕೆಳಗೆ ನೀಡಲಾಗಿರುವ ಅಧಿಸೂಚನೆಯನ್ನು ನೋಡಿ.

ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. ಅರ್ಜಿ ಶುಲ್ಕ: ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು, ಸಾಮಾನ್ಯ ಅಭ್ಯರ್ಥಿಗಳು 750/-ರೂ ಮತ್ತು ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ಅಭ್ಯರ್ಥಿಗಳು 125/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ.

 ಹುದ್ದೆಗಳ ಬಗೆಗಿನ ಅಧಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Latest Videos
Follow Us:
Download App:
  • android
  • ios