Asianet Suvarna News Asianet Suvarna News

SBI Recruitment 2022: ಸ್ಪೆಷಲಿಸ್ಟ್ ಕೇಡರ್ ಅಧಿಕಾರಿ ಹುದ್ದೆಗಳಿಗೆ ಎಸ್‌ಬಿಐ ನೇಮಕಾತಿ

ಭಾರತೀಯ ಸ್ಟೇಟ್ ಬ್ಯಾಂಕ್ ನಲ್ಲಿ ಖಾಲಿ ಇರುವ 4 ಸ್ಪೆಷಲಿಸ್ಟ್ ಕೇಡರ್ ಅಧಿಕಾರಿ  ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದ್ದು, ಮಾರ್ಚ್ 31 ಅರ್ಜಿ ಸಲ್ಲಿಸಲು ಕೊನೆಯ   ದಿನಾಂಕವಾಗಿದೆ.

SBI Recruitment 2022 notification for specialist cadre officers post gow
Author
Bengaluru, First Published Mar 10, 2022, 5:41 PM IST

ಬೆಂಗಳೂರು(ಮಾ.10): ಭಾರತೀಯ ಸ್ಟೇಟ್ ಬ್ಯಾಂಕ್ (State Bank of India) ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.   ಒಟ್ಟು 4  ಸ್ಪೆಷಲಿಸ್ಟ್ ಕೇಡರ್ ಅಧಿಕಾರಿ (Specialist Cadre Officer) ಹುದ್ದೆಗಳು ಖಾಲಿ ಇದ್ದು,   ಪದವಿ ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಈಗಾಗಲೇ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಅಭ್ಯರ್ಥಿಗಳು ಆನ್​ಲೈನ್ (Online)​ ಮೂಲಕ ಅರ್ಜಿ ಸಲ್ಲಿಸಲು  ಮಾರ್ಚ್ 31 ಕೊನೆಯ ದಿನಾಂಕವಾಗಿದೆ. ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು sbi.co.in ಗೆ ಭೇಟಿ ನೀಡಿ ಮಾಹಿತಿ ಪಡೆದುಕೊಳ್ಳಬಹುದಾಗಿದೆ.

ಒಟ್ಟು 4 ಸ್ಪೆಷಲಿಸ್ಟ್ ಕೇಡರ್ ಅಧಿಕಾರಿ ಹುದ್ದೆಗಳ ಮಾಹಿತಿ ಇಂತಿದೆ:
ಮುಖ್ಯ ಮಾಹಿತಿ ಅಧಿಕಾರಿ(  Chief Information Officer​) - 1 ಹುದ್ದೆ
ಮುಖ್ಯ ತಂತ್ರಜ್ಞಾನ ಅಧಿಕಾರಿ (Chief Technology Officer) - 1 ಹುದ್ದೆ
ಉಪ ಮುಖ್ಯ ತಂತ್ರಜ್ಞಾನ ಅಧಿಕಾರಿ (Deputy Chief Technology Officer) - 1 ಹುದ್ದೆ
ಉಪ ಮುಖ್ಯ ತಂತ್ರಜ್ಞಾನ ಅಧಿಕಾರಿ (Deputy Chief Technology Officer) - 1 ಹುದ್ದೆ

 

ಶೈಕ್ಷಣಿಕ ವಿದ್ಯಾರ್ಹತೆ: ಸ್ಟೇಟ್​ ಬ್ಯಾಂಕ್​ ಆಫ್​ ಇಂಡಿಯಾದ ಸ್ಪೆಷಲಿಸ್ಟ್ ಕೇಡರ್ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಬೋರ್ಡ್​ನಿಂದ  ಯಾವುದೇ  ಹುದ್ದೆಗೆ ಅನುಸಾರ ವಿದ್ಯಾರ್ಹತೆ ಪಡೆದಿರಬೇಕು.

ಉಪ/ಮುಖ್ಯ ಮಾಹಿತಿ ಅಧಿಕಾರಿಗಳು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಯು ಸಾಫ್ಟ್‌ವೇರ್ ಎಂಜಿನಿಯರಿಂಗ್ ಅಥವಾ ಸಂಬಂಧಿತ ಕ್ಷೇತ್ರದಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿಯನ್ನು ಮಾಡಿರಬೇಕು. MBA ಆಗಿದ್ದರೆ ಆದ್ಯತೆ ಇದೆ.

ಉಪ/ಮುಖ್ಯ ತಂತ್ರಜ್ಞಾನ ಅಧಿಕಾರಿ  ಹುದ್ದೆಗಳಿಗೆ  ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಯು ಸಾಫ್ಟ್‌ವೇರ್ ಎಂಜಿನಿಯರಿಂಗ್ ಅಥವಾ ಸಂಬಂಧಿತ ಕ್ಷೇತ್ರದಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿಯನ್ನು  ಮಾಡಿರಬೇಕು. MBA ಆಗಿದ್ದರೆ ಆದ್ಯತೆ ಇದೆ.

KARNATAKA HIGH COURT RECRUITMENT 2022: ರಾಜ್ಯ ಹೈಕೋರ್ಟ್ ನಲ್ಲಿ ಸ್ಟೆನೋಗ್ರಾಫರ್ ಹುದ್ದೆಗೆ ನೇಮಕಾತಿ

ಅರ್ಜಿ ಶುಲ್ಕ: ಸ್ಟೇಟ್​ ಬ್ಯಾಂಕ್​ ಆಫ್​ ಇಂಡಿಯಾದ ಸ್ಪೆಷಲಿಸ್ಟ್ ಕೇಡರ್ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ  ಸಾಮಾನ್ಯ/ಒಬಿಸಿ/EWS ಅಭ್ಯರ್ಥಿಗಳಿಗೆ 750 ರೂ. ಅರ್ಜಿ ಶುಲ್ಕ ಮತ್ತು SC/ST/PWD ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ವಯೋಮಿತಿ : ಸ್ಟೇಟ್​ ಬ್ಯಾಂಕ್​ ಆಫ್​ ಇಂಡಿಯಾದ ಸ್ಪೆಷಲಿಸ್ಟ್ ಕೇಡರ್ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ  ಅಭ್ಯರ್ಥಿಗಳ ವಯಸ್ಸು ಹುದ್ದೆಗೆ ಅನುಸಾರವಾಗಿ ವಿಂಗಡಿಸಲಾಗಿದೆ. ಉಪ/ಮುಖ್ಯ ಮಾಹಿತಿ ಅಧಿಕಾರಿ ಹುದ್ದೆಗೆ ಗರಿಷ್ಠ 55 ವರ್ಷ ನಿಗದಿಯಾಗಿದೆ. ಉಪ/ಮುಖ್ಯ ತಂತ್ರಜ್ಞಾನ ಅಧಿಕಾರಿ  ಹುದ್ದೆಗಳಿಗೆ ಗರಿಷ್ಠ 45 ವರ್ಷ ನಿಗದಿಯಾಗಿದೆ. 

ಆಯ್ಕೆ ಪ್ರಕ್ರಿಯೆ: ಸ್ಟೇಟ್​ ಬ್ಯಾಂಕ್​ ಆಫ್​ ಇಂಡಿಯಾದ ಸ್ಪೆಷಲಿಸ್ಟ್ ಕೇಡರ್ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು  ಶಾರ್ಟ್ ಲಿಸ್ಟ್  ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

Kolar Anganwadi Recruitment 2022: ಕೋಲಾರ ಜಿಲ್ಲೆಯ ಅಂಗನವಾಡಿ ಹುದ್ದೆಗಳ ನೇಮಕಾತಿ

Follow Us:
Download App:
  • android
  • ios