Asianet Suvarna News Asianet Suvarna News

South Indian Bank Recruitment 2022: ಸ್ಪೆಷಲಿಸ್ಟ್​ ಆಫೀಸರ್ ಸೇರಿ ಹಲವು ಹುದ್ದೆಗಳಿಗೆ ಅರ್ಜಿಆಹ್ವಾನ

ಸೌತ್​ ಇಂಡಿಯನ್​ ಬ್ಯಾಂಕ್​ ಲಿಮಿಟೆಡ್ ​ ಖಾಲಿ ಇರುವ ಸ್ಪೆಷಲಿಸ್ಟ್​ ಆಫೀಸರ್ ಸೇರಿ ಒಟ್ಟು 28 ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.   ಅರ್ಜಿ ಸಲ್ಲಿಸಲು ಜನವರಿ 4, 2022 ಕೊನೆಯ ದಿನಾಂಕವಾಗಿದೆ. 

South Indian Bank Recruitment  for Various Post apply now gow
Author
Bengaluru, First Published Dec 31, 2021, 2:43 PM IST

ಬೆಂಗಳೂರು(ಡಿ.31): ಸೌತ್​ ಇಂಡಿಯನ್​ ಬ್ಯಾಂಕ್​ ಲಿಮಿಟೆಡ್ (South Indian Bank Limited)​ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.  ಸ್ಪೆಷಲಿಸ್ಟ್​ ಆಫೀಸರ್ ಸೇರಿ ಒಟ್ಟು 28 ಹುದ್ದೆಗಳು ಖಾಲಿ ಇದ್ದು, ಬಿಇ, ಬಿ.ಟೆಕ್, ಬಿಎಸ್ಸಿ, ಬಿಎ, ಎಂಎಸ್ಸಿ, ಎಂಸಿಎ ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಈಗಾಗಲೇ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಅಭ್ಯರ್ಥಿಗಳು ಆನ್​ಲೈನ್ (Online)​ ಮೂಲಕ ಅರ್ಜಿ ಸಲ್ಲಿಸಲು ಜನವರಿ 4, 2022. ಕೊನೆಯ ದಿನಾಂಕವಾಗಿದೆ. ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ಅಧಿಕೃತ ವೆಬ್‌ತಾಣ www.southindianbank.com ಗೆ ಭೇಟಿ ನೀಡಬಹುದು.

ಶೈಕ್ಷಣಿಕ ವಿದ್ಯಾರ್ಹತೆ: South Indian Bank ನಲ್ಲಿ ಖಾಲಿ ಇರುವ ಸ್ಪೆಷಲಿಸ್ಟ್​ ಆಫೀಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಬೋರ್ಡ್​ನಿಂದ ಕಡ್ಡಾಯವಾಗಿ ಬಿಇ, ಬಿ.ಟೆಕ್, ಬಿಎಸ್ಸಿ, ಬಿಎ, ಎಂಎಸ್ಸಿ, ಎಂಸಿಎ ಪೂರ್ಣಗೊಳಿಸಿರಬೇಕು. ಮಾತ್ರವಲ್ಲ ಶೇ.60 ಅಂಕಗಳನ್ನು ಪಡೆದಿರಬೇಕು.

ಉದ್ಯೋಗದ ಸ್ಥಳ: ನೇಮಕಾತಿಯ ಸ್ಪೆಷಲಿಸ್ಟ್​ ಆಫೀಸರ್ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳು ಭಾರತದಲ್ಲಿ ಎಲ್ಲಿ ಬೇಕಾದರೂ ಕೆಲಸ ಮಾಡಲು ತಯಾರಿರಬೇಕು.

ವಯೋಮಿತಿ ಮತ್ತು ಅರ್ಜಿ ಶುಲ್ಕ: ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಗರಿಷ್ಠ 45 ವರ್ಷ ವಯಸ್ಸಾಗಿರಬೇಕು. ಹುದ್ದೆಗನುಗುಣವಾಗಿ ವಯೋಮಿತಿ ನಿಗದಿಯಾಗಿದೆ. ಅಭ್ಯರ್ಥಿಗಳು 100 ರೂ ಅರ್ಜಿ ಶುಲ್ಕ ಪಾವತಿಸಬೇಕಾಗುತ್ತದೆ.

ಆಯ್ಕೆ ಪ್ರಕ್ರಿಯೆ ಮತ್ತು ವೇತನ: ದಾಖಲಾತಿ ಪರಿಶೀಲನೆ ಮತ್ತು ವೈಯಕ್ತಿಕ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ತಿಂಗಳಿಗೆ 20,000 ರಿಂದ 80,000 ರೂ ವೇತನ ನೀಡಲಾಗುತ್ತದೆ.

SIMS SHIVAMOGGA RECRUITMENT 2022: ವಿವಿಧ ಹುದ್ದೆಗಳ ಭರ್ತಿಗೆ ಕರೆ ನೀಡಿದ ವೈದ್ಯಕೀಯ ವಿಜ್ಞಾನ ಸಂಸ್ಥೆ

SBIನಲ್ಲಿ ಮ್ಯಾನೇಜರ್ ಸೇರಿ ಹಲವು ಹುದ್ದೆಗಳಿಗೆ ಇಂದೇ ಅರ್ಜಿ ಸಲ್ಲಿಸಿ: ಸ್ಟೇಟ್​ ಬ್ಯಾಂಕ್​ ಆಫ್​ ಇಂಡಿಯಾ (State Bank of India) ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.  ಮ್ಯಾನೇಜರ್ (Manager), ಡೆಪ್ಯುಟಿ ಮ್ಯಾನೇಜರ್(deputy manager), ಚೀಫ್​​ ಮ್ಯಾನೇಜರ್ (Chief Manager)  ಹೀಗೆ ಒಟ್ಟು 15 ಹುದ್ದೆಗಳು ಖಾಲಿ ಇದ್ದು, ಬಿಇ, ಬಿ.ಟೆಕ್​, LLB, CA, ಎಂಬಿಎ ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಈಗಾಗಲೇ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಅಭ್ಯರ್ಥಿಗಳು ಆನ್​ಲೈನ್ (Online)​ ಮೂಲಕ ಅರ್ಜಿ ಸಲ್ಲಿಸಲು ಜನವರಿ 13 ಕೊನೆಯ ದಿನಾಂಕವಾಗಿದೆ. ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು sbi.co.in ಗೆ ಭೇಟಿ ನೀಡಿ ಮಾಹಿತಿ ಪಡೆದುಕೊಳ್ಳಬಹುದಾಗಿದೆ.

ಒಟ್ಟು 15 ಹುದ್ದೆಗಳ ಮಾಹಿತಿ ಇಂತಿದೆ:
ಚೀಫ್​​ ಮ್ಯಾನೇಜರ್ -2
ಮ್ಯಾನೇಜರ್-6
ಡೆಪ್ಯುಟಿ ಮ್ಯಾನೇಜರ್-7

NIFT Recruitment 2022: 190 ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ಅರ್ಜಿ ಆಹ್ವಾನಿಸಿದ ಫ್ಯಾಷನ್

ವಿದ್ಯಾರ್ಹತೆ: ಸ್ಟೇಟ್​ ಬ್ಯಾಂಕ್​ ಆಫ್​ ಇಂಡಿಯಾದ ವಿವಧ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಬೋರ್ಡ್​ನಿಂದ ಕಡ್ಡಾಯವಾಗಿ ಬಿಇ, ಬಿ.ಟೆಕ್​, LLB, CA, ಎಂಬಿಎ ಪೂರ್ಣಗೊಳಿಸಿರಬೇಕು.

ಅರ್ಜಿ ಶುಲ್ಕ: ಮ್ಯಾನೇಜರ್, ಡೆಪ್ಯುಟಿ ಮ್ಯಾನೇಜರ್, ಚೀಫ್​​ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸಾಮಾನ್ಯ/ಒಬಿಸಿ/EWS ಅಭ್ಯರ್ಥಿಗಳಿಗೆ 750 ರೂ. ಅರ್ಜಿ ಶುಲ್ಕ ಮತ್ತು SC/ST/PWD ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ವಯೋಮಿತಿ ಮತ್ತು ವೇತನ: ಸ್ಟೇಟ್​ ಬ್ಯಾಂಕ್​ ಆಫ್​ ಇಂಡಿಯಾದ ವಿವಧ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು 45 ವರ್ಷ ಮೀರಿರಬಾರದು. ಮತ್ತು ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 48,170 ರಿಂದ 89,890 ರೂ ವೇತನ ನಿಗದಿಯಾಗಿದೆ.

ಆಯ್ಕೆ ಪ್ರಕ್ರಿಯೆ: ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಶಾರ್ಟ್​​ಲಿಸ್ಟಿಂಗ್​ ಮಾಡಿ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ. ಆಯ್ಕೆಯಾದ ಅಭ್ಯರ್ಥಿಗಳು ಮುಂಬೈನಲ್ಲಿ ಕೆಲಸ ನಿರ್ವಹಿಸಬೇಕಾಗುತ್ತದೆ.

Follow Us:
Download App:
  • android
  • ios