SBI Recruitment 2022: ಸ್ಪೆಷಲಿಸ್ಟ್ ಕೇಡರ್ ಅಧಿಕಾರಿ ಹುದ್ದೆಗಳಿಗೆ ನೇಮಕಾತಿ
ಭಾರತೀಯ ಸ್ಟೇಟ್ ಬ್ಯಾಂಕ್ ನಲ್ಲಿ ಖಾಲಿ ಇರುವ 8 ಸ್ಪೆಷಲಿಸ್ಟ್ ಕೇಡರ್ ಅಧಿಕಾರಿ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದ್ದು, ಏಪ್ರಿಲ್ 28 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ.
ಬೆಂಗಳೂರು(ಏ.13): ಭಾರತೀಯ ಸ್ಟೇಟ್ ಬ್ಯಾಂಕ್ (State Bank of India) ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 8 ಸ್ಪೆಷಲಿಸ್ಟ್ ಕೇಡರ್ ಅಧಿಕಾರಿ (Specialist Cadre Officer) ಹುದ್ದೆಗಳು ಖಾಲಿ ಇದ್ದು, ಪದವಿ ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಈಗಾಗಲೇ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಅಭ್ಯರ್ಥಿಗಳು ಆನ್ಲೈನ್ (Online) ಮೂಲಕ ಅರ್ಜಿ ಸಲ್ಲಿಸಲು ಏಪ್ರಿಲ್ 28 ದಿನಾಂಕವಾಗಿದೆ. ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು sbi.co.in ಗೆ ಭೇಟಿ ನೀಡಿ ಮಾಹಿತಿ ಪಡೆದುಕೊಳ್ಳಬಹುದಾಗಿದೆ.
ಒಟ್ಟು 8 ಹುದ್ದೆಗಳ ಮಾಹಿತಿ ಇಂತಿದೆ
ವ್ಯವಸ್ಥಾಪಕ (Manager) :2 ಹುದ್ದೆಗಳು
ಸಲಹೆಗಾರ (Advisor) : 4 ಹುದ್ದೆಗಳು
ಹಿರಿಯ ಕಾರ್ಯನಿರ್ವಾಹಕ (Senior Executive):2 ಹುದ್ದೆಗಳು
KPSC RDWSD RECRUITMENT 2022 ಒಟ್ಟು 136 ಕಿರಿಯ ಇಂಜಿನಿಯರ್ ಹುದ್ದೆಗೆ ನೇಮಕಾತಿ
ಶೈಕ್ಷಣಿಕ ವಿದ್ಯಾರ್ಹತೆ: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಸ್ಪೆಷಲಿಸ್ಟ್ ಕೇಡರ್ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಬೋರ್ಡ್ನಿಂದ ಯಾವುದೇ ಹುದ್ದೆಗೆ ಅನುಸಾರ ವಿದ್ಯಾರ್ಹತೆ ಪಡೆದಿರಬೇಕು.
ಅರ್ಜಿ ಶುಲ್ಕ: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಸ್ಪೆಷಲಿಸ್ಟ್ ಕೇಡರ್ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸಾಮಾನ್ಯ/ಒಬಿಸಿ/EWS ಅಭ್ಯರ್ಥಿಗಳಿಗೆ 750 ರೂ. ಅರ್ಜಿ ಶುಲ್ಕ ಮತ್ತು SC/ST/PWD ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ವಯೋಮಿತಿ : ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಸ್ಪೆಷಲಿಸ್ಟ್ ಕೇಡರ್ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು ಹುದ್ದೆಗೆ ಅನುಸಾರವಾಗಿ ಗರಿಷ್ಠ 63 ವರ್ಷ ನಿಗದಿಯಾಗಿದೆ. ಹಿರಿಯ ಕಾರ್ಯನಿರ್ವಾಹಕ ಹುದ್ದೆಗೆ ಗರಿಷ್ಠ 32 ವರ್ಷ ನಿಗದಿಪಡಿಲಾಗಿದೆ.
ಆಯ್ಕೆ ಪ್ರಕ್ರಿಯೆ: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಸ್ಪೆಷಲಿಸ್ಟ್ ಕೇಡರ್ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಶಾರ್ಟ್ ಲಿಸ್ಟ್ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
SOUTH WESTERN RAILWAY RECRUITMENT 2022: ಗೂಡ್ಸ್ ಟ್ರೈನ್ ಮ್ಯಾನೇಜರ್ ಹುದ್ದೆಗಳ ನೇಮಕಾತಿ
Bank of Baroda ಕೃಷಿ ಮಾರುಕಟ್ಟೆ ಅಧಿಕಾರಿ ಹುದ್ದೆಗೆ ನೇಮಕಾತಿ: ಬ್ಯಾಂಕ್ ಆಫ್ ಬರೋಡಾ (Bank of Baroda) ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆ ಹೊರಡಿಸಿದೆ. ಒಟ್ಟು 26 ಕೃಷಿ ಮಾರುಕಟ್ಟೆ ಅಧಿಕಾರಿ (Agriculture Marketing Officer ) ಹುದ್ದೆಗಳು ಖಾಲಿ ಇದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್ಲೈನ್ (Online) ಮೂಲಕ ಅರ್ಜಿ ಸಲ್ಲಿಸಲು ಎಪ್ರಿಲ್ 26 ಕೊನೆಯ ದಿನಾಂಕವಾಗಿದೆ. ಹೆಚ್ಚಿನ ಮಾಹಿತಿಗಾಗಿ ಆಸಕ್ತರು ಅಧಿಕೃತ ವೆಬ್ಸೈಟ್ https://www.bankofbaroda.in/ ಗೆ ಭೇಟಿ ನೀಡಬಹುದು.
ಶೈಕ್ಷಣಿಕ ವಿದ್ಯಾರ್ಹತೆ: ಬ್ಯಾಂಕ್ ಆಫ್ ಬರೋಡಾದ ಖಾಲಿ ಇರುವ ಕೃಷಿ ಮಾರುಕಟ್ಟೆ ಅಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಸಂಸ್ಥೆಯಿಂದ ಹುದ್ದೆಗೆ ಅನುಸಾರವಾಗಿ ಕೃಷಿ/ತೋಟಗಾರಿಕೆ/ಪಶುಸಂಗೋಪನೆ/ಪಶುವೈದ್ಯಕೀಯ ವಿಜ್ಞಾನ/ ಡೈರಿ ವಿಜ್ಞಾನ/ ಮೀನುಗಾರಿಕೆ ವಿಜ್ಞಾನ/ ಮೀನುಗಾರಿಕೆ/ ಕೃಷಿಯಲ್ಲಿ ಪದವಿ. ಮಾರ್ಕೆಟಿಂಗ್ ಮತ್ತು ಸಹಕಾರ/ ಸಹಕಾರ ಮತ್ತು ಬ್ಯಾಂಕಿಂಗ್/ ಕೃಷಿ-ಅರಣ್ಯ/ಅರಣ್ಯ/ಕೃಷಿ ಜೈವಿಕ ತಂತ್ರಜ್ಞಾನ/ ಆಹಾರ ವಿಜ್ಞಾನ/ ಕೃಷಿ ವ್ಯವಹಾರ ನಿರ್ವಹಣೆ/ಆಹಾರ ತಂತ್ರಜ್ಞಾನ/ ಡೈರಿ ತಂತ್ರಜ್ಞಾನ/ ಕೃಷಿ ಇಂಜಿನಿಯರಿಂಗ್/ ರೇಷ್ಮೆ ಮತ್ತು 02 ವರ್ಷಗಳ ಪೂರ್ಣ ಸಮಯದ ಸ್ನಾತಕೋತ್ತರ ಪದವಿ ಅಥವಾ PGDM/MBA ನಲ್ಲಿ ಡಿಪ್ಲೊಮಾ ಮಾಡಿರಬೇಕು. ಜೊತೆಗೆ 3 ವರ್ಷಗಳ ಅನುಭವ ಹೊಂದಿರಬೇಕು.