Asianet Suvarna News Asianet Suvarna News

Vijayapura Cooperative Bank Recruitment 2022: ವಿಜಯಪುರ ಸಹಕಾರಿ ಬ್ಯಾಂಕ್ ನೇಮಕಾತಿ

ವಿಜಯಪುರ ಜಿಲ್ಲೆಯಲ್ಲಿರುವ ಸರ್ಕಾರಿ ನೌಕರರ ಸಹಕಾರಿ ಬ್ಯಾಂಕ್ ನಿಯಮಿತ ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಸಲ್ಲಿಸಲು ಮಾರ್ಚ್ 25 ಕೊನೆಯ ದಿನವಾಗಿದೆ.

Vijayapura Cooperative Bank  Recruitment 2022 notification for Junior Assistants and Typists Posts gow
Author
Bengaluru, First Published Mar 12, 2022, 9:22 PM IST

ಬೆಂಗಳೂರು(ಮಾ.12): ವಿಜಯಪುರ (Vijayapura) ಜಿಲ್ಲೆಯಲ್ಲಿರುವ ಸರ್ಕಾರಿ ನೌಕರರ ಸಹಕಾರಿ ಬ್ಯಾಂಕ್ ನಿಯಮಿತದಲ್ಲಿ (Government Employees Cooperative Bank) ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಕಿರಿಯ ಸಹಾಯಕರು (Junior Assistants),  ಬೆರಳಚ್ಚುಗಾರರು (Typists) ಸೇರಿ ಒಟ್ಟು 9 ಹುದ್ದೆಗಳು ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಮಾರ್ಚ್ 25 ಕೊನೆಯ ದಿನವಾಗಿದೆ.

ಶೈಕ್ಷಣಿಕ ವಿದ್ಯಾರ್ಹತೆ: ವಿಜಯಪುರ ಜಿಲ್ಲೆಯಲ್ಲಿರುವ ಸರ್ಕಾರಿ ನೌಕರರ ಸಹಕಾರಿ ಬ್ಯಾಂಕ್ ನಿಯಮಿತ ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಪದವಿಯಲ್ಲಿ ಎಲ್ಲಾ ವರ್ಷ/ ಸೆಮಿಸ್ಟರ್ ಗಳ ಸರಾಸರಿ ಕನಿಷ್ಠ 50% ಅಂಕಗಳೊಂದಿಗೆ ಪದವಿ ಪಡೆದಿರಬೇಕು. ಕಂಪ್ಯೂಟರ್ ಜ್ಞಾನ ಕಡ್ಡಾಯವಾಗಿ ಹೊಂದಿರಬೇಕು ಹಾಗೂ ಬಿ.ಕಾಂ/ ಸಹಕಾರ ವಿಷಯದಲ್ಲಿ ಪದವಿ ಪಡೆದವರಿಗೆ ಆದ್ಯತೆ ನೀಡಲಾಗುವುದು.

ವಯೋಮಿತಿ: ವಿಜಯಪುರ ಜಿಲ್ಲೆಯಲ್ಲಿರುವ ಸರ್ಕಾರಿ ನೌಕರರ ಸಹಕಾರಿ ಬ್ಯಾಂಕ್ ನಿಯಮಿತ ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಕನಿಷ್ಠ 18 ವರ್ಷ ನಿಗದಿಪಡಿಸಲಾಗಿದೆ ಹಾಗೂ ಸಾಮಾನ್ಯ ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ, ಹಿಂದುಳಿದ ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ, ಪ.ಜಾತಿ/ ಪ.ಪಂ/ ಪ್ರವರ್ಗ 1ರ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ ವಯೋಮಾನ ನಿಗದಿಪಡಿಸಲಾಗಿದೆ.

BECIL Recruitment 2022: ನರ್ಸಿಂಗ್ ಟ್ಯೂಟರ್ ಹುದ್ದೆಗೆ ಬಿಇಸಿಐಎಲ್‌ ನೇಮಕಾತಿ

ಅರ್ಜಿ ಶುಲ್ಕ: ವಿಜಯಪುರ ಜಿಲ್ಲೆಯಲ್ಲಿರುವ ಸರ್ಕಾರಿ ನೌಕರರ ಸಹಕಾರಿ ಬ್ಯಾಂಕ್ ನಿಯಮಿತ ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಸಾಮಾನ್ಯ ವರ್ಗದ ಅಭ್ಯರ್ಥಿಗಳು ರೂ. 1,000 ಮತ್ತು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ1ರ ಅಭ್ಯರ್ಥಿಗಳು ರೂ. 500 ಪಾವತಿಸಬೇಕು.

ಆಯ್ಕೆ ವಿಧಾನ: ವಿಜಯಪುರ ಜಿಲ್ಲೆಯಲ್ಲಿರುವ ಸರ್ಕಾರಿ ನೌಕರರ ಸಹಕಾರಿ ಬ್ಯಾಂಕ್ ನಿಯಮಿತದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ನಿಗದಿಪಡಿಸಿದ ಅರ್ಹತಾ ವಿದ್ಯಾರ್ಹತೆ ಪರೀಕ್ಷೆಯಲ್ಲಿ ಗಳಿಸಿದ ಗರಿಷ್ಠ ಅಂಕಗಳ ಆಧಾರದ ಮೇಲೆ 1:20ರ ಅನುಪಾತದಲ್ಲಿ ಲಿಖಿತ ಪರೀಕ್ಷೆಗೆ ಕರೆಯಲಾಗುವುದು. ನಂತರ ಲಿಖಿತ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಅರ್ಹತಾ ಪಟ್ಟಿಯನ್ನು ತಯಾರಿಸಿ ಅದನ್ನು ಆಧರಿಸಿ ಅಭ್ಯರ್ಥಿಗಳನ್ನು 1:5ರ ಅನುಪಾತದಲ್ಲಿ ಸಂದರ್ಶನಕ್ಕೆ ಕರೆಯಲಾಗುವುದು.

ವೇತನ: ವಿಜಯಪುರ ಜಿಲ್ಲೆಯಲ್ಲಿರುವ ಸರ್ಕಾರಿ ನೌಕರರ ಸಹಕಾರಿ ಬ್ಯಾಂಕ್ ನಿಯಮಿತದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ₹30,350 ರಿಂದ ₹58,250 ವೇತನ ದೊರೆಯಲಿದೆ.

HPCL Recruitment 2022: ಒಟ್ಟು 25 ಮ್ಯಾನೇಜರ್ ಹುದ್ದೆಗಳಿಗೆ ಹೆಚ್‌ಪಿಸಿಎಲ್‌ ನೇಮಕಾತಿ

ಅರ್ಜಿ ಸಲ್ಲಿಕೆಯ ವಿಧಾನ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಖುದ್ದಾಗಿ ಹಾಜರಾಗಿ ಅರ್ಜಿಯನ್ನು ಸಲ್ಲಿಸಬೇಕು.
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಬ್ಯಾಂಕಿಗೆ ಭೇಟಿ ನೀಡಿ ನಿಗದಿತ ಅರ್ಜಿ ನಮೂನೆಯನ್ನು ಪಡೆದು, ನಂತರ ಅರ್ಜಿ ನಮೂನೆಯಲ್ಲಿ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ( ಉದಾಹರಣೆಗೆ : ಅಭ್ಯರ್ಥಿಯ ಹೆಸರು, ವಿದ್ಯಾರ್ಹತೆ, ಇಮೇಲ್ ವಿಳಾಸ ಇತ್ಯಾದಿ) ಕೊನೆಯಲ್ಲಿ ಭರ್ತಿ ಮಾಡಿದ ಅರ್ಜಿಗೆ ಅವಶ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಗೆ ಖುದ್ದಾಗಿ ಹಾಜರಾಗಿ ಸಲ್ಲಿಸಬೇಕು.

ಅರ್ಜಿ ಸಲ್ಲಿಸುವ ವಿಳಾಸ:
ನೇಮಕಾತಿ ಸಂಚಾಲಕರು ಹಾಗೂ ಪ್ರಧಾನ ವ್ಯವಸ್ಥಾಪಕರು,
ಸರಕಾರಿ ನೌಕರರ ಸಹಕಾರಿ ಬ್ಯಾಂಕ್ ನಿಯಮಿತ, ಮಹಾವೀರ ರೋಡ, ವಿಜಯಪುರ – 586101

Follow Us:
Download App:
  • android
  • ios