ಬೆಳಗಾವಿ/ಅಥಣಿ: ಅನರ್ಹ ಶಾಸಕ ಮಹೇಶ ಕುಮಟಳ್ಳಿ ಅವರು ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾದ ಬೆನ್ನಲ್ಲೆ ಜಿಲ್ಲೆಯ ಅಥಣಿ ಬಿಜೆಪಿ ಕಾರ್ಯಕರ್ತರಲ್ಲಿ ಅಸಮಾಧಾನ ಭುಗಿಲೆದ್ದಿದೆ. ಮಹೇಶ ಕುಮಟಳ್ಳಿ ಅವರು ಸೋಲುವ ಕ್ಯಾಂಡಿಡೆಟ್, ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರಿಗೆ ಪಕ್ಷದ ಟಿಕೆಟ್ ಕೊಡಿ ಬಿಜೆಪಿ ಕಾರ್ಯಕರ್ತರು ಆಗ್ರಹಿಸಿದ್ದಾರೆ. 

ಅಥಣಿ: ಡಿಸಿಎಂ ಸವದಿ ಬೆಂಬಲಿಗರ ಪ್ರತಿಭಟನೆ ದಿಢೀರ್ ರದ್ದು!

ಶುಕ್ರವಾರ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಬಿಜೆಪಿ ಮುಖಂಡ ದತ್ತಾ ವಾಸ್ಟರ್ ಅವರು, ಮಹೇಶ ಕುಮಟಳ್ಳಿ ಅವರಿಗೆ ಟಿಕೆಟ್ ನೀಡಲು ನಮ್ಮ ಅಸಮಾಧಾನವಿದೆ ಎಂದು ಹೇಳಿದ್ದಾರೆ. ಮಹೇಶ ಕುಮಟಳ್ಳಿಗೆ ವರಿಷ್ಠರು ಟಿಕೆಟ್ ಕೊಟ್ಟಿದ್ದೇ ಅದಲ್ಲಿ ನಾವೆಲ್ಲ ಸಭೆ ನಡೆಸಿ ಅಂತಿಮ ತೀರ್ಮಾನ ತೆಗೆದುಕೊಳ್ಳುತ್ತೇವೆ. ಲಕ್ಷ್ಮಣ ಸವದಿ ಅವರಿಗೆ ಟಿಕೆಟ್ ಕೊಟ್ಟರೇ ಮಾತ್ರ ಬಿಜೆಪಿ ಗೆಲ್ಲುತ್ತದೆ. ಇಲ್ಲವಾದ್ರೆ ಬಿಜೆಪಿ ಖಂಡಿತವಾಗಿಯೂ ಸೋಲಲಿದೆ ಎಂದ ದತ್ತಾ ವಾಸ್ಟರ್ ಅವರು ಹೇಳಿದ್ದಾರೆ. 

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ 

ಡಿಸಿಎಂ ಲಕ್ಷ್ಮಣ ಸವದಿ ಅವರಿಗೆ ಬಿಜೆಪಿಯಿಂದ ಟಿಕೆಟ್  ನೀಡಬೇಕು ಎಂದು ಆಗ್ರಹಿಸಿ ಸವದಿ ಅವರ ಬೆಂಬಲಿಗರು ಶುಕ್ರವಾರ ಅಥಣಿಯಲ್ಲಿ ಬೃಹತ್ ಪ್ರತಿಭಟನೆ ನಡೆಸಲು ಮುಂದಾಗಿದ್ದರು. ಆದರೆ, ಪ್ರತಿಭಟನೆ ನಡೆಸಿದರೆ ಪಕ್ಷಕ್ಕೆ ಮುಜುಗರವಾಗುತ್ತದೆ ಎಂದು ಸವದಿ ಪ್ರತಿಭಟನೆ ರದ್ದು ಮಾಡಲು ಸೂಚನೆ ಮಾಡಿದ್ದರು. 

ಡಿಸೆಂಬರ್ 5 ರಂದು ರಾಜ್ಯದ 15 ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯಲಿದ್ದು, 9 ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ.