ಗೋಕಾಕ(ನ.15): ರಮೇಶ್ ಜಾರಕಿಹೊಳಿ ನೇತೃತ್ವದ ಸರ್ಕಾರ ರಾಜ್ಯದಲ್ಲಿ ಒಳ್ಳೆಯ ಕೆಲಸ ಮಾಡುತ್ತಿದೆ ಎಂದು  ಸವದತ್ತಿ ಬಿಜೆಪಿ ಶಾಸಕ ಆನಂದ ಮಾಮನಿ ಅವರು ಹೇಳಿದ್ದಾರೆ. 

ಶುಕ್ರವಾರ ನಗರದಲ್ಲಿ ರಮೇಶ್ ಜಾರಕಿಹೊಳಿ ಅವರ ಸ್ವಾಗತ ಸಮಾರಂಭ ಕಾರ್ಯಕ್ರಮದಲ್ಲಿ ಭಾಷಣ ಮಾಡಿದ ಆನಂದ ಮಾಮನಿ ಮೊದಲು ರಮೇಶ್ ಜಾರಕಿಹೊಳಿ ನೇತೃತ್ವದ ಸರ್ಕಾರ ರಾಜ್ಯದಲ್ಲಿ ಒಳ್ಳೆಯ ಕೆಲಸ ಮಾಡುತ್ತಿದೆ ಎಂದು ಹೇಳಿದ್ದಾರೆ. ಕೂಡಲೇ ಸರಿಪಡಿಸಿಕೊಂಡ ಆನಂದ ಮಾಮನಿ ಬಿ.ಎಸ್ ಯಡಿಯೂರಪ್ಪ ನೇತೃತ್ವದ ಸರ್ಕಾರ ಎಂದು ಹೇಳಿದ್ದಾರೆ. 

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ 

ರಮೇಶ್ ಜಾರಕಿಹೊಳಿ ಅವರು ಯಾವ ಪಕ್ಷದಲ್ಲಿದ್ದರೂ ನನಗೆ ಒಳ್ಳೆಯದನ್ನು ಬಯಸಿದವರು, ರಮೇಶ್ ಜಾರಕಿಹೊಳಿ ಒಂದು ಲಕ್ಷ ಮತಗಳ ಅಂತರದಿಂದ ಗೆದ್ದು ಬರುತ್ತಾರೆ ಎಂದು ಹೇಳಿದ್ದಾರೆ. ಆನಂದ ಮಾಮನಿ ಅವರು ರಮೇಶ್ ಜಾರಕಿಹೊಳಿ ನೇತೃತ್ವದ ಸರ್ಕಾರ ರಾಜ್ಯದಲ್ಲಿ ಒಳ್ಳೆಯ ಕೆಲಸ ಮಾಡುತ್ತಿದೆ ಎಂದು ಹೇಳುತ್ತಿದ್ದಂತೆ ನೆರೆದಿದ್ದ ಜನ ಕೆಲ ಕ್ಷಣ ತಬ್ಬಿಬ್ಬಾದ ಪ್ರಸಂಗ ನಡೆದಿದೆ. 

ನಾಮಪತ್ರ ಸಲ್ಲಿಸಲು ನ.18ರಂದು ಕಡೆಯ ದಿನ. 19ರಂದು ನಾಮಪತ್ರ ಪರಿಶೀಲನೆ ನಡೆಯಲಿದ್ದು, ನ.21 ನಾಮಪತ್ರ ಹಿಂಪಡೆಯಲು ಕಡೆಯ ದಿನವಾಗಿದೆ. ಡಿ.5ಕ್ಕೆ ಮತದಾನ ನಡೆಯಲಿದ್ದು, ಡಿ.9ರಂದು ಮತ ಎಣಿಕೆ ನಡೆಯಲಿದೆ.