ಬೆಳಗಾವಿ[ನ.10]: ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಹಾಗೂ ಅನರ್ಹ ಶಾಸಕ ರಮೇಶ ಜಾರಕಿಹೊಳಿ ಶನಿವಾರ ಬೆಂಗಳೂರಿನಿಂದ ಒಂದೇ ವಿಮಾನದಲ್ಲಿ ಬಂದರೂ ಒಬ್ಬರಿಗೊಬ್ಬರು ಮುಖ ನೋಡದೆ ಕುಳಿತ್ತಿದ್ದು ಅಚ್ಚರಿಗೆ ಕಾರಣವಾಗಿದೆ.

ಶನಿವಾರ ಬೆಂಗಳೂರಿನಿಂದ ಒಂದೇ ವಿಮಾನದಲ್ಲಿ ರಮೇಶ ಜಾರಕಿಹೊಳಿ ಹಾಗೂ ಉಪಮುಖ್ಯಮಂತ್ರಿ  ಲಕ್ಷ್ಮಣ ಸವದಿ ಬಂದರು. ಆದರೆ ಅನರ್ಹ ಶಾಸಕ ರಮೇಶ ಜಾರಕಿಹೊಳಿ ವಿಮಾನ ನಿಲ್ದಾಣದಿಂದ ಹೊರಗೆ ಹೋಗುವವರೆಗೂ ಡಿಸಿಎಂ ಸವದಿ ವಿಶ್ರಾಂತಿ ಕೊಠಡಿಯಲ್ಲೇ ಕುಳಿತು ಬಳಿಕಹೊರ ಬಂದಿದ್ದಾರೆ.

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ 

ಈ ಹಿಂದೆ ಅನರ್ಹ ಶಾಸಕರ ಬಗ್ಗೆ ಡಿಸಿಎಂ ಲಕ್ಷ್ಮಣ ಸವದಿ ಹಗುರವಾಗಿ ಮಾತನಾಡಿದ್ದರು. ಇದಕ್ಕೆ ಖಾರವಾಗಿ ಉತ್ತರಿಸಿದ್ದ ಅನರ್ಹ ಶಾಸಕ ರಮೇಶ ಜಾರಕಿಹೊಳಿ ಅನರ್ಹ ಶಾಸಕರಿಂದಲೇ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಿದ್ದು. ಸೋಲು ಕಂಡಿದ್ದ ಲಕ್ಷ್ಮಣ ಸವದಿಗೆ ಡಿಸಿಎಂ ಮಾಡಿದ್ದುಅವರು ಅದು ಕನಸಿನಲ್ಲಿ ಎಂದು ತಿಳಿದುಕೊಂಡಿದ್ದಾರೆ ಎಂದು ಸವದಿ ವಿರುದ್ಧ ಹರಿಹಾಯ್ದಿದ್ದರು. ಈ ಹಿನ್ನೆಲೆಯಲ್ಲಿ ಪರಸ್ಪರ ಮನಸ್ತಾಪ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.