ಬೆಳಗಾವಿಯಲ್ಲಿ ಸರಣಿ ಅಪಘಾತ ನಡೆದಿದೆ. ಟಾಟಾ ಏಸ್, ಎರಡು ಬೈಕ್, ಕಾರು ಹಾಗೂ ಲಾರಿ ನಡುವೆ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಮೃತಪಟ್ಟಿದ್ದರೆ, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಬೆಳಗಾವಿ (ಜು.06) ಮಳೆಗಾಲ ಆರಂಭಗೊಂಡ ಬಳಿಕ ಅಪಘಾತಗಳ ಸಂಖ್ಯೆ ಕೂಡ ಹೆಚ್ಚಾಗಿದೆ. ಇದೀಗ ಬೆಳಗಾವಿಯಲ್ಲಿ ಸರಣಿ ಅಪಘಾತ ಸಂಭವಿಸಿದೆ. ಟಾಟಾ ಏಸ್, ಎರಡು ಬೈಕ್, ಕಾರು ಹಾಗೂ ಲಾರಿ ನಡುವೆ ಸಂಭವಿಸಿದ ಸರಣಿ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನು ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಬೆಳಗಾವಿ ತಾಲೂಕಿನ ಹಿರೇಬಾಗೇವಾಡಿ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದೆ.

ಟಾಟಾ ಎಸ್, ಕಾರು, ಬೈಕ್ ಸೇರಿ ಸರಣಿ ಅಪಘಾತ

ಮೊದಲು ಟಾಟಾ ಏಸ್ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿತ್ತು. ಏಸ್ ವಾಹನಕ್ಕೆ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿದ್ದ. ಈ ಅಪಘಾತ ನೋಡುತ್ತಾ ರಸ್ತೆ ಬದಿ ನಿಂತಿದ್ದ ಮತ್ತಿಬ್ಬರು ಬೈಕ್ ಸವಾರರಿಗೆ ಲಾರಿ ಬಂದು ಗುದ್ದಿದೆ. ರಸ್ತೆ ಪಕ್ಕ ನಿಂತು ಅಪಘಾತದಲ್ಲಿ ಏನಾಗಿದೆ ಎಂದು ನೋಡುತ್ತಿದ್ದಂತೆ ಲಾರಿ ಬಂದು ಬೈಕ್ ಸವಾರರಿಗೆ ಡಿಕ್ಕಿಯಾಗಿದೆ. ಘಟನೆಯಲ್ಲಿ ಹುಬ್ಬಳ್ಳಿ ಮೂಲದ ಶಿವಪ್ಪ ಶಹಾಪುರ, ರಫೀಕ್ ಜಾಂಬೋಟಿ ಮೃತಪಟ್ಟಿದ್ದಾರೆ.

ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು

ಚಾಲಕನ ನಿಯಂತ್ರಣ ತಪ್ಪಿದ ಕಾರಣ ಲಾರಿ ನಿಂತಿದ್ದ ಬೈಕ್ ಸವಾರರಿಗೆ ಡಿಕ್ಕಿಯಾಗಿ ಪಲ್ಟಿಯಾಗಿದೆ. ರಸ್ತೆಯಲ್ಲಿ ಕಾರು ಪಲ್ಟಿಯಾಗಿ ಬಿದ್ದ ಬೆನ್ನಲ್ಲೇ ವೇಗವಾಗಿ ಬಂದ ಕಾರು ಈ ಲಾರಿಗೆ ಡಿಕ್ಕಿಯಾಗಿದೆ. ಕ್ಷಣಾರ್ಧಧಲ್ಲೇ ಈ ಸರಣಿ ಅಪಘಾತ ಸಂಭವಿಸಿದೆ.

ಘಟನೆಯಿಂದ ಸಂಚಾರ ಅಸ್ತವ್ಯಸ್ತ

ಸರಣಿ ಅಪಪಘಾತದಿಂದ ಬೆಳಗಾವಿ ತಾಲೂಕಿನ ಹಿರೇಬಾಗೇವಾಡಿ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ಅಸ್ತವ್ಯಸ್ತಗೊಂಡಿದೆ. ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್ ಸೃಷ್ಟಿಯಾಗಿದೆ. ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದಾರೆ. ಗಾಯಾಗಳುಗಳನ್ನು ಆಸ್ಪತ್ರೆ ದಾಖಲಿಸಲಾಗಿದೆ. ಇತ್ತ ಮೃತರನ್ನು ಸ್ಥಳೀಯ ಆಸ್ಪತ್ರೆ ರವಾನಿಸಲಾಗಿದೆ.