ಬಾಣಂತಿಯರ ಸಾವಿನ ಸರಣಿ: 7 ತಿಂಗಳಲ್ಲಿ 326 ಬಲಿ, ಬೆಂಗಳೂರಿನಲ್ಲಿಯೇ 50 ಸಾವು

ರಾಜ್ಯದಲ್ಲಿ ಕಳೆದ ಏಳು ತಿಂಗಳಲ್ಲಿ 326 ಬಾಣಂತಿಯರು ಸಾವನ್ನಪ್ಪಿದ್ದಾರೆ, ಬೆಂಗಳೂರಿನಲ್ಲಿ 51 ಮಂದಿ ಸೇರಿದಂತೆ. ಬಳ್ಳಾರಿಯಲ್ಲಿ ನವೆಂಬರ್ ತಿಂಗಳಲ್ಲಿ 11 ಬಾಣಂತಿಯರು ಮೃತಪಟ್ಟಿದ್ದಾರೆ. ಸರ್ಕಾರದ ಬೇಜವಾಬ್ದಾರಿತನದ ಬಗ್ಗೆ ಪ್ರಶ್ನೆಗಳು ಎದ್ದಿವೆ.

Newly mother serial death in karnataka govt hospitals mrq

ಶ್ರೀಕಾಂತ್ ಎನ್. ಗೌಡಸಂದ್ರ 

ಬೆಂಗಳೂರು: ಬಳ್ಳಾರಿ ಬಾಣಂತಿಯರ ಸರಣಿ ಸಾವು ಹೊರತಾಗಿ ರಾಜ್ಯದಲ್ಲಿ ಕಳೆದ ಏಳು ತಿಂಗಳಲ್ಲಿ 326 ಬಾಣಂತಿಯರ ಸಾವು ಸಂಭವಿಸಿದ್ದು, ಕಳೆದ ಮೂರೂವರೆ ವರ್ಷದಲ್ಲಿ 2000 ಬಾಣಂತಿಯರು ಬಲಿಯಾಗಿದ್ದಾರೆ! ರಾಜ್ಯದಲ್ಲಿ ಪ್ರಸಕ್ತ ವರ್ಷದ ಏಪ್ರಿಲ್‌ನಿಂದ ಅಕ್ಟೋಬರ್‌ವರೆಗೆ 7 ತಿಂಗಳಲ್ಲೇ 326 ಬಾಣಂತಿಯರು ಸಾವನ್ನಪ್ಪಿದ್ದಾರೆ. ಈ ಪೈಕಿ ಬೆಂಗಳೂರು ನಗರ ಒಂದರಲ್ಲೇ 51 ಮಂದಿ ಮೃತಪಟ್ಟಿದ್ದು, ಇದರಲ್ಲಿ 50 ಮಂದಿ ಸರ್ಕಾರಿ ಆಸ್ಪತ್ರೆಯಲ್ಲೇ ಸಾವನ್ನಪ್ಪಿದ್ದಾರೆ ಎಂದು ಸರ್ಕಾರಿ ಅಂಕಿ ಅಂಶಗಳ (ಎಚ್‌ಐಎಂಎಸ್) ವರದಿಯೇ ಹೇಳಿದೆ. ಉಳಿದಂತೆ 326 ಸಾವು ಪೈಕಿ ಶೇ.80ರಷ್ಟು ಮರಣ ಸರ್ಕಾರಿ ಆಸ್ಪತ್ರೆಗಳಲ್ಲೇ ಸಂಭವಿಸಿದೆ. 64 ಸಾವು (ಶೇ.20) ಮಾತ್ರ ಖಾಸಗಿ ಆಸ್ಪತ್ರೆ ಗಳಲ್ಲಿ ಉಂಟಾಗಿದೆ. 

ನವೆಂಬರ್ ತಿಂಗಳಲ್ಲಿ ಬಳ್ಳಾರಿ ಒಂದರಲ್ಲೇ ಹನ್ನೊಂದು ಮಂದಿ, ಬೆಂಗಳೂರು ನಗರದಲ್ಲಿ 15 ಮಂದಿ ಸಾವನ್ನಪ್ಪಿದ್ದು, ರಾಜ್ಯಾದ್ಯಂತ 60ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. 

ಬೆಂಗಳೂರಿನಲ್ಲಿ ಸಾವು ಹೆಚ್ಚಳ: ಬೆಂಗಳೂರು. ನಗರದಲ್ಲಿ 2021-22ರಲ್ಲಿ ಕೇವಲ 9 ಮಂದಿ ಬಾಣಂತಿಯರು ಸಾವನ್ನಪ್ಪಿದ್ದರು. 2022-23 ໖ 24 2, 2023-240 30 20 ಮೃತಪಟ್ಟಿದ್ದರು. ಇದೀಗ ಕಳೆದ 2 ತಿಂಗಳಲ್ಲೇ 51 ಮಂದಿ ಸಾವನ್ನಪ್ಪಿದ್ದು, ಈ ಪೈಕಿ 50 ಮಂದಿ ಸರ್ಕಾರಿ ಆಸ್ಪತ್ರೆಗಳಲ್ಲೇ ಸಾವನ್ನಪ್ಪಿರುವುದು ಪ್ರಸಕ್ತ ಸಾಲಿನ ವೈದ್ಯಕೀಯ ಸೇವೆ ಬಗ್ಗೆ ಅನುಮಾನ ಮೂಡುವಂತೆ ಮಾಡಿದೆ. 

ರಾಜ್ಯ ಸರ್ಕಾರ ಬೇಜವಾಬ್ದಾರಿತನ
ಬಾಣಂತಿಯರು ಮತ್ತು ಹಸುಗೂಸುಗಳ ಸಾವಿನಲ್ಲಿ ರಾಜ್ಯ ಸರ್ಕಾರ ಬೇಜವಾಬ್ದಾರಿತನ ಮೇಲ್ನೋಟಕ್ಕೆ ಕಾಣುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಿಸಿದರು. ಬಾಣಂತಿಯರು ಮತ್ತು ಶಿಶುಗಳು ಹೆಚ್ಚಿನ ಪ್ರಮಾಣದಲ್ಲಿ ಸಾವಿಗೀಡಾದ ಹಿನ್ನೆಲೆಯಲ್ಲಿ ನಗರದ ಬಿಮ್ಸ್‌ ಆಸ್ಪತ್ರೆಗೆ ಸೋಮವಾರ ಭೇಟಿ ನೀಡಿ ಪರಿಶೀಲಿಸಿದರು. ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿದ, ಸತ್ಯಾಂಶ ತಿಳಿಯಲು ಇಲ್ಲಿಗೆ ಬಂದಿದ್ದೇವೆ. ಆಸ್ಪತ್ರೆ ಭೇಟಿಯಲ್ಲಿ ಯಾವುದೇ ರಾಜಕಾರಣದ ಪ್ರಶ್ನೆಯೇ ಇಲ್ಲ. ಇವತ್ತು ಬಡವರಿಗೆ ಅನ್ಯಾಯ ಆಗುತ್ತಿದೆ. ಬಾಣಂತಿಯರು, ಹಸುಗೂಸುಗಳು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಇದನ್ನು ಸದನದಲ್ಲಿ ಚರ್ಚಿಸುತ್ತೇವೆ ಎಂದು ತಿಳಿಸಿದರು.

ಉಸ್ತುವಾರಿ ಸಚಿವರು, ಆರೋಗ್ಯ ಸಚಿವರು, ವೈದ್ಯಕೀಯ ಶಿಕ್ಷಣ ಸಚಿವರು ಈ ಸಾವುಗಳ ಕುರಿತು ತಲೆಕೆಡಿಸಿಕೊಂಡಿಲ್ಲ ಎಂದು ಆರೋಪಿಸಿದ ಅವರು, ಈ ಬೇಜವಾಬ್ದಾರಿತನ ಏನಿದೆಯೋ ಅದನ್ನು ಸರ್ಕಾರ ಈಗಲಾದರೂ ಎಚ್ಚೆತ್ತು ಗಮನಿಸಬೇಕು ಎಂಬ ದೃಷ್ಟಿಯಿಂದ ಇದರ ಕುರಿತು ಸದನದಲ್ಲಿ ಗಮನ ಸೆಳೆಯುತ್ತೇವೆ ಎಂದು ಹೇಳಿದರು.

ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಮಾತನಾಡಿ, ಬಾಣಂತಿಯರು ಮತ್ತು ಹಸುಗೂಸುಗಳ ಸಾವಿನ ವಿಷಯದಲ್ಲಿ ರಾಜ್ಯಾದ್ಯಂತ ಗೊಂದಲದ ವಾತಾವರಣ ಇದೆ. ಆಸ್ಪತ್ರೆಗಳು ಶವಾಗಾರವಾಗುವ ಪರಿಸ್ಥಿತಿಯನ್ನು ನಾವು ನೋಡುತ್ತಿದ್ದೇವೆ ಎಂದು ಆರೋಪಿಸಿದರು. ಈ ವೇಳೆ ರಾಜ್ಯಾಧ್ಯಕ್ಷ ವಿಜಯೇಂದ್ರ, ಡಾ.ಅಶ್ವತ್ಥನಾರಾಯಣ್, ಶಶಿಕಲಾ ಜೊಲ್ಲೆ, ಹೇಮಲತಾ ನಾಯಕ್ ಸೇರಿದಂತೆ ಇತರರು ಇದ್ದರು.

ಇದನ್ನೂ ಓದಿ: ಕಳಪೆ ಔಷಧ ಯಾಕೆ ಕೊಟ್ರಿ, ಬಾಣಂತಿಯರ ಸಾವು ಸಾಮಾನ್ಯ ಸಂಗತಿ ಏನು?: ಸಿದ್ದರಾಮಯ್ಯ ಕಿಡಿ

ಬಾಣಂತಿ, ಶಿಶು ಸಾವಿನ ಪ್ರಕರಣ ಮುಚ್ಚಿಡುವ ಪ್ರಶ್ನೆಯೇ ಇಲ್ಲ: ಸಚಿವೆ ಹೆಬ್ಬಾಳಕರ್‌
ಬೆಳಗಾವಿ: ಬೆಳಗಾವಿ ಜಿಲ್ಲಾ ಆಸ್ಪತ್ರೆಯಲ್ಲಿ (ಬಿಮ್ಸ್)‌ ಸಂಭವಿಸಿರುವ ಬಾಣಂತಿಯರು ಹಸುಗೂಸುಗಳ ಸಾವಿನ ಪ್ರಕರಣವನ್ನು ಮುಚ್ಚಿಡುವ ಪ್ರಶ್ನೆಯೇ ಇಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಹೇಳಿದರು. ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಪ್ರಕರಣದ ಕುರಿತು ಈಗಾಗಲೇ ನಾನು ಅಧಿಕಾರಿಗಳ ಜೊತೆ ಮಾತನಾಡಿರುವೆ. ಏಕೆ ಸಮಸ್ಯೆಯಾಗಿದೆ ಎಂದು ಎಲ್ಲವನ್ನು ಕೂಡ ಚರ್ಚೆ ಮಾಡಿದ್ದೇನೆ ಎಂದರು.

ಯಾವ ಕಾರಣಕ್ಕೆ ಸಾವಿನ ಪ್ರಕರಣಗಳು ಸಂಭವಿಸಿವೆ? ಸಾವನ್ನು ತಡೆಯಲು ಯಾವ ಕ್ರಮಕೈಗೊಳ್ಳಬೇಕು? ಏನೆಲ್ಲ ಮಾಡಬೇಕು ಅದನ್ನು ಮಾಡುತ್ತಿದ್ದೇವೆ. ನಮ್ಮ ಜಿಲ್ಲೆಯಲ್ಲಿ 54 ಲಕ್ಷ ಜನಸಂಖ್ಯೆ ಇದೆ. ಹೀಗಾಗಿ ಅಂಕಿ ಅಂಶ ಹೆಚ್ಚಾಗಿ ಕಾಣುತ್ತಿದೆ. ಕಾರವಾರ ಸೇರಿದಂತೆ ಅನೇಕ ಕಡೆಗಳಿಂದ ಆಸ್ಪತ್ರೆಗೆ ಬೆಳಗಾವಿಗೆ ಬರುತ್ತಾರೆ ಎಂದು ತಿಳಿಸಿದರು.

ಇದನ್ನೂ ಓದಿ: ಬಾಣಂತಿ ಸಾವಿಗೆ ಕಾರಣರಾದವರ ಮೇಲೆ ಕ್ರಮ: ಸಚಿವ ದಿನೇಶ್ ಗುಂಡೂರಾವ್

ಬಾಣಂತಿಯರು, ಹಸುಗೂಸುಗಳ ಸಾವಿಗೆ ಬಹಳಷ್ಟು ಕಾರಣಗಳಿವೆ. ಬಳ್ಳಾರಿ ಪ್ರಕರಣಗಳಿಗೂ, ಬ್ರಿಮ್ಸ್‌ಗೂ ಸಂಬಂಧ ಇಲ್ಲ. ಕಬ್ಬಿನಾಂಶ ಕೊರತೆ, ಪ್ರೀ ಮೆಚ್ಯುರ್‌ ಬೇಬಿ ಹೀಗೆ ಅನೇಕ ಕಾರಣಗಳಿವೆ. ಒಂದು ಲಕ್ಷ ಮಕ್ಕಳು ಹುಟ್ಟಿದರೆ 28 ಮಕ್ಕಳು ಅದರಲ್ಲಿ ತೀರಿಕೊಳ್ಳುತ್ತಿದ್ದಾರೆ. ಇಡೀ ದೇಶಕ್ಕೆ 6ನೇ ಅತ್ಯುತ್ತಮ ಆಸ್ಪತ್ರೆ ಎಂದು ಬಿಮ್ಸ್‌ ಪಾತ್ರವಾಗಿದೆ. ಬಾಣಂತಿಯರು, ಹಸುಗೂಸುಗಳ ಸಾವಿಗೆ ಇಂಥದ್ದೇ ಕಾರಣ ಅಂತ ಈ ಹಂತದಲ್ಲಿ ಹೇಳಲು ಸಾಧ್ಯವಿಲ್ಲ ಎಂದು ಹೇಳಿದರು.

Latest Videos
Follow Us:
Download App:
  • android
  • ios