ಬೆಳಗಾವಿ[ನ.7]: ನನ್ನ ಕನಸಿನ ಯೋಜನೆಯಾಗಿದ್ದ ಬೆಳಗಾವಿ ಹಾಗೂ ಹುಬ್ಬಳ್ಳಿ ನಡುವಿನ ನೇರ ರೈಲು ಮಾರ್ಗಕ್ಕೆ ರಾಜ್ಯ ಸರ್ಕಾರದ ಅನುಮೋದನೆ ದೊರೆತಿದೆ ಎಂದು ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಅವರು ಹೇಳಿದ್ದಾರೆ. 

ಉತ್ತರ ಕರ್ನಾಟಕದ, ಬೆಳಗಾವಿ ಹಾಗೂ ಹುಬ್ಬಳ್ಳಿ ಭಾಗದ ಜನತೆಯ ಬಹುದಿನಗಳ ಬೇಡಿಕೆಯಾಗಿದ್ದ ರೈಲು ಮಾರ್ಗಕ್ಕೆ ಬುಧವಾರ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರೊಂದಿಗೆ ನಡೆದ ಸಭೆಯಲ್ಲಿ ಅನುಮೋದನೆ ದೊರೆತಿದೆ. ರೈಲು ಹಳಿಗಳನ್ನು ನಿರ್ಮಿಸಲು ಬೇಕಾಗಿರುವ ಅಗತ್ಯ ಭೂಮಿ ಹಾಗೂ ನೇರ ಸಂಪರ್ಕ ಕಲ್ಪಿಸಲು ಬೇಕಾಗುವ ಮೊತ್ತದ ಶೇ.50 ರಷ್ಟು ವೆಚ್ಚವನ್ನು ರಾಜ್ಯ ಸರ್ಕಾರ ಭರಿಸಲಿದೆ ಎಂದು ಭರವಸೆ ನೀಡಿದ್ದಾರೆ.

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ 

ಈ ಯೋಜನೆಯಿಂದಾಗಿ ಹುಬ್ಬಳ್ಳಿ, ಧಾರವಾಡ, ಬೇಲೂರ ಇಂಡಸ್ಟ್ರಿಯಲ್ ಏರಿಯಾ, ಕಿತ್ತೂರು ಹಾಗೂ ಬೆಳಗಾವಿ ಭಾಗಕ್ಕೆ ಸರಕು ಸಾಗಾಣಿಕೆ ಹಾಗೂ ದೈನಂದಿನ ಪ್ರಯಾಣಕ್ಕೆ ಬಹಳಷ್ಟು ಉಪಯುಕ್ತವಾಗಲಿದೆ. ಈ ಯೋಜನೆಗೆ ಸಹಕರಿಸಿದ ಸಿಎಂ ಬಿ.ಎಸ್.ಯಡಿಯೂರಪ್ಪ ಹಾಗೂ ಕೇಂದ್ರ ರೈಲ್ವೆ ಸಚಿವ ಪಿಯೂಷ ಗೋಯಲ್ ಅವರಿಗೆ ಈ ಭಾಗದ ಜನತೆಯ ಪರವಾಗಿ ಅಭಿನಂದನೆ ಸಲ್ಲಿಸುತ್ತೇನೆ ಎಂದು ಅಂಗಡಿ ಹೇಳಿದ್ದಾರೆ.