ಬೆಂಗಳೂರು [ನ.13]:  ರಾಜ್ಯ ವಿಧಾನಸಭೆಯಿಂದ ಅಂದಿನ ಸ್ಪೀಕರ್ ಆಗಿದ್ದ ರಮೇಶ್ ಕುಮಾರ್ ಅನರ್ಹ ಮಾಡಿದ್ದ 17 ಶಾಸಕರ ತೀರ್ಪು ಪ್ರಕಟವಾಗಿದೆ. ಸ್ಪೀಕರ್ ಆದೇಶ ಎತ್ತಿಹಿಡಿದು ಅವರ ಅನರ್ಹತೆಯನ್ನು ಸುಪ್ರೀಂ ಕೋರ್ಟ್ ಅಂಗೀಕರಿಸಿದೆ. 

ಈಗಾಗಲೇ ಡಿಸೆಂಬರ್ 5 ರಂದು 15 ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯಲಿದ್ದು, ಅನರ್ಹರು ಸ್ಪರ್ಧೆ ಮಾಡಬಹುದು ಎನ್ನುವ ರಿಲೀಫ್ ನೀಡಿದೆ. ಈಗಾಗಲೇ ಚುನಾವಣೆಗಾಗಿ ಪಕ್ಷಗಳಲ್ಲಿ ಸಿದ್ಧತೆ ನಡೆಯುತ್ತಿದ್ದು, ಎಂಟಿಬಿ ನಾಗರಾಜ್ ಅನರ್ಹತೆಯಿಂದ ತೆರವಾದ  ಹೊಸಕೋಟೆ ಕ್ಷೇತ್ರಕ್ಕೂ ಚುನಾವಣೆ ನಡೆಯುತ್ತಿದೆ. 

ಈ ನಿಟ್ಟಿನಲ್ಲಿ ಬಿಜೆಪಿಯಿಂದ ಹೊಸಕೋಟೆ ಕ್ಷೇತ್ರಕ್ಕೆ ತಾವೇ ಅಭ್ಯರ್ಥಿ ಎಂದು ಅನರ್ಹ ಶಾಸಕ ಎಂಟಿಬಿ ನಾಗರಾಜ್ ಹೇಳಿದ್ದಾರೆ. 

ಸುಪ್ರೀಂಕೋರ್ಟ್ ನೀಡಿದ ತೀರ್ಪುನ್ನು ಸ್ವಾಗತಿಸುತ್ತೇವೆ. ಬಿಜೆಪಿ‌ ಸೇರ್ಪಡೆ ಬಗ್ಗೆ ನಾಯಕರ ಜೊತೇ ಮಾತುಕತೆ ನಡೆಸಿ ಮುಂದಿನ ತೀರ್ಮಾನ ಕೈಗೊಳ್ಳುವುದಾಗಿಯೂ ಅವರು ಹೇಳಿದರು. 

17 ಶಾಸಕರ ಅನರ್ಹತೆ ಎತ್ತಿ ಹಿಡಿದ ಸುಪ್ರೀಂ ಕೋರ್ಟ್ : ಕೊಂಚ ರಿಲೀಫ್...

ಈಗಾಗಲೇ  ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ಶೀಘ್ರ ಸಮಯ‌ ನಿಗಧಿ ಮಾಡುತ್ತೇನೆ. ಇಲ್ಲಿರುವ ಗೊಂದಲಗಳ ಬಗ್ಗೆ ಬಿಜೆಪಿ ನಾಯಕರೇ ಸರಿಪಡಿಸುತ್ತಾರೆ ಎಂದರು.

ಹೊಸಕೋಟೆ ಕ್ಷೇತ್ರದಲ್ಲಿ ಸಂಸದ ಬಚ್ಚೇಗೌಡ ಪುತ್ರ ಶರತ್ ಬಚ್ಚೇಗೌಡ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದು, ಆದರೆ ಬಿಜೆಪಿಯಿಂದ ಟಿಕೆಟ್ ಸಿಗುವುದು ಡೌಟ್ ಆಗಿದ್ದು, ಈ ನಿಟ್ಟಿನಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುವುದಾಗಿ ಅವರು ಈಗಾಗಲೇ ಘೋಷಿಸಿದ್ದಾರೆ. ಇದೀಗ ಬಿಜೆಪಿ ಅಭ್ಯರ್ಥಿ ತಾವೇ ಎಂದು ಎಂಟಿಬಿ ಹೇಳಿದ್ದಾರೆ. 

ಡಿಸೆಂಬರ್ 5 ರಂದು ರಾಜ್ಯದ 15 ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯಲಿದ್ದು, 9 ರಂದು ಫಲಿತಾಂಶ ಪ್ರಕಟವಾಗಲಿದೆ.