ಬೆಂಗಳೂರು ಬಳಿ ಭೀಕರ ಅಪಘಾತ, ನಿಂತಿದ್ದ ಕ್ಯಾಂಟರ್‌ಗೆ ಟಾಟಾ ಎಸ್‌ ಡಿಕ್ಕಿಯಾಗಿ ಮೂವರು ಸಾವು, ಬೆಂಗಳೂರಿನ ಹೊರವಲಯದ ಮೇಲ್ಸೇತುವೆ ಬಳಿ ಈ ಘಟನೆ ನಡೆದಿದೆ. ಪಂಚರ್ ಆಗಿ ನಿಂತಿದ್ದ ವಾಹನಕ್ಕೆ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. 

ಬೆಂಗಳೂರು (ಮಾ.22) ಬೆಂಗಳೂರು ಹೊರವಲಯದ ಬಳಿ ಭೀಕರ ಅಪಘಾತ ಸಂಭವಿಸಿದೆ. ಪಂಚರ್ ಆಗಿ ನಿಂತಿದ್ದ ಕ್ಯಾಂಟರ್ ವಾಹನಕ್ಕೆ ಟಾಟಾ ಎಸ್ ಡಿಕ್ಕಿಯಾಗಿದೆ. ಅತೀ ವೇಗದಲ್ಲಿ ಸಾಗುತ್ತಿದ್ದ ಟಾಟಾ ಏಸ್ ವಾಹನ ಡಿಕ್ಕಿಯಾಗಿದೆ. ಪರಿಣಾಮ ಟಾಟಾ ಏಸ್ ವಾಹನದ ಮುಂಭಾಗ ಸಂಪೂರ್ಣ ನಜ್ಜು ಗುಜ್ಜಾಗಿದೆ. ಡಿಕ್ಕಿ ಪರಿಣಾಮ ಚಾಲಕ ಹಾಗೂ ಸಹಾಯಕ ಸ್ಥಳದಲ್ಲೇ ಮೃತಪಟ್ಟಿದ್ದರು. ಗಂಭೀರ ಗಾಯಗೊಂಡಿದ್ದ ಮತ್ತೊಬ್ಬ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗೆ ಮೃತಪಟ್ಟಿದ್ದಾರೆ. ಈ ಅಪಘಾತದಲ್ಲಿ ಟಾಟಾ ಏಸ್ ವಾಹನದಲ್ಲಿದ್ದ ಮೂವರು ಮೃತಪಟ್ಟಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಕೆ ಆರ್ ಪುರಂ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯ ಮೇಡಹಳ್ಳಿ ಮೇಲ್ಸೇತುವೆ ಮೇಲೆ ಈ ಅಪಘಾತ ನಡೆದಿದೆ. ಕೋಲಾರದಿಂದ ಬೆಂಗಳೂರಿಗೆ ಆಲೂಗಡ್ಡೆ ತುಂಬಿಸಿಕೊಂಡು ಬಂದಿದ್ದ ಕ್ಯಾಂಟರ್ ವಾಹನ, ಪಂಚರ್ ಆಗಿ ಮೇಡಹಳ್ಳಿ ಮೇಲ್ಸೇತುವೆ ಮೇಲೆ ನಿಂತಿದೆ. ಹೀಗಾಗಿ ಕ್ಯಾಂಟರ್ ಚಾಲಕ ವಾಹನದ ಟೈಯರ್ ಬದಲಾಯಿಸಲು ಮುಂದಾಗಿದ್ದಾನೆ. ಆದರೆ ನಿಂತಿರುವ ಕ್ಯಾಂಟರ್ ಗಮನಿಸದೇ ಅತೀ ವೇಗವಾಗಿ ಸಾಗುತ್ತಿದ್ದ KA 53 AB 3498 ಟಾಟಾ ಏಸ್ ವಾಹನ ಭೀಕರವಾಗಿ ಅಪಘಾತಕ್ಕೀಡಾಗಿದೆ.

ಡಿಕ್ಕಿ ರಭಸಕ್ಕೆ ಇಬ್ಬರ ದೇಹಗಳು ಸಿಲುಕಿ ಛಿದ್ರ‌ಗೊಂಡಿದೆ. ಮತ್ತೊಬ್ಬ ಗಂಭೀರವಾಗಿ ಗಾಯಗೊಂಡಿದ್ದ. ಇಬ್ಬರ ಮೃತದೇಹಗಳನ್ನು ಕೆಆರ್ ಪುರಂ ಸರ್ಕಾರಿ ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿತ್ತು. ಗಾಯಗೊಂಡ ವ್ಯಕ್ತಿಯನ್ನು ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಗಾಯದ ಪ್ರಮಾಣ ಹೆಚ್ಚಿದ್ದ ಕಾರಣ ಚಿಕಿತ್ಸೆ ಫಲಕಾರಿಯಾಗದೆ ಮೂರನೇ ವ್ಯಕ್ತಿ ಕೂಡ ಮೃತಪಟ್ಟಿದ್ದಾರೆ. ವೈಟ್‌ಫೀಲ್ಡ್ ನಿವಾಸಿಗಳಾದ ಮಣಿಕಂಠ, ಸುರೇಶ್, ಶ್ರೀನಿವಾಸ್ ಮೃತ ದುರ್ದೈವಿಗಳು. ಮೂವರು ಸುಮಾರು 25 -30 ವಯಸ್ಸಿನವರು ಎಂದು ಅಂದಾಜಿಸಲಾಗಿದೆ.

ರಸ್ತೆ ಅಪಘಾತದಲ್ಲಿ ಯುವಕ ಸಾವು

ಬೆಂಗಳೂರಿನ ಇಸ್ಕಾನ್ ಬಳಿ ಇರುವ ಕಮಲಮ್ಮನ ಗುಂಡಿ ಬಳಿ ಸಂಭವಿಸಿದ ಅಪಘಾತದಲ್ಲಿ 24ರ ಹರೆಯದ ಯುವಕ ಮೃತಪಟ್ಟ ಘಟನೆ ನಡೆದಿದೆ. ಡಿವೈಡರ್ಗೆ ಡಿಕ್ಕಿ ಹೊಡೆದು ಯುವಕ ಸ್ಥಳದಲ್ಲೆ ಮೃತಪಟ್ಟಿದ್ದಾನೆ. ಅತಿಯಾದ ವೇಗದಿಂದ ಅಪಘಾತ ಆಗಿದೆ ಎನ್ನಲಾಗುತ್ತಿದೆ. ಘಟನೆ ಸಂಬಂದ ಮಲ್ಲೇಶ್ವರಂ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಂಗಳೂರು ಹೊರವಲಯದ ಹೊಸೂರಿನಲ್ಲಿ ಅಪಘಾತ

ಇತ್ತೀಚೆಗೆ ತಮಿಳುನಾಡಿನ ಹೊಸೂರಿನಲ್ಲಿ ಭೀಕರ ಅಪಘಾತ ಸಂಭವಿಸಿತ್ತು. ಸೇಲಂ ಬಳಿ ಭೀಕರ ಅಪಘಾತ ಇಬ್ಬರು ಮಕ್ಕಳು ಸೇರಿದಂತೆ ಎಂಟು ಮಂದಿ ಮೃತಪಟ್ಟಿದ್ದರು. ನಿಯಂತ್ರಣ ತಪ್ಪಿದ ಸರ್ಕಾರಿ ಬಸ್ ಡಿಕ್ಕಿ ಹೊಡೆದ ಪರಿಣಾಮ ದುರ್ಘಟನೆ ಸಂಭವಿಸಿತ್ತು.