-100ರಲ್ಲಿ ಮೂವರಿಗೆ ಸೋಂಕು, 63 ಮಂದಿಗೆ ಕೊರೋನಾ - 1,610 ಸೋಂಕಿತರು ಆಸ್ಪತ್ರೆ/ಮನೆಯಲ್ಲಿ ಚಿಕಿತ್ಸೆ - ರಾಜ್ಯದ ಒಟ್ಟಾರೆ ಪ್ರಕರಣಗಳ ಪೈಕಿ ಶೇ.98 ರಷ್ಟುಬೆಂಗಳೂರಿನಲ್ಲಿ  

ಬೆಂಗಳೂರು(ಏ.26): ರಾಜಧಾನಿಯಲ್ಲಿ ಕೊರೋನಾ ಸೋಂಕು ಪರೀಕ್ಷೆಗಳ ಪಾಸಿಟಿವಿಟಿ ದರ ಶೇ.3ಕ್ಕೆ ಹೆಚ್ಚಳವಾಗಿದ್ದು, ಸೋಂಕು ಪರೀಕ್ಷೆಗೊಳಪಟ್ಟ100 ಮಂದಿಯಲ್ಲಿ ಮೂವರಿಗೆ ಸೋಂಕು ದೃಢಪಡುತ್ತಿದೆ.

ನಗರದಲ್ಲಿ ಸೋಮವಾರ 63 ಮಂದಿಗೆ ಕೊರೋನಾ ಸೋಂಕು ತಗುಲಿದ್ದು, 59 ಮಂದಿ ಗುಣಮುಖರಾಗಿದ್ದಾರೆ. ಸೋಂಕಿತರ ಸಾವು ವರದಿಯಾಗಿಲ್ಲ. ಸದ್ಯ 1,610 ಸೋಂಕಿತರು ಆಸ್ಪತ್ರೆ/ಮನೆಯಲ್ಲಿ ಚಿಕಿತ್ಸೆ, ಆರೈಕೆಯಲ್ಲಿದ್ದಾರೆ. ಸೋಂಕು ಪರೀಕ್ಷೆಗಳು 2,130 ನಡೆದಿದ್ದು, ಪಾಸಿಟಿವಿಟಿ ದರ ಶೇ.3ರಷ್ಟುದಾಖಲಾಗಿದೆ. ಭಾನುವಾರಕ್ಕೆ ಹೋಲಿಸಿದರೆ ಹೊಸ ಪ್ರಕರಣಗಳು 6 ಏರಿಕೆಯಾಗಿವೆ. (ಭಾನುವಾರ 57 ಕೇಸ್‌, ಶೂನ್ಯ ಸಾವು) ಸದ್ಯ ಸಕ್ರಿಯ ಸೋಂಕಿತರ ಪೈಕಿ 7 ಮಂದಿ ಮಾತ್ರ ಆಸ್ಪತ್ರೆಯಲ್ಲಿದ್ದು, ಈ ಪೈಕಿ ವೆಂಟಿಲೇಟರ್‌ ಒಬ್ಬರು, ಆಕ್ಸಿಜನ್‌ ಹಾಸಿಗೆ ಮತ್ತು ಸಾಮಾನ್ಯ ಹಾಸಿಗೆಗಳಲ್ಲಿ ತಲಾ ಮೂವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಉಳಿದ 1600 ಮಂದಿ ಮನೆಯಲ್ಲಿ ಆರೈಕೆಯಲ್ಲಿದ್ದಾರೆ.

ಕಳೆದ ಮೂರು ದಿನಗಳಿಂದ ಶೇ.2 ಆಸುಪಾಸಿನಲ್ಲಿದ್ದ ಸೋಂಕು ಪರೀಕ್ಷೆಗಳ ಪಾಸಿಟಿವಿಟಿ ದರ ಸದ್ಯ 3ಕ್ಕೆ ಹೆಚ್ಚಳವಾಗಿದೆ. ರಾಜ್ಯದ ಒಟ್ಟಾರೆ ಪ್ರಕರಣಗಳ ಪೈಕಿ ಶೇ.98 ರಷ್ಟುಬೆಂಗಳೂರಿನಲ್ಲಿಯೇ ವರದಿಯಾಗಿವೆ. ಈವರೆಗೆ ಸೋಂಕಿಗೆ ಒಳಗಾದವರ ಸಂಖ್ಯೆ 17.8 ಲಕ್ಷಕ್ಕೆ, ಗುಣಮುಖರ ಸಂಖ್ಯೆ 17.6 ಲಕ್ಷಕ್ಕೆ ತಲುಪಿದ್ದು, ಸಾವಿನ ಸಂಖ್ಯೆ 16,964 ಇದೆ ಎಂದು ಬಿಬಿಎಂಪಿ ಕೊರೋನಾ ವರದಿಯಲ್ಲಿ ತಿಳಿಸಲಾಗಿದೆ.

ಕರ್ನಾಟಕದಲ್ಲಿ ಕೊರೋನಾ 4ನೇ ಅಲೆ ಪ್ರಾರಂಭ, ಒಮಿಕ್ರೋನ್ ಉಪತಳಿಯಿಂದ ಸೋಂಕು!

ಬೆಂಗಳೂರು 64, ದಕ್ಷಿಣ ಕನ್ನಡ ಒಬ್ಬರಿಗೆ ಸೋಂಕು ತಗುಲಿದೆ. 28 ಜಿಲ್ಲೆಗಳಲ್ಲಿ ಹೊಸ ಪ್ರಕರಣಗಳು ಪತ್ತೆಯಾಗಿಲ್ಲ. ಒಟ್ಟಾರೆ ರಾಜ್ಯದಲ್ಲಿ ಈವರೆಗೆ 39.46 ಲಕ್ಷ ಮಂದಿಗೆ ಸೊಂಕು ತಗುಲಿದೆ. 39.04 ಲಕ್ಷ ಮಂದಿ ಗುಣಮುಖರಾಗಿದ್ದು, 40,057 ಮಂದಿ ಸಾವಿಗೀಡಾಗಿದ್ದಾರೆ.

ದ.ಕ.: 1 ಪಾಸಿಟಿವ್‌ ಕೇಸ್‌
 ದ.ಕ.ಜಿಲ್ಲೆಯಲ್ಲಿ ವಾರದ ಬಳಿಕ ಸೋಮವಾರ ಒಂದು ಕೊರೋನಾ ಕೇಸ್‌ ಪತ್ತೆಯಾಗಿದೆ. ಆದರೆ ಯಾವುದೇ ಸಾವು ಸಂಭವಿಸಿಲ್ಲ. ಅಲ್ಲದೆ ಯಾವುದೇ ಡಿಸ್ಚಾಜ್‌ರ್‍ ಆಗಿಲ್ಲ. ಪ್ರಸಕ್ತ ಎರಡು ಸಕ್ರಿಯ ಪ್ರಕರಣ ಇದೆ. ಈಗ ಜಿಲ್ಲೆಯ ಕೋವಿಡ್‌ ಪಾಸಿಟಿವಿಟಿ ರೇಟ್‌ ಶೇ.0.41 ಆಗಿದೆ.ಇಲ್ಲಿವರೆಗೆ ಒಟ್ಟು ಪಾಸಿಟಿವ್‌ ಸಂಖ್ಯೆ 1,35,505ಕ್ಕೆ ಏರಿಕೆಯಾಗಿದೆ. ಒಟ್ಟು 1,33,651 ಮಂದಿ ಡಿಸ್ಚಾಜ್‌ರ್‍ ಆಗಿದ್ದು, ಸಾವಿನ ಸಂಖ್ಯೆ 1,850 ಆಗಿದೆ ಎಂದು ಜಿಲ್ಲಾ ಹೆಲ್ತ್‌ ಬುಲೆಟಿನ್‌ ತಿಳಿಸಿದೆ.

Covid 19 ಚೀನಾದಲ್ಲಿ 4ನೇ ಅಲೆ ಭೀಕರ, ಶಾಂಘೈ ನಗರದಲ್ಲಿ ಒಂದೇ ದಿನ 39 ಸಾವು!

ಉಡುಪಿ: ಕೋವಿಡ್‌ ಪ್ರಕರಣ ಶೂನ್ಯ
ಜಿಲ್ಲೆಯಲ್ಲಿ ಸೋಮವಾರ 43 ಮಂದಿಗೆ ಕೋವಿಡ್‌ ಪರೀಕ್ಷೆ ಮಾಡಲಾಗಿದ್ದು, ಯಾರಲ್ಲಿಯೂ ಸೋಂಕು ಪತ್ತೆಯಾಗಿಲ್ಲ. ಜಿಲ್ಲೆಯಲ್ಲಿ ಪ್ರಸ್ತುತ 1 ಸಕ್ರಿಯ ಕೋವಿಡ್‌ ಪ್ರಕರಣ ಮಾತ್ರ ಇದೆ. ಜಿಲ್ಲೆಯಲ್ಲಿ ಇದುವರೆಗೆ 539 ಸೋಂಕಿತರು ಮೃತಪಟ್ಟಿದ್ದಾರೆ

2 ದಿನದ ಬಳಿಕ ಶತಕಕ್ಕಿಂತ ಕಡಿಮೆ ಸೋಂಕು ದಾಖಲು
ಬೆಂಗಳೂರು ನಗರದಲ್ಲಿ ಭಾನುವಾರ 57 ಮಂದಿಗೆ ಕೊರೋನಾ ಸೋಂಕು ತಗುಲಿದ್ದು, 52 ಮಂದಿ ಗುಣಮುಖರಾಗಿದ್ದಾರೆ. ಸೋಂಕಿತರ ಸಾವು ವರದಿಯಾಗಿಲ್ಲ. ಸದ್ಯ 1,606 ಸೋಂಕಿತರು ಆಸ್ಪತ್ರೆ/ಮನೆಯಲ್ಲಿ ಚಿಕಿತ್ಸೆ, ಆರೈಕೆಯಲ್ಲಿದ್ದಾರೆ. ಸೋಂಕು ಪರೀಕ್ಷೆಗಳು 3,252 ನಡೆದಿದ್ದು, ಪಾಸಿಟಿವಿಟಿ ದರ ಶೇ.1.7ರಷ್ಟುದಾಖಲಾಗಿದೆ. ಶನಿವಾರಕ್ಕೆ ಹೋಲಿಸಿದರೆ ಹೊಸ ಪ್ರಕರಣಗಳು 75 ಕಡಿಮೆಯಾಗಿವೆ. (ಶನಿವಾರ 132 ಕೇಸ್‌, ಶೂನ್ಯ ಸಾವು) ಸದ್ಯ ಸಕ್ರಿಯ ಸೋಂಕಿತರ ಪೈಕಿ 7 ಮಂದಿ ಮಾತ್ರ ಆಸ್ಪತ್ರೆಯಲ್ಲಿದ್ದು, ಈ ಪೈಕಿ ವೆಂಟಿಲೇಟರ್‌ ಒಬ್ಬರು, ಆಕ್ಸಿಜನ್‌ ಹಾಸಿಗೆ ಮತ್ತು ಸಾಮಾನ್ಯ ಹಾಸಿಗೆಗಳಲ್ಲಿ ತಲಾ ಮೂವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಉಳಿದ 1599 ಮಂದಿ ಮನೆಯಲ್ಲಿ ಆರೈಕೆಯಲ್ಲಿದ್ದಾರೆ. ಸತತ ಎರಡು ದಿನಗಳ ಬಳಿಕ ಕೊರೋನಾ ಸೋಂಕು ಹೊಸ ಪ್ರಕರಣಗಳು 100ಕ್ಕಿಂತ ಕಡಿಮೆಯಾಗಿವೆ. ಜತೆಗೆ ಸೋಂಕು ಪರೀಕ್ಷೆಗಳ ಪಾಸಿಟಿವಿಟಿ ದರ ಕೂಡಾ ಶೇ.2ಕ್ಕಿಂತ ಕಡಿಮೆಯಾಗಿದೆ.