ಹೊಸ ವರ್ಷ ಸಂಭ್ರಮಾಚರಣೆ, ಬೆಂಗಳೂರಿನ ಬಹುತೇಕ ಫ್ಲೈವರ್ ಬಂದ್!
ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆ ಕಾವು ಪಡೆದುಕೊಂಡಿದೆ. ಇದರ ಹಿನ್ನಲೆಯಲ್ಲಿ ಬೆಂಗಳೂರಿನ ಬಹುತೇಕ ಎಲ್ಲಾ ಫ್ಲೈಓವರ್ ರಸ್ತೆಗಳ ಸಂಚಾರ ನಿರ್ಬಂಧಿಸಲಾಗಿದೆ.
ಬೆಂಗಳೂರು(ಡಿ.31) ಹೊಸ ವರ್ಷ ಸಂಭ್ರಮಾಚರಣೆ ಬೆಂಗಳೂರಿನಲ್ಲಿ ಜೋರಾಗಿದೆ. ನಗರದ ಹಲವು ರಸ್ತೆಗಳು ಹಬ್ಬದ ವಾತಾವರಣದಿಂದ ಕಂಗೊಳಿಸುತ್ತಿದೆ. ಜನರು ಕಿಕ್ಕಿರಿದು ಸೇರಿದ್ದಾರೆ. ಪೊಲೀಸರು ಎಲ್ಲರ ಮೇಲೂ ಹದ್ದಿನ ಕಣ್ಣಿಟ್ಟಿದ್ದಾರೆ. ಇತ್ತ ಮುಂಜಾಗ್ರತಾ ಕ್ರಮವಾಗಿ ಪೊಲೀಸರು ಬೆಂಗಳೂರಿನ ಬಹುತೇಕ ಎಲ್ಲಾ ಫ್ಲೈಓವರ್ ರಸ್ತೆಗಳನ್ನು ಬ್ಯಾರಿಕೇಡ್ ಹಾಕಿ ಬಂದ್ ಮಾಡಿದ್ದಾರೆ. ಹೊಸ ವರ್ಷಾಚರಣೆ ಪ್ರಯುಕ್ತ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ನಗರದ ಎಲ್ಲಾ ಫ್ಲೈ ಓವರ್‌ಗಳನ್ನು ಬಂದ್ ಮಾಡಿದ್ದಾರೆ. ಇಂದು ರಾತ್ರಿ 10 ಗಂಟೆಯಿಂದ ನಾಳೆ ಬೆಳಗ್ಗೆ 6 ಗಂಟೆ ವರೆಗೆ ಫ್ಲೈ ಓವರ್ ಬಂದ್ ಮಾಡಲಾಗಿದೆ. ಕೆಲೆವಡೆ ರಾತ್ರಿ 10.30ರ ಹೊತ್ತಿಗೆ ಫ್ಲೈ ಓವರ್ ಬಂದ್ ಮಾಡಲಾಗಿದೆ. ನರದಲ್ಲಿನ ಎಲ್ಲಾ ಫ್ಲೈವರ್ ಸಂಚಾರ ನಿರ್ಬಂಧಿಸಲಾಗಿದೆ.
ಬೆಂಗಳೂರು ನಗರ ಕಮಿಷನರ್ ದಯಾನಂದ್ ಆದೇಶ ಹಿನ್ನೆಲೆ ನಗರದ ಫ್ಲೈ ಓವರ್ ಬಂದ್ ಮಾಡಲಾಗಿದೆ. ಪೊಲೀಸರು ಫ್ಲೈ ಓವರ್ ಬಳಿ ಬ್ಯಾರಿಕೇಡ್ ಹಾಕಿ ಮುಚ್ಚಿದ್ದಾರೆ. ಇಷ್ಟೇ ಅಲ್ಲ ಈ ದಾರಿಯಲ್ಲಿ ಬರುವ ವಾಹನ ಸವಾರರನ್ನು ಫ್ಲೈಓವರ್ ಕೆಳಗಿನಿಂದ ಸಂಚರಿಸಲು ಸೂಚಿಸುತ್ತಿದ್ದಾರೆ. ಲೆಕ್ಟ್ರಾನಿಕ್ ಸಿಟಿ ಎಲಿವೇಟೆಡ್ ಪ್ಲೈ ಓವರ್, ನಗರದ ಹೃದಯಭಾಗದಲ್ಲಿರುವ ಫ್ಲೈಓವರ್ ಸೇರಿದಂತೆ ಸರಿಸುಮಾರು 40 ರಿಂದ 45ಕ್ಕೂ ಹೆಚ್ಚು ಫ್ಲೈಓವರ್ ಸಂಚಾರ ನಿರ್ಬಂಧಿಸಲಾಗಿದೆ.
ಬೆಂಗಳೂರಿನ ಹೊಸ ವರ್ಷ ಪಾರ್ಟಿ ಮತ್ತಲ್ಲಿ ಮಗುವನ್ನೇ ಮರೆತ ಪೋಷಕರು, ಪೊಲೀಸ್ ವಶದಲ್ಲಿ ಕಂದ!
ನಗರದಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ಫ್ಲೈಓವರ್ ಸಂಚಾರಕ್ಕೆ ಮುಕ್ತವಾಗಿರುತ್ತದೆ. ಈ ಫ್ಲೈಓವರ್ ಮೂಲಕ ಸಾಗುವ ವಾಹನ ಸವಾರರಿಗೆ ಯಾವುದೇ ಸಮಸ್ಯೆ ಇಲ್ಲ. ಆದರೆ ಈ ಫ್ಲೈಓವರ್‌ಗಳಲ್ಲಿ ದ್ವಿಚಕ್ರವಾಹನ ಸಂಚಾರಕ್ಕೆ ಇಂದು ರಾತ್ರಿ 10 ಗಂಟೆಯಿಂದ ನಾಳೆ ಬೆಳಗ್ಗೆ 6 ಗಂಟೆವರೆಗೆ ಅವಕಾಶವಿರುವುದಿಲ್ಲ.
ಹಲವು ಮಾರ್ಗಗಳಲ್ಲಿ ಸಂಚಾರ ಬದಲಿಸಲಾಗಿದೆ. ಎಂಜಿ ರಸ್ತೆ, ಬ್ರಿಗೇಡ್ ರಸ್ತೆ, ಚರ್ಚ್ ಸ್ಟ್ರೀಟ್ ರಸ್ತೆಗಳಲ್ಲಿ ವಾಹನ ಸಂಚಾರ ನಿರ್ಬಂಧಿಸಲಾಗಿದೆ. ಹೊಸ ವರ್ಷಾಚರಣೆಯಿಂದ ಈ ಕ್ರಮ ಕೈಗೊಳ್ಳಲಾಗಿದೆ. ಬ್ರಿಗೇಡ್ ರಸ್ತೆಯನ್ನು ಇಂದು ಸಂಜೆ 6.30ಕ್ಕೆ ವಾಹನ ಸಂಚಾರ ನಿರ್ಬಂಧಿಸಲಾಗಿದೆ. ನಗರದ ಹಲವು ಭಾಗದಲ್ಲಿ ಹೊಸ ವರ್ಷ ಸಂಭ್ರಮಾಚರಣೆ ನಡೆಯುತ್ತಿದೆ. ಹೀಗಾಗಿ ಕೆಲ ಮಾರ್ಗಗಳನ್ನು ಪೊಲೀಸರು ಬಂದ್ ಮಾಡಿದ್ದಾರೆ. ರಸ್ತೆ ಬದಿಗಳಲ್ಲಿ ವಾಹನ ಪಾರ್ಕಿಂಗ್ ನಿಷೇಧಿಸಲಾಗಿದೆ. ಹೆಜ್ಜೆ ಹೆಜ್ಜೆಗೂ ಪೊಲೀಸರ ಸರ್ಪಗಾವಲು ಇದೆ.