ಬೆಂಗಳೂರಿನ ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್ ಉಂಟಾಗಿದ್ದರಿಂದ ಬೆಂಕಿ ಕಾಣಿಸಿಕೊಂಡಿದೆ. ನಿಲ್ದಾಣದ ಹೊರಗೆ ಅಳವಡಿಸಿದ್ದ ನೇಮ್ ಬೋರ್ಡ್‌ನಲ್ಲಿನ ಬೆಂಕಿ ಕಾಣಿಸಿಕೊಂಡಿದೆ.

ಬೆಂಗಳೂರು: ಬೆಂಗಳೂರಿನ ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್ ಉಂಟಾಗಿದ್ದರಿಂದ ಬೆಂಕಿ ಕಾಣಿಸಿಕೊಂಡಿದೆ. ನಿಲ್ದಾಣದ ಹೊರಗೆ ಅಳವಡಿಸಿದ್ದ ನೇಮ್ ಬೋರ್ಡ್‌ನಲ್ಲಿನ ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ ಮೆಟ್ರೋ ನಿಲ್ದಾಣದ ಸಿಬ್ಬಂದಿ ಬೆಂಕಿ ನಂದಿಸಲು ಪ್ರಯತ್ನಿಸಿದ್ದಾರೆ. ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ನಿಲ್ದಾಣಕ್ಕೆ ಬರಬೇಕಿದ್ದ ರೈಲುಗಳನ್ನು ಸ್ಥಗಿತಗೊಳಿಸಲಾಗಿದೆ. ಹಾಗೆಯೇ ಪ್ಲಾಟ್‌ಫಾರಂನಲ್ಲಿದ್ದ ಪ್ರಯಾಣಿಕರನ್ನು ಮುಂಜಾಗ್ರತ ಕ್ರಮವಾಗಿ ಹೊರಗೆ ಕಳುಹಿಸಲಾಗಿತ್ತು. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಸ್ಥಳಕ್ಕಾಗಮಿಸಿದ ಅಗ್ನಿಶಾಮಕದಳದ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಬೆಂಕಿ ಅವಘಡದಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಸ್ಥಳಕ್ಕೆ ಬಾಗಲಗುಂಟೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿರುವ ಮಾಹಿತಿ ಲಭ್ಯವಾಗಿದೆ.

BMRCL ಮಾಹಿತಿ

ಇಂದು ಮಧ್ಯಾಹ್ನ ಸುಮಾರು 1:30 ಗಂಟೆಗೆ ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ (Emergency Exit) ಪ್ರದೇಶದ ಸಮೀಪ ಅಳವಡಿಸಲಾಗಿದ್ದ ಸೂಚನಾ ಫಲಕದಲ್ಲಿ (Sign Board) ಸಣ್ಣ ಪ್ರಮಾಣದ ಅಗ್ನಿ ಅವಘಡ ಸಂಭವಿಸಿದೆ.

ಮಾಹಿತಿ ದೊರೆಯುತ್ತಿದ್ದಂತೆಯೇ ಕಾರ್ಯಾಚರಣೆ ಹಾಗೂ ಅಗ್ನಿಶಾಮಕ ತಂಡಗಳು ಸ್ಥಳಕ್ಕೆ ತಕ್ಷಣ ಧಾವಿಸಿ ಅಗ್ನಿಯನ್ನು ಯಶಸ್ವಿಯಾಗಿ ನಂದಿಸಿವೆ. ಪ್ರಸ್ತುತ ಪರಿಸ್ಥಿತಿ ಸಂಪೂರ್ಣ ನಿಯಂತ್ರಣದಲ್ಲಿದೆ.

ಈ ಘಟನೆಯಿಂದ ಯಾವುದೇ ಅನಾಹುತ ಸಂಭವಿಸಿಲ್ಲ ಹಾಗೂ ಮೆಟ್ರೋ ರೈಲು ಸಂಚಾರ ಸೇವೆಗಳಲ್ಲಿ ಯಾವುದೇ ವ್ಯತ್ಯಯ ಉಂಟಾಗಿಲ್ಲ. ಎಲ್ಲಾ ಮೆಟ್ರೋ ಸೇವೆಗಳು ಎಂದಿನಂತೆ ಸುಗಮವಾಗಿ ಕಾರ್ಯನಿರ್ವಹಿಸುತ್ತಿವೆ.

ಸಾರ್ವಜನಿಕರು ಯಾವುದೇ ಆತಂಕ ಪಡುವ ಅಗತ್ಯವಿಲ್ಲ. ಅಗತ್ಯವಿದ್ದಲ್ಲಿ ಹೆಚ್ಚಿನ ಮಾಹಿತಿಯನ್ನು ನಂತರ ಹಂಚಿಕೊಳ್ಳಲಾಗುವುದು.