ಬನ್ನೇರುಘಟ್ಟ ಜೈವಿಕ ಉದ್ಯಾನವನದಿಂದ ಜಪಾನ್‌ನ ಹಿಮೇಜಿ ಸೆಂಟ್ರಲ್ ಪಾರ್ಕ್‌ಗೆ 4 ಆನೆಗಳನ್ನು ಕಳುಹಿಸಲಾಗುತ್ತಿದೆ. ಪ್ರತಿಯಾಗಿ, ಚೀತಾ, ಜಾಗ್ವಾರ್, ಪೂಮಾ, ಚಿಂಪಾಂಜಿ ಮತ್ತು ಕ್ಯಾಪುಚಿನ್ ಕೋತಿಗಳು ಬನ್ನೇರುಘಟ್ಟಕ್ಕೆ ಬರಲಿವೆ. ಈ ಅಂತಾರಾಷ್ಟ್ರೀಯ ಪ್ರಾಣಿ ವಿನಿಮಯ ಕಾರ್ಯಕ್ರಮ ಐತಿಹಾಸಿಕ ಮೈಲಿಗಲ್ಲು.

ಬೆಂಗಳೂರು (ಜು.24): ಇತಿಹಾಸದಲ್ಲಿಯೇ ಇದೇ ಮೊದಲ ಬಾರಿಗೆ ಅಂತಾರಾಷ್ಟ್ರೀಯ ಪ್ರಾಣಿಗಳ (animal exchange) ವಿನಿಮಯ ಬೆಂಗಳೂರಿನಲ್ಲಿ ನಡೆಯಲಿದೆ. ಬನ್ನೇರುಘಟ್ಟ ಜೈವಿಕ ಉದ್ಯಾನವನದಿಂದ (Bannerghatta Biological Park) ಜಪಾನ್‌ನ (Japan) ಹಿಮೇಜಿ ಸೆಂಟ್ರಲ್ ಪಾರ್ಕ್‌ (Himeji Central Park)ಜೊತೆ ಪ್ರಾಣಿಗಳ ವಿನಿಮಯ ಆಗಲಿದೆ. ಕೇಂದ್ರ ಮೃಗಾಲಯ ಪ್ರಾಧಿಕಾರದ ಈ ನಿಟ್ಟಿನಲ್ಲಿ ನಿರಂತರ ಪ್ರಯತ್ನದಿಂದ ಇದು ಸಾಧ್ಯವಾಗುದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಬನ್ನೇರುಘಟ್ಟ ಜೈವಿಕ ಉದ್ಯಾನವನದ 1 ಗಂಡು ಮತ್ತು 3 ಹೆಣ್ಣು ಆನೆಗಳನ್ನು ವಿನಿಮಯ ಮಾಡಿಕೊಳ್ಳಲಾಗುತ್ತಿದೆ. ಸುರೇಶ್ (8 ವರ್ಷ), ಗೌರಿ ( 9 ), ಶ್ರುತಿ(7) ತುಳಸಿ (5) ಆನೆಗಳು ಜಪಾನ್‌ಗೆ ತೆರಳಲಿದ್ದರೆ, ಪ್ರತಿಯಾಗಿ ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ 4 ಚೀತಾ, 4 ಜಾಗ್ವಾರ್, 4 ಪೂಮಾ, 3 ಚಿಂಪಾಂಜಿ ಮತ್ತು 8 ಕ್ಯಾಪುಚಿನ್ ಕೋತಿಗಳು ಆಗಮಿಸಲಿವೆ.

ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಜಪಾನ್ ದೇಶದ ಒಸಾಕಾ ಕಾನ್ಸೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆನೆಗಳನ್ನು ರವಾನೆ ಮಾಡಲಾಗುತ್ತದೆ. ಕತಾರ್ ಏರ್ವೇಸ್ ನ ಸರಕು ವಿಮಾನ B777-200F ದಲ್ಲಿ ಆನೆಗಳನ್ನು ರವಾನಿಸಲಾಗುತ್ತದೆ. ಸುಮಾರು 20 ಗಂಟೆಗಳ ಪ್ರಯಾಣಕ್ಕೆ ಸಿದ್ದತೆ ಮಾಡಿಕೊಳ್ಳಲಾಗುತ್ತಿದ್ದು, ಈಗಾಗಲೇ ಆನೆಗಳಿಗೆ ವಿಮಾನ‌ ಪ್ರಯಾಣಕ್ಕೆ ತರಬೇತಿ ನೀಡಲಾಗಿದೆ.

ಬನ್ನೇರುಘಟ್ಟ ಜೈವಿಕ ಉದ್ಯಾನವನದ ಇಬ್ಬರು ಪಶುವೈದ್ಯಕೀಯ ಅಧಿಕಾರಿಗಳು, ನಾಲ್ವರು ಪಾಲಕರು, ಒಬ್ಬ ಮೇಲ್ವಿಚಾರಕ ಮತ್ತು ಒಬ್ಬ ಜೀವಶಾಸ್ತ್ರಜ್ಞೆ ಪ್ರಾಣಿಗಳೊಂದಿಗೆ ಪ್ರಯಾಣ ಮಾಡಲಿದ್ದಾರೆ. ಹೊಸ ಪರಿಸರಕ್ಕೆ ಒಗ್ಗಿಕೊಳ್ಳಲು ಆನೆಗಳಿಗೆ ತರಬೇತಿ ನೀಡಲು ಪ್ರಯಾಣ ಮಾಡಲಿದ್ದು, ಎರಡು ವಾರಗಳ ಕಾಲ ಹಿಮೇಜಿ ಪಾರ್ಕ್‌ನಲ್ಲಿ ಅಲ್ಲಿನ ಸಿಬ್ಬಂದಿಗೆ ತರಬೇತಿ ನೀಡಲಿದ್ದಾರೆ ಎಂದು ಬನ್ನೇರುಘಟ್ಟ ಜೈವಿಕ ಉದ್ಯಾನವನದ ಅಧಿಕಾರಿಗಳಿ ಮಾಹಿತಿ ನೀಡಿದ್ದಾರೆ.