Bengaluru ಅರ್ಧ ಬೆಂಗಳೂರಿಗೆ ಎರಡು ದಿನ ಪವರ್‌ ಕಟ್‌!

 power outage in bengaluru ರಾಜ್ಯ ರಾಜಧಾನಿ ಬೆಂಗಳೂರಿಗೆ ಎರಡು ದಿನ ವಿದ್ಯುತ್‌ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ನೀಡಿದೆ. ನಿರ್ವಹಣಾ ಕಾಮಗಾರಿ ಇರುವ ಕಾರಣ ಪವರ್‌ ಕಟ್‌ ಇರುವುದಾಗಿ ತಿಳಿಸಿದೆ.

bescom power outage In Bengaluru Major Areas for Two days  san

ಬೆಂಗಳೂರು (ಜೂ.21): ರಾಜ್ಯ ರಾಜಧಾನಿ ಬೆಂಗಳೂರಿನ ಹಲವೆಡೆ ಎರಡು ದಿನ ಪವರ್ ಕಟ್ ಇರಲಿದೆ ಎಂದು ಬೆಸ್ಕಾಂ ತಿಳಿಸಿದೆ. ಅರ್ಧ ಬೆಂಗಳೂರಿಗೆ ಎರಡು ದಿನ ವಿದ್ಯುತ್ ಪೂರೈಕೆ‌ ವ್ಯತ್ಯಯ ಆಗಲಿದೆ. ತುರ್ತು ನಿರ್ವಹಣಾ ಕಾಮಗಾರಿ ಹಿನ್ನಲೆ ಎರಡು ದಿನ ವಿದ್ಯುತ್ ಸ್ಥಗಿತ ಮಾಡುವುದಾಗಿ ತಿಳಿಸಲಾಗಿದೆ. ಭಾನುವಾರ ಹಾಗೂ ಸೋಮವಾರ ರಾಜಧಾನಿಯ ಬಹುತೇಕ ಕಡೆ ಪವರ್‌ ಇರೋದಿಲ್ಲ ಎಂದಿದೆ. ಭಾನುವಾರ ಹಾಗೂ ಸೋಮವಾರ ಎರಡು ದಿನ ಬೆಳಿಗ್ಗೆ 10ರಿಂದ ಸಂಜೆ 5ರವರೆಗೆ ವಿದ್ಯುತ್ ವ್ಯತ್ಯಯ ಆಗಲಿದೆ.

ಭಾನುವಾರ ವಿದ್ಯುತ್‌ ವ್ಯತ್ಯಯವಾಗುವ ಸ್ಥಳಗಳು:  ಶೇಷಾದ್ರಿಪುರಂ ರಸ್ತೆ,  ಸಿಎಂ ಮನೆ ರೋಡ್, ಸದಾಶಿವನಗರ ಸುತ್ತಮುತ್ತ, ಕ್ರೆಸೆಂಟ್ ರೋಡ್ , ಸೆವೆನ್ ಮಿನಿಸ್ಟರ್ ಕ್ವಾಟ್ರಸ್, ಕುಮಾರಪಾರ್ಕ್ ರೋಡ್, ಗಾಂದಿನಗರ, ಆನಂದ ರಾವ್ ಸರ್ಕಲ್,  ಕೆಪಿಟಿಸಿಎಲ್ ಕಚೇರಿಗಳು, ರೇಸ್ ಕೋರ್ಸ್, ವಸಂತನಗರ ಸುತ್ತಮುತ್ತ, ಅರಮನೆ ರಸ್ತೆ, ಕಾಟನ್ ಪೇಟೆ, ಮಾಗಡಿ ರಸ್ತೆ ಸುತ್ತಮುತ್ತ, ಆರ್‌ಬಿಐ, ನಗರ್ತಪೇಟೆ, ಮಾರ್ಥಾಸ್ ರೋಡ್, ಎಸ್ಪಿ ರೋಡ್, ನಗರ್ತಪೇಟೆ, ಚಿಕ್ಕಪೇಟೆ ಸುತ್ತಮುತ್ತ, ವಿಠಲ್ ಮಲ್ಯ ರೋಡ್, ಮಂತ್ರಿಮಾಲ್, ಮಲ್ಲೇಶ್ವರಂ ಸುತ್ತಮುತ್ತ ವಿದ್ಯುತ್ ಇರುವುದಿಲ್ಲ.

ಸರ್ಕಾರಿ ಶಾಲೆ, ಪಿಯು ಕಾಲೇಜುಗಳಿಗೆ ಉಚಿತ ವಿದ್ಯುತ್ ಮತ್ತು ನೀರು ಪೂರೈಕೆ

24ರಂದು ಹೆಣ್ಣೂರು ಕೇಂದ್ರದಲ್ಲಿ ವಿದ್ಯುತ್‌ ವ್ಯತ್ಯಯವಾಗುವ ಸ್ಥಳಗಳು:  ಹೆಣ್ಣೂರು ಬಂಡೆ, ಸಮುದ್ರಿಕಾ ಎನ್‌ಕ್ಲೀವ್, ಗ್ರೇಸ್ ಗಾರ್ಡನ್, ಕ್ರಿಸ್ಟ್ ಜಯಂತಿ ಕಾಲೇಜ್, ಕೆ.ನಾರಾಯಣಪುರ, ಬಿಳಿಶಿವಾಲೆ, ಆಶಾ ಟೌನ್‌ಶಿಪ್, ಐಶ್ವರ್ಯ ಲೇಔಟ್, ಮಾರುತಿ ಟೌನ್‌ಶಿಪ್, ನಗರಗಿರಿ ಟೌನ್‌ಶಿಪ್, ಕೆ.ನಾರಾಯಣಪುರ ಕ್ರಾಸ್, ಬಿ.ಡಿ.ಎಸ್. ಗಾರ್ಡನ್, ಕೊತನೂರು. ಪಟೇಲ್ ರಾಮಯ್ಯ ಲೇಔಟ್, ಅಂಜನಪ್ಪ ಲೇಔಟ್, ಸಿ.ಎಸ್.ಐ ಗೇಟ್, ಬೈರತಿ ಕ್ರಾಸ್, ಬೈರತಿ ಹಳ್ಳಿ, ಎವರ್ ಗ್ರೀನ್ ಲೇಔಟ್, ಕನಕ ಶ್ರೀ ಲೇಔಟ್, ಗೆದ್ದಲ ಹಳ್ಳಿ, ಬ್ಲೆಸ್ಸಿಂಗ್ ಗಾರ್ಡನ್, ಮಂತ್ರಿ ಅಪಾರ್ಟ್‌ ಮೆಂಟ್, ಹಿರೇಮಠ ಲೇಔಟ್, ಟ್ರಿನಿಟಿ ಫಾರ್ಚೂನ್‌, ಮೈಕಲ್ ಸ್ಕೂಲ್, ಬಿ.ಹೆಚ್.ಕೆ. ಇಂಡಸ್ಟ್ರೀಸ್, ಜಾನಕೀ ರಾಮ್ ಲೇಔಟ್, ವಡ್ಡರ ಪಾಳ್ಯ, ಅನುಗ್ರಹ ಲೇಔಟ್, ಕಾವೇರಿ ಲೇಔಟ್, ಆತ್ಮ ವಿದ್ಯಾನಗರ, ಬೈರತಿ ಹಳ್ಳಿ, ಕೆ.ಆರ್.ಸಿ. ದೊಡ್ಡಗುಬ್ಬಿ ಕ್ರಾಸ್, ಕುವೆಂಪು ಲೇಔಟ್, ಸಂಗಮ್ ಎನ್‌ಕ್ಲೀವ್, ಬೈರತಿ ಬಂಡೆ, ನಕ್ಷತ್ರ ಲೇಔಟ್, ತಿಮ್ಮೇಗೌಡ ಲೇಔಟ್, ಆಂದ್ರ ಕಾಲೋನಿ ಮಂಜುನಾಥ್ ನಗರ, ಹೊರಮಾವು ಬಿಬಿಎಂಪಿ, ಅಗರ ಗ್ರಾಮ, ಪಟಾಲಮ್ಮ ಟೆಂಪಲ್, ಎ.ಕೆ.ಆರ್ ಸ್ಕೂಲ್, ಹೊಸ ಮಿಲೇನಿಯಮ್ ಸ್ಕೂಲ್, ಲಕ್ಕಮ್ಮ ಲೇಔಟ್, ಪ್ರಕಾಶ್ ಗಾರ್ಡನ್, ಕ್ರಿಸ್ಟೈನ್ ಕಾಲೇಜು ರಸ್ತೆ ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

Breaking: ಬೆಂಗಳೂರು ಜನರೇ ಅಲರ್ಟ್‌, ಈ ಎರಡು ದಿನ ನಗರಕ್ಕೆ ನೀರು ಪೂರೈಕೆ ಇಲ್ಲ!


 

Latest Videos
Follow Us:
Download App:
  • android
  • ios