ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆರ್‌ಸಿಬಿ ಅಭಿಮಾನಿಗಳ ಅತಿರೇಕದ ಸಂಭ್ರಮಾಚರಣೆಯಲ್ಲಿ ಕಾರಿನ ಮೇಲೆ ಹತ್ತಿ ನಜ್ಜುಗುಜ್ಜು ಮಾಡಿದ ಘಟನೆ ನಡೆದಿದೆ.

ಬೆಂಗಳೂರು: ಅಭಿಮಾನಿಗಳ ಅತಿರೇಕದ ಅಭಿಮಾನಕ್ಕೆ ದೊಡ್ಡ ಅನಾಹುತವೇ ನಡೆದು ಹೋಗಿದೆ. ಸಂಭ್ರಮಾಚರಣೆ ಇರಬೇಕಾದ ಜಾಗದಲ್ಲಿ ಸೂತಕದ ಛಾಯೆ ಅವರಿಸಿದೆ. ಯಾವುದೇ ಭದ್ರತಾ ಪೂರ್ವಸಿದ್ಧತೆ ಇಲ್ಲದೇ ನಡೆದ ಕಾರ್ಯಕ್ರಮ ಇದಾಗಿದ್ದರಿಂದ ಈ ರೀತಿ ದೊಡ್ಡ ದುರಂತವೇ ಸಂಭವಿಸಿದೆ. ಚಿನ್ನಸ್ವಾಮಿ ಸ್ಟೇಡಿಯಂನ ಒಳಗೆ ಆಯೋಜನೆಯಾಗಿದ್ದ ಸಂಭ್ರಮಾಚರಣೆ ನೋಡಲು ಅಭಿಮಾನಿಗಳು ಸಾಗರೋಪಾದಿಯಲ್ಲಿ ಬಂದಿದ್ದು, ಗೇಟ್‌ ನೂಕಿ, ಗೇಟ್ ಮೇಲೆ ಹತ್ತಿ ಒಳನುಗ್ಗಲು ಕೆಲವರು ಯತ್ನಿಸಿದ ಪರಿಣಾಮ ಈ ದುರಂತ ಸಂಭವಿಸಿದೆ. ಅಭಿಮಾನಿಗಳ ಅಬ್ಬರ ಯಾವ ರೀತಿ ಇತ್ತು ಎಂಬುದಕ್ಕೆ ಚಿನ್ನಾಸ್ವಾಮಿ ಸ್ಟೇಡಿಯಂ ಬಳಿ ಇದ್ದ ಕಾರೊಂದು ಸಾಕ್ಷಿಯಾಗಿದೆ. ಕಾರಿನ ಮೇಲೆ ಹಲವು ಜನರು ಹತ್ತಿದ್ದರಿಂದ ಕಾರಿನ ಮುಂಭಾಗದ ಗ್ಲಾಸ್‌ ಹಾಗೂ ಕಾರಿನ ಮೇಲ್ಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಇದರ ವೀಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಚಿನ್ನಸ್ವಾಮಿ ಸ್ಟೇಡಿಯಂ ಹೊರಭಾಗ ನಿಲ್ಲಿಸಿದ್ದ ಕಾರೊಂದರ ಮೇಲೆ ಜನ ಏರಿದ್ದರಿಂದ ಈ ಅನಾಹುತ ಸಂಭವಿಸಿದೆ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕರ್ನಾಟಕ ರಾಜ್ಯ ಕ್ರಿಕೆಟ್ ಅಕಾಡೆಮಿ ಆರ್‌ಸಿಬಿ ಕ್ರಿಕೆಟಿಗರಿಗೆ ಇಲ್ಲಿ ಸನ್ಮಾನ ಏರ್ಪಡಿಸಿತ್ತು. ಆದರೆ ಇದು ದುರಂತವಾಗಿ ಬದಲಾಗಿದೆ. ಇದುವರೆಗೆ ಒಟ್ಟು 11 ಜನ ಸಾವನ್ನಪ್ಪಿದ ಬಗ್ಗೆ ಮಾಹಿತಿ ಇದು, ಮೃತಲ್ಲಿ ಒಂದು ಮಗು ಕೂಡ ಸೇರಿದೆ. ಬೌರಿಂಗ್ ಆಸ್ಪತ್ರೆ ಹಾಗೂ ವೈದೇಹಿ ಆಸ್ಪತ್ರೆಯಲ್ಲಿ ಗಾಯಾಗಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಬೌರಿಂಗ್ ಆಸ್ಪತ್ರೆಗೆ ಬೆಂಗಳೂರು ಕಮೀಷನರ್‌ ದಯಾನಂದ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Scroll to load tweet…

ಪೊಲೀಸರ ಲಘು ಲಾಠಿ ಚಾರ್ಜ್:

ಮತ್ತೊಂದೆಡೆ ಇಷ್ಟು ದೊಡ್ಡ ಅನಾಹುತವೇ ಸಂಭವಿಸಿದರೂ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಮತ್ತೆ ನೂಕುನುಗ್ಗಲು ಉಂಟಾಗಿದ್ದು, ಗುಂಪು ಚದುರಿಸಲು ಪೊಲೀಸರು ಲಾಠಿ ಚಾರ್ಜ್‌ ಮಾಡಿದ್ದಾರೆ. ಮನೆಗಳಿಗೆ ತೆರಳುವಂತೆ ಅಭಿಮಾನಿಗಳಿಗೆ ಪೊಲೀಸರು ಮನವಿ ಮಾಡುತ್ತಿದ್ದಾರೆ.

ಮತ್ತೊಂದೆಡೆ ಇಷ್ಟು ದುರಂತ ಸಂಭವಿಸಿದರು ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಮತ್ತೆ ನೂಕುನುಗ್ಗಲು ಉಂಟಾಗಿದ್ದು, ಗುಂಪು ಚದುರಿಸಲು ಪೊಲೀಸರು ಲಾಠಿ ಚಾರ್ಜ್‌ ಮಾಡಿದ್ದಾರೆ. ಆದರೆ ಪೊಲೀಸರ ಮನವಿಗೆ ಅಭಿಮಾನಿಗಳು ಕದಲದೇ ನಿಂತಿದ್ದು, ಅಭಿಮಾನಿಗಳನ್ನು ನಿಯಂತ್ರಿಸುವುದೇ ಪೊಲೀಸರಿಗೆ ದೊಡ್ಡ ಸವಾಲಾಗಿದೆ. ಇತ್ತ ಬೌರಿಂಗ್ ಆಸ್ಪತ್ರೆಗೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿದ್ದು, ಗಾಯಾಗಳುಗಳು ಯೋಗಕ್ಷೇಮ ವಿಚಾರಿಸಿದ್ದಾರೆ.

Scroll to load tweet…

ಜೀವಕ್ಕಿಂತ ಯಾವುದೂ ದೊಡ್ಡದ್ದಲ್ಲ: ಡಿಕೆಶಿ ಸಂತಾಪ
ಈ ವಿಚಾರಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿಕೆ ಶಿವಕುಮಾರ್ ಟ್ವಿಟ್ ಮಾಡಿದ್ದು, ಆರ್‌ಸಿಬಿಯ ಐಪಿಎಲ್ ಗೆಲುವಿನ ಸಂಭ್ರಮಾಚರಣೆಗೆ ಸಾಕ್ಷಿಯಾಗಬೇಕಿದ್ದ ಜನರು ದುರಂತಕ್ಕೆ ಒಳಗಾಗಿ, ಮೃತಪಟ್ಟಿರುವುದು ತೀವ್ರ ನೋವು ಮತ್ತು ಆಘಾತ ತಂದಿದೆ. ಮೃತರಿಗೆ ನನ್ನ ಸಂತಾಪಗಳು. ಅವರ ಕುಟುಂಬಕ್ಕೆ ನನ್ನ ಸಾಂತ್ವನಗಳು. ಅಭಿಮಾನ ಇರಲಿ, ಆದರೆ ಜೀವಕ್ಕಿಂತ ದೊಡ್ಡದಲ್ಲ. ದಯವಿಟ್ಟು ಎಲ್ಲರೂ ಸುರಕ್ಷಿತವಾಗಿರಿ ಎಂದು ಮನವಿ ಮಾಡಿಕೊಳ್ಳುತ್ತೇನೆ ಎಂದು ಅವರು ಹೇಳಿದ್ದಾರೆ.

Scroll to load tweet…

ಮುನ್ನೆಚ್ಚರಿಕೆ ವಹಿಸದಿರುವುದೇ ಈ ಮಹಾದುರಂತಕ್ಕೆ ನೇರ ಕಾರಣ: ಹೆಚ್‌ಡಿಕೆ

ಹಾಗೆಯೇ ಕೇಂದ್ರ ಸಚಿವ ಹೆಚ್‌ ಡಿ ಕುಮಾರಸ್ವಾಮಿ ಕೂಡ ಸಂತಾಪ ವ್ಯಕ್ತಪಡಿಸಿದ್ದು, ಬೆಂಗಳೂರು ನಗರದ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಆರ್‌ಸಿಬಿ ವಿಜಯೋತ್ಸವದ ಸಂದರ್ಭದಲ್ಲಿ ನೂಕುನುಗ್ಗಲುನಿಂದ ಉಂಟಾದ ಕಾಲ್ತುಳಿತಕ್ಕೆ ಹತ್ತಕ್ಕೂ ಹೆಚ್ಚು ಜನರು ಧಾರುಣವಾಗಿ ಸಾವನ್ನಪ್ಪಿರುವ ಘಟನೆ ನನಗೆ ತೀವ್ರ ದಿಗ್ಭ್ರಮೆ ಉಂಟು ಮಾಡಿದೆ.ಗೆಲುವಿನ ಸಂಭ್ರಮಕ್ಕೆ ಮುನ್ನವೇ ಮುಗ್ಧರ ಜೀವ ನಷ್ಟವಾಗಿರುವುದು ನನಗೆ ಅತೀವ ದುಃಖ ತಂದಿದೆ.

ಸರಿಯಾದ ಪೂರ್ವಸಿದ್ಧತೆ ಮಾಡಿಕೊಳ್ಳದೆ, ಯಾವುದೇ ಮುನ್ನೆಚ್ಚರಿಕೆ ವಹಿಸದಿರುವುದೇ ಈ ಮಹಾದುರಂತಕ್ಕೆ ನೇರ ಕಾರಣ. ದುರಂತದ ಹೊಣೆಯನ್ನು ರಾಜ್ಯ ಕಾಂಗ್ರೆಸ್ ಸರಕಾರವೇ ಹೊತ್ತುಕೊಳ್ಳಬೇಕು. ಗಾಯಾಳುಗಳಿಗೆ ಉತ್ತಮ ಚಿಕಿತ್ಸೆ ಕೊಡಿಸುವುದರ ಜತೆಗೆ ಮೃತರ ಕುಟುಂಬಗಳ ನೆರವಿಗೆ ಸರಕಾರ ಕೂಡಲೇ ಧಾವಿಸಬೇಕು.ಕ್ರೀಡಾಂಗಣ ಹಾಗೂ ವಿಧಾನಸೌಧದ ಬಳಿ ಸಂಭ್ರಮವನ್ನು ಕಣ್ತುಂಬಿಕೊಳ್ಳಲು ಬಂದಿದ್ದ ಕ್ರಿಕೆಟ್ ಪ್ರೇಮಿಗಳು ಗಾಬರಿ, ಆತುರಕ್ಕೆ ಒಳಗಾಗದೆ ಕ್ಷೇಮವಾಗಿ ಮನೆ ತಲುಪಬೇಕು ಎಂಬುದು ನನ್ನ ಕಳಕಳಿ. ಪೊಲೀಸರು ಈ ನಿಟ್ಟಿನಲ್ಲಿ ತುರ್ತುಕ್ರಮ ವಹಿಸಿ ಜನರಿಗೆ ನೆರವಾಗಬೇಕು ಎಂದು ಅವರು ಟ್ವಿಟ್ ಮಾಡಿದ್ದಾರೆ.

Scroll to load tweet…