ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಆರೋಗ್ಯದಲ್ಲಿ ಏರುಪೇರು, ಅಪೋಲೋ ಆಸ್ಪತ್ರೆ ದಾಖಲು, ಇಂದು ಮಧ್ಯಾಹ್ನ ಅಸ್ವಸ್ಥಗೊಂಡ ಪಾರ್ವತಿ ಅವರನ್ನು ಆಸ್ಪತ್ರೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಬೆಂಗಳೂರು (ನ.17) ಮುಖ್ಯಮಂತ್ರಿ ಸಿದ್ದರಾಮಯ್ಯ ದೆಹಲಿ ಪ್ರವಾಸ ಕೈಗೊಂಡಿದ್ದರೆ, ಇತ್ತ ಮುಖ್ಯಮಂತ್ರಿ ಪತ್ನಿ ಪಾರ್ವತಿ ಆರೋಗ್ಯದಲ್ಲಿ ಏರುಪೇರಾಗಿ ಆಸ್ಪತ್ರೆ ದಾಖಲಾಗಿದ್ದಾರೆ. ಶ್ವಾಸಕೋಶ ಸಮಸ್ಯೆಯಿಂದ ಆಸ್ಪತ್ರೆ ದಾಖಲಾಗಿದ್ದಾರೆ. ಇಂದು ಮಧ್ಯಾಹ್ನ ಸಿಎಂ ಪತ್ನಿ ಪಾರ್ವತಿ ಅವರು ಉಸಿರಾಟದ ಸಮಸ್ಯೆ ಎದುರಿಸಿದ್ದಾರೆ. ಶ್ವಾಸಕೋಶದಲ್ಲಿ ಎದುರಾದ ಸಮಸ್ಯೆಯಿಂದ ಅಸ್ಪಸ್ಥರಾಗಿದ್ದಾರೆ. ಹೀಗಾಗಿ ಮಧ್ಯಾಹ್ನ 3 ಗಂಟೆಗೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಶೇಷಾದ್ರಿಪುರಂ‌‌ನ ಅಪೋಲೋ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಐಸಿಯುವಿನಲ್ಲಿ ಚಿಕಿತ್ಸೆ

ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರ ಪಲ್ಸ್ ರೇಟ್ ಕುಸಿದ ಕಾರಣ ತೀವ್ರ ಅಸ್ವಸ್ಥಗೊಂಡಿದ್ದರು. ಉಸಿರಾಟ ಸಂಬಂಧಿತ ಸಮಸ್ಯೆಯಿಂದ ಬಳಲಿದ ಕಾರಣ ಪಾರ್ವತಿ ಅವರನ್ನು ಐಸಿಯುವಿಗೆ ದಾಖಲು ಮಾಡಲಾಗಿದೆ. ಮಧ್ಯಾಹ್ನ ಆಸ್ಪತ್ರೆ ಕರೆತಂದ ವೇಳೆ ಪರಿಶೀಲನೆ ನಡೆಸಿದ ವೈದ್ಯರು ಐಸಿಯುವಿಗೆ ಶಿಫ್ಟ್ ಮಾಡಿದ್ದಾರೆ. ಐಸಿಯು ನಲ್ಲಿಯೇ ಪಾರ್ವತಿ ಅವರಿಗೆ ಚಿಕಿತ್ಸೆ ಮುಂದುವರಿದಿದೆ.

ಪಾರ್ವತಿ ಆರೈಕೆಯಲ್ಲಿ ಪುತ್ರ ಯತೀಂದ್ರ ಸಿದ್ದರಾಮಯ್ಯ

ಮನೆಯಲ್ಲಿರುವಾಗ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿಯ ಆರೋಗ್ಯದಲ್ಲಿ ಏರುಪೇರಾಗಿದೆ. ತಕ್ಷಣವೇ ಪುತ್ರ ಯತೀಂದ್ರ ಸಿದ್ದರಾಮಯ್ಯ ಸೇರಿದಂತೆ ಇತರರು ಆಸ್ಪತ್ರೆ ದಾಖಲಿಸಿದ್ದಾರೆ. ಸದ್ಯ ಯತೀಂದ್ರ ಸಿದ್ದರಾಮಯ್ಯ ಅಪೋಲೋ ಆಸ್ಪತ್ರೆಯಲ್ಲಿದ್ದಾರೆ. ಸಿಎಂ ಪತ್ನಿ ಪಾರ್ವತಿಯವರಿಗೆ ಐಸಿಯು ನಲ್ಲಿ ಚಿಕಿತ್ಸೆ ಮುಂದುವರಿದೆ. ಸದ್ಯ ಪಾರ್ವತಿ ಆರೋಗ್ಯದಲ್ಲಿ ಚೇತರಿಕೆ ಕಂಡಿದ್ದು, ಆರೋಗ್ಯವಾಗಿದ್ದಾರೆ ಅನ್ನೋ ಮಾಹಿತಿ ಬಂದಿದೆ. ಇತ್ತ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಧಾನಿ ಮೋದಿ ಭೇಟಿ, ಕಾಂಗ್ರೆಸ್ ಹೈಕಮಾಂಡ್ ಬೇಟಿ ಸಲುವಾಗಿ ದೆಹಲಿಯಲ್ಲಿ ಬೀಡು ಬಿಟ್ಟಿದ್ದರು.

ಪಾರ್ವತಿ ಆರೋಗ್ಯದ ಮೇಲೆ ವೈದ್ಯರ ತಂಡದ ನಿಗಾ

ಸಿದ್ದರಾಮಯ್ಯ ಪಾರ್ವತಿ ಆರೋಗ್ಯದ ಮೇಲೆ ಅಪೋಲೋ ಆಸ್ಪತ್ರೆ ವೈದ್ಯರು ನಿಗಾ ವಹಿಸಿದ್ದಾರೆ. ನುರಿತ ವೈದ್ಯರ ತಂಡ ಪಾರ್ವತಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಆಸ್ಪತ್ರೆಗೆ ಶಾಸಕ ಶಿವಲಿಂಗೇಗೌಡ ಆಗಮನ

ಆಸ್ಪತ್ರೆಗೆ ಶಾಸಕ ಶಿವಲಿಂಗೇಗೌಡ ಆಗಮನ

ಮಾಹಿತಿ ತಿಳಿಯುತ್ತಿದ್ದಂತೆ ಆಸ್ಪತ್ರೆಗೆ ಶಾಸಕ ಶಿವಲಿಂಗೇಗೌಡ ಆಗಮಿಸಿ ವೈದ್ಯರ ಜೊತೆ ಮಾತುಕತೆ ನಡೆಸಿದ್ದಾರೆ. ಪಾರ್ವತಿ ಅವರ ಆರೋಗ್ಯದ ಕುರಿತು ವಿಚಾರಿಸಿದ್ದಾರೆ. ಸಿಎಂ ಪತ್ನಿ ಆರೋಗ್ಯ ವಿಚಾರಿಸಲು ಸಾಧ್ಯವಾಗಿಲ್ಲ.ಐಸಿಯುವಿನಲ್ಲಿ ಚಿಕಿತ್ಸೆ ನೀಡುತ್ತಿರುವ ಕಾರಣ ಯಾರಿಗೂ ಪ್ರವೇಶವಿಲ್ಲ. ಯತೀಂದ್ರ ಅವರನ್ನು ಮಾತನಾಡಿಸಿದ್ದೇನೆ. ಪಾರ್ವತಿ ಅವರು ಆರೋಗ್ಯವಾಗಿದ್ದಾರೆ ಎಂದಿದ್ದಾರೆ ಎಂದು ಶಿವಲಿಂಗೇಗೌಡ ಹೇಳಿದ್ದಾರೆ. ಯಾರನ್ನೂ ನೋಡಲು ಬಿಡುತ್ತಿಲ್ಲ. ಚಿಕಿತ್ಸೆ ಮುಂದುವರಿದಿದೆ ಎಂದು ಶಿವಲಿಂಗೇಗೌಡ ಹೇಳಿದ್ದಾರೆ.