Asianet Suvarna News Asianet Suvarna News

ಬಿಬಿಎಂಪಿಯಿಂದ ದೇಶದಲ್ಲಿ ಮೊಟ್ಟ ಮೊದಲ ರ‍್ಯಾಪಿಡ್ ರಸ್ತೆ ನಿರ್ಮಾಣ

ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವತಿಯಿಂದ ನಗರದ ಹಳೆ ಮದ್ರಾಸ್ ರಸ್ತೆಯ ಹೊಸ ಬಿನ್ನಮಂಗಲ ವೃತ್ತದ ಬಳಿ ವಿನೂತನ ತಂತ್ರಾಜ್ಞಾನದೊಂದಿಗೆ 500 ಮೀಟರ್ ಉದ್ದದ ರಸ್ತೆಯಲ್ಲಿ ಪ್ರಾಯೋಗಿಕವಾಗಿ ರ‍್ಯಾಪಿಡ್ ರಸ್ತೆ (ಫ್ರೀಕಾಸ್ಟ್ ಪೋಸ್ಟ್ ಟೆನ್ಷನಿಂಗ್ ಕಾಂಕ್ರೀಟ್ ಪೇವ್‌ಮೆಂಟ್)ಯನ್ನು ನಿರ್ಮಾಣ ಮಾಡಲಾಗುತ್ತಿದೆ.

First rapid road construction in the country by BBMP
Author
First Published Nov 23, 2022, 5:23 PM IST

ವರದಿ - ರಕ್ಷಾ ಕಟ್ಟೆಬೆಳಗುಳಿ, ಏಷ್ಯಾನೆಟ್‌ ಸುವರ್ಣ ನ್ಯೂಸ್

ಬೆಂಗಳೂರು (ನ.23) : ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವತಿಯಿಂದ ನಗರದ ಹಳೆ ಮದ್ರಾಸ್ ರಸ್ತೆಯ ಹೊಸ ಬಿನ್ನಮಂಗಲ ವೃತ್ತದ ಬಳಿ ವಿನೂತನ ತಂತ್ರಾಜ್ಞಾನದೊಂದಿಗೆ 500 ಮೀಟರ್ ಉದ್ದದ ರಸ್ತೆಯಲ್ಲಿ ಪ್ರಾಯೋಗಿಕವಾಗಿ ರ‍್ಯಾಪಿಡ್ ರಸ್ತೆ (ಫ್ರೀಕಾಸ್ಟ್ ಪೋಸ್ಟ್ ಟೆನ್ಷನಿಂಗ್ ಕಾಂಕ್ರೀಟ್ ಪೇವ್‌ಮೆಂಟ್)ಯನ್ನು ನಿರ್ಮಾಣ ಮಾಡಲಾಗುತ್ತಿದೆ. ಈ ರಸ್ತೆ ನಿರ್ಮಾಣ ಕಾರ್ಯ ದೇಶದಲ್ಲಿಯೇ ಮೊದಲ ಪ್ರಯತ್ನವಾಗಿದ್ದು, ದೀರ್ಘಕಾಲಿಕ ಬಳಕೆ ಬರುತ್ತದೆ ಎಂದು ಹೇಳಲಾಗುತ್ತಿದೆ.

ಈಗಾಗಲೇ ನಗರದಲ್ಲಿ ವೈಟ್ ಟಾಪಿಂಗ್ (white tapping) ಅಥವಾ ಟೆಂಡರ್ ಶ್ಯೂರ್ (Tendersure) ಕಾಮಗಾರಿ ನಡೆಸುವ ಸಮಯದಲ್ಲಿ ವಾಹನಗಳ ಸಂಚಾರ ನಿಷೇಧಿಸುವುದರಿಂದ ದಟ್ಟಣೆ (Traffic jam) ಹೆಚ್ಚಾಗುತ್ತದೆ. ಇದನ್ನು ತಪ್ಪಿಸುವ ಸಲುವಾಗಿ ಪಾಲಿಕೆಯು ಪ್ರಾಯೋಗಿಕವಾಗಿ ರ‍್ಯಾಪಿಡ್ ರಸ್ತೆಯೆಂಬ (Rapid Road) ವಿನೂತನ ತಂತ್ರಾಜ್ಞಾನವನ್ನು ಅನುಷ್ಟಾನಗೊಳಿಸುತ್ತಿದೆ. ಇದರಿಂದ ರಸ್ತೆ ಕ್ಯೂರಿಂಗ್ (Curing) ಮಾಡುವ ಅವಶ್ಯಕತೆಯಿರುವುದಿಲ್ಲ. ಪ್ರೀಕಾಸ್ಟ್ ಪ್ಯಾನಲ್ (Precast panel) ಅಳವಡಿಸಿದ ಕೂಡಲೆ ವಾಹನಗಳ ಸಂಚಾರಕ್ಕೆ ಅನುವುಮಾಡಿಕೊಡಬಹುದಾಗಿದೆ.

ನಾಳೆಯಿಂದ ರೈಲು ನಿಲ್ದಾಣ ಮುಂಭಾಗದ ರಸ್ತೆಯಲ್ಲಿ ವಾಹನ ಸಂಚಾರ ಬಂದ್

ಈಗ ಬಿಬಿಎಂಪಿಯು, ಆದಿತ್ಯ ಬಿರ್ಲಾ ಅಲ್ಟ್ರಾ ಟೆಕ್ (Ultra Tech) ಸಂಸ್ಥೆಯ ಸಹಯೋಗದೊಂದಿಗೆ ರ‍್ಯಾಪಿಡ್ ರಸ್ತೆ ತಂತ್ರಜ್ಞಾನವನ್ನು ಅಭಿವೃದ್ಧಿಪಡಿಸಲಾಗುತ್ತಿದೆ. ಸದರಿ ರಸ್ತೆಯು ದೀರ್ಘಕಾಲ ಬಾಳಿಕೆ (Long lasting) ಬರಲಿದ್ದು, ದೇಶದಲ್ಲಿ ಇದೇ ಮೊದಲ ಬಾರಿಗೆ ರ‍್ಯಾಪಿಡ್ ರಸ್ತೆಯೆಂಬ ವಿನೂತನ ತಂತ್ರಜ್ಞಾನವನ್ನು ಅನುಷ್ಠಾನಗೊಳಿಸಲಾಗಿದೆ. ಒಂದು ಫ್ರೀಕಾಸ್ಟ್ ಪ್ಯಾನಲ್ 5 ಅಡಿ ಅಗಲ, 20 ಅಡಿ ಉದ್ದ ಹಾಗೂ 7 ಇಂಚು ದಪ್ಪವಿರುತ್ತದೆ. ಪ್ರತಿ 45 ಮೀಟರ್ ಗೂ ಕ್ಷಿಪ್ರ ಗಟ್ಟಿಯಾಗಿಸುವ ಕಾಂಕ್ರೀಟ್ (Rapid Hardening Concrete) ಹಾಕಲಾಗುತ್ತದೆ. ಫ್ರೀಕಾಸ್ಟ್ ಪ್ಯಾನಲ್‌ಗಳನ್ನು ಬೇರೆಡೆ ತಯಾರಿಸಿ ಕ್ಯೂರಿಂಗ್ ಮಾಡಿಕೊಂಡು ತರಲಾಗುತ್ತದೆ. ರಸ್ತೆಗಳ ವಿನ್ಯಾಸಕ್ಕೆ (Design) ತಂಕ್ಕಂತೆ ಪ್ಯಾನಲ್ ಗಳನ್ನು ಸಿದ್ದಪಡಿಸಲಾಗುತ್ತದೆ. 

ಭಾರದ ವಾಹನ ಸಂಚಾರಕ್ಕೂ ಅನುಕೂಲ: ರ‍್ಯಾಪಿಡ್ ರಸ್ತೆಯನ್ನು ಪ್ರೀಕಾಸ್ಟ್ ಪೋಸ್ಟ್ ಟೆನ್ಷನಿಂಗ್ ಕಾಂಕ್ರೀಟ್ ಪೇವ್‌ಮೆಂಟ್ (Precast panel)ನಿಂದ ನಿರ್ಮಿಸಲಾಗುತ್ತಿದೆ. ಮೊದಲಿಗೆ ರಸ್ತೆಯನ್ನು ಸಮತಟ್ಟಾಗಿ ಮಾಡಿಕೊಂಡು ಅದರ ಮೇಲೆ ಫ್ರೀಕಾಸ್ಟ್ ಪ್ಯಾನಲ್ ಗಳನ್ನು ಅಳವಡಿಸಲಾಗುತ್ತದೆ. ಪ್ರತಿ ಫ್ರೀಕಾಸ್ಟ್ ಪ್ಯಾನಲ್ ಗಳಲ್ಲಿ 4 ರಂಧ್ರಗಳಿರಲಿದ್ದು, ವಾಹನಗಳು ಇದರ ಮೇಲೆ ಸಂಚರಿಸುವಾಗ ವಾಹನಗಳ ಭಾರದಿಂದ ಪ್ಯಾನಲ್ ಗಳು ಅಲುಗಾಡದಂತೆ ಒಂದು ಪ್ಯಾನಲ್ ನಿಂದ ಮತ್ತೊಂದು ಪ್ಯಾನಲ್ ಗೆ ಪೋಸ್ಟ್ ಟೆನ್ಷನಿಂಗ್ (ಸ್ಟೀಲ್ ತಂತಿಗಳು - High Tensile Steel Cable) ಮಾಡಲಾಗುತ್ತದೆ. ಇದರಿಂದ ಎಷ್ಟೇ ಭಾರದ ವಾಹನಗಳು ಸಂಚರಿಸಿದರು ಯಾವುದೇ ಸಮಸ್ಯೆಯಾಗುವುದಿಲ್ಲ ಎಂದು ತಿಳಿದುಬಂದಿದೆ. 

ಮತದಾರರ ಪಟ್ಟಿ ಡಿಲೀಟ್‌ ಪ್ರಕರಣ ತನಿಖೆಗೆ ಆಗಮಿಸಿದ ಕೇಂದ್ರ ತಂಡ

ನಾಲ್ಕು ದಿನದಲ್ಲಿ ಕಾಮಗಾರಿ ಪೂರ್ಣ: ಹಳೆ ಮದ್ರಾಸ್ ರಸ್ತೆಯ (Old Madras Road)  ಹೊಸ ಬಿನ್ನಮಂಗಲ ವೃತ್ತದ ಬಳಿ ರ‍್ಯಾಪಿಡ್ ರಸ್ತೆ ನಿರ್ಮಾಣ ಮಾಡುತ್ತಿದ್ದು, ನಿನ್ನೆಯಿಂದ ಕಾಮಗಾರಿಯನ್ನು ಪ್ರಾರಂಭಿಸಲಾಗಿದೆ. ಈ ಪೈಕಿ 500 ಮೀಟರ್ ಉದ್ದದ ರಸ್ತೆಯಲ್ಲಿ ಈವರೆಗೆ ಸುಮಾರು ಸುಮಾರು 100 ಮೀಟರ್ ಗಳಿಗೆ ಫ್ರೀಕಾಸ್ಟ್ ಪ್ಯಾನಲ್‌ಗಳನ್ನು ಅಳವಡಿಸಲಾಗಿದೆ. ಇನ್ನು 2 ದಿನದೊಳಗಾಗಿ ರ‍್ಯಾಪಿಡ್ ರಸ್ತೆ ನಿರ್ಮಾಣವಾಗಲಿದೆ. ಒಟ್ಟಾರೆ 500 ಮೀ ರಸ್ತೆಯನ್ನು ಕೇವಲ 4  ದಿನದಲ್ಲಿ ಪೂರ್ಣ ಮಾಡಲಾಗುತ್ತಿದೆ.

Follow Us:
Download App:
  • android
  • ios