ಬೆಂಗಳೂರು[ನ.13]: ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಸಚಿವ ಡಿ ಕೆ ಶಿವಕುಮಾರ್ ಅವರು ಇಂದು[ಬುಧವಾರ] ನಗರದ ಅಪೋಲೋ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಡಿ ಕೆ ಶಿವಕುಮಾರ್ ಅವರು ಅಸ್ಪತ್ರೆಯಿಂದ ಮನೆಗೆ ತೆರಳಿದ್ದಾರೆ. 

ಈ ವೇಳೆ ಆಸ್ಪತ್ರೆ ಮುಂದೆ ಜಮಾಯಿಸಿದ್ದ ಮಾಧ್ಯಮದವರಿಗೆ ಸುಪ್ರೀಂ ತೀರ್ಪಿನ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡದೆ ತೆರಳಿದ್ದಾರೆ. 

ಡಿ.ಕೆ. ಶಿವಕುಮಾರ್ ಆರೋಗ್ಯದಲ್ಲಿ ಏರುಪೇರು; ಡೆಂಗ್ಯೂ ಶಂಕೆ?

ಇತ್ತೀಚೆಗಷ್ಟೇ ತಿಹಾರ್ ಜೈಲಿನಿಂದ ಬಿಡುಗಡೆಯಾಗಿ ಬಂದಿದ್ದ ಡಿ ಕೆ ಶಿವಕುಮಾರ್ ಅವರ ಆರೋಗ್ಯದಲ್ಲಿ ಮತ್ತೆ ಏರುಪೇರು ಕಂಡುಬಂದಿದ್ದರಿಂದ ಬೆಂಗಳೂರಿನ ಅಪೋಲೋ  ಆಸ್ಪತ್ರೆಗೆ ದಾಖಲಾಗಿದ್ದರು. ತಿಹಾರ್ ಜೈಲಿನಿಂದ ಬಿಡುಗಡೆಯಾಗಿ ಬಂದ ಬಳಿಕ ಡಿಕೆಶಿ ಆಸ್ಪತ್ರೆಗೆ ದಾಖಲಾಗುತ್ತಿರುವುದು  ಇದು ಎರಡನೇ ಬಾರಿಯಾಗಿದೆ. ಅಕ್ರಮ ಹಣ ವ್ಯವಹಾರಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದಿಂದ (ED) ಬಂಧನಕ್ಕೊಳಗಾಗಿದ್ದ ಡಿಕೆಶಿ, 48 ದಿನಗಳ ಕಾಲ ತಿಹಾರ್ ಜೈಲಿನಲ್ಲಿದ್ದರು. ದೆಹಲಿ ಹೈಕೋರ್ಟ್ ಅವರನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಿದೆ.