ಬೆಂಗಳೂರು [ಅ.09]:  ಮುಂದಿನ 48 ಗಂಟೆಗಳಲ್ಲಿ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. 

ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಹಾಗೂ ತುಮಕೂರು, ಮಲೆನಾಡು ಭಾಗದ ಚಿಕ್ಕಮಗಳೂರು, ಕೊಡಗು, ಹಾಸನ, ಶಿವಮೊಗ್ಗ ಜಿಲ್ಲೆಗಳಲ್ಲಿ 65ರಿಂದ 115 ಮಿ.ಮೀ. ಮಳೆಯಾಗುವ ಸಾಧ್ಯತೆ ಇರುವುದರಿಂದ ಭಾರತೀಯ ಹವಾಮಾನ ಇಲಾಖೆ ‘ಎಲ್ಲೋ ಅಲರ್ಟ್‌’ಎಚ್ಚರಿಕೆ ನೀಡಿದೆ.

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ರಾಜ್ಯದ ಹಲವೆಡೆ ಈಗಾಗಲೇ ಅಕ್ಟೋಬರ್ ಮಳೆ ಸುರಿಯುತ್ತಿದ್ದು, ಜನಜೀವನಕ್ಕೆ ಸಮಸ್ಯೆ ತಂದೊಡ್ಡಿದೆ. ಇನ್ನು ವಿಜಯ ದಶಮಿ ಸಂಭ್ರಮಕ್ಕೂ   ಕೂಡ ರಾಜ್ಯದ ಹಲವೆಡೆ ಮಳೆ ಅಡ್ಡಿಯುಂಟು ಮಾಡಿತ್ತು.