Asianet Suvarna News Asianet Suvarna News

ಸಿಎಂ ಬೊಮ್ಮಾಯಿ‌ ಮಾಧ್ಯಮ ಸಂಯೋಜಕ ಗುರುಲಿಂಗಸ್ವಾಮಿ ನಿಧನ

ಸಿಎಂ ಬೊಮ್ಮಾಯಿ‌ ಮಾಧ್ಯಮ ಸಂಯೋಜಕ ಗುರಲಿಂಗಸ್ವಾಮಿ ಹಠಾತ್‌ ನಿಧನರಾಗಿದ್ದಾರೆ.  ಗುರುಲಿಂಗಸ್ವಾಮಿ  ಅವರು ಬೆಳಗ್ಗೆ ಜಿಮ್‌ಗೆ ಹೋಗಿ ವ್ಯಾಯಾಮ ಮಾಡುತ್ತಿದ್ದಾಗ ಅವರಿಗೆ ಎದೆನೋವು ಕಾಣಿಸಿಕೊಂಡಿತ್ತು.

Karnataka CM Bommai media coordinator Guralingaswamy passes away akb
Author
Bangalore, First Published Aug 22, 2022, 11:34 AM IST

ಬೆಂಗಳೂರು: ಸಿಎಂ ಬೊಮ್ಮಾಯಿ‌ ಮಾಧ್ಯಮ ಸಂಯೋಜಕ ಗುರುಲಿಂಗಸ್ವಾಮಿ ಹಠಾತ್‌ ನಿಧನರಾಗಿದ್ದಾರೆ. ಗುರುಲಿಂಗಸ್ವಾಮಿ ಅವರು ಬೆಳಗ್ಗೆ ಜಿಮ್‌ಗೆ ಹೋಗಿ ವ್ಯಾಯಾಮ ಮಾಡುತ್ತಿದ್ದಾಗ ಅವರಿಗೆ ಎದೆನೋವು ಕಾಣಿಸಿಕೊಂಡಿದೆ. ಕೂಡಲೇ ಅವರನ್ನು ನಾಗರಭಾವಿ ಯುನಿಟಿ ಲೈಫ್  ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಮಾರ್ಗಮಧ್ಯೆಯೇ ಅವರು ಪ್ರಾಣ ಬಿಟ್ಟಿದ್ದಾರೆ.

ಎದೆನೋವಿನ ಹಿನ್ನೆಲೆಯಲ್ಲಿ ನಾಗರಭಾವಿ ಯುನಿಟಿ ಲೈಫ್  ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅದರೆ ಬರುವಾಗಲೇ ಅವರು ಸಾವನ್ನಪ್ಪಿದ್ದರು ಎಂದು ವೈದ್ಯರು ತಿಳಿಸಿದ್ದಾರೆ. ಬೊಮ್ಮಾಯಿ‌ ಗೃಹ ಸಚಿವರಾದಾಗಿಂದಲೂ ಗುರುಲಿಂಗಸ್ವಾಮಿ ಅವರು, ಬೊಮ್ಮಾಯಿ ಅವರ ಮಾಧ್ಯಮ ಸಂಯೋಜಕರಾಗಿ ಕೆಲಸ ಮಾಡುತ್ತಿದ್ದರು. 

ಕಳೆದ ವರ್ಷ ಆಗಸ್ಟ್ 2 ರಂದು ಗುತ್ತಿಗೆ ಆಧಾರದ ಮೇಲೆ ಗುರುಲಿಂಗಸ್ವಾಮಿ ಅವರನ್ನು ಮುಖ್ಯಮಂತ್ರಿಗಳ ಮಾಧ್ಯಮ ಸಂಯೋಜಕರನ್ನಾಗಿ ನೇಮಕ ಮಾಡಲಾಗಿತ್ತು. ಮೃತ ಗುರುಲಿಂಗಸ್ವಾಮಿ ಅವರು ವಿಜಯವಾಣಿ ಸೇರಿದಂತೆ ಹಲವು ಪತ್ರಿಕೆ ಮತ್ತು ಟಿವಿ ವಾಹಿನಿಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ.  ಗುರುಲಿಂಗಸ್ವಾಮಿ ನಿಧನಕ್ಕೆ ಅನೇಕ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.

ಬೆಳಗಾವಿ ಜಿಲ್ಲೆಯ ರಾಮದುರ್ಗ ಮೂಲದ ಗುರುಲಿಂಗಸ್ವಾಮಿ ಹೊಳಿಮಠ ಅವರು ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದಿಂದ ಸ್ನಾತಕೋತ್ತರ ಪದವಿ ಪಡೆದಿದ್ದರು. ವಿವಿಧ ಮಾಧ್ಯಮಗಳಲ್ಲಿ 1998ರಿಂದಲೂ ಸೇವೆ ಸಲ್ಲಿಸುತ್ತಿದ್ದರು.

ಗುರುಲಿಂಗಸ್ವಾಮಿ ಹೋಳಿಮಠ ನಿಧನಕ್ಕೆ ಸಚಿವ ನಿರಾಣಿ ಸಂತಾಪ
ಮುಖ್ಯಮಂತ್ರಿಗಳ ಮಾಧ್ಯಮ ಸಮನ್ವಯಧಿಕಾರಿ ಗುರುಲಿಂಗಸ್ವಾಮಿ ಹೋಳಿಮಠ. ಅವರ ಹಠತ್ ನಿಧನಕ್ಕೆ  ಬೃಹತ್  ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ಆರ್  ನಿರಾಣಿಯವರು  ಕಂಬನಿ ಮಿಡಿದಿದ್ದಾರೆ.
ಕಳೆದ  ಹಲವಾರು ವರ್ಷಗಳಿಂದ ಆತ್ಮೀಯರಾಗಿದ್ದ ಅವರು  ಚಿಕ್ಕವಯಸ್ಸಿನಲ್ಲೇ ವಿವಿಧ ಪತ್ರಿಕೆಗಳು ಹಾಗೂ ಸುದ್ದಿ ವಾಹಿನಿಗಳಲ್ಲಿ  ಕೆಲಸ ಮಾಡಿ ಮಾಧ್ಯಮದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದರು ಎಂದು ಹೇಳಿದ್ದಾರೆ. 
 ನನ್ನ  ಅತ್ಮೀಯ ಪತ್ರಕತರಲ್ಲಿ  ಒಬ್ಬರಾಗಿದ್ದ  ಅವರು  ನಿಷ್ಪಕ್ಷಪಾತ  ಹಾಗೂ ವಸ್ತುನಿಷ್ಠ ಸುದ್ದಿಗಳಿಗೆ ಹೆಚ್ಚು ಒತ್ತು ಕೊಡುತ್ತಿದ್ದರು. ಒಬ್ಬ ಕ್ರಿಯಾಶೀಲ ಪತ್ರಕರ್ತರಾಗಿದ್ದ ಅವರ ಹಠಾತ್ ನಿಧನ ಆಘಾತ ತಂದಿದೆ ಎಂದು ಕಂಬನಿ  ಮಿಡಿದಿದ್ದಾರೆ. ಮೃತರ ಆತ್ಮಕ್ಕೆ ಭಗವಂತನು  ಸದ್ಗತಿ ನೀಡಿ,  ಪತ್ನಿ , ಮಕ್ಕಳು ಹಾಗೂ ಕುಟುಂಬ ವರ್ಗದವರಿಗೆ ದುಃಖಭರಿಸುವ ಶಕ್ತಿಯನ್ನು ಕೊಡಲಿ ಎಂದು  ನಿರಾಣಿಯವರು ಪ್ರಾರ್ಥಿಸಿದ್ದಾರೆ.

ಹಿರಿಯ ಪತ್ರಕರ್ತ ಗುರುಲಿಂಗಸ್ವಾಮಿ ಅವರ ನಿಧನಕ್ಕೆ ಡಿ.ಕೆ. ಶಿವಕುಮಾರ್ ಸಂತಾಪ

ಬೆಂಗಳೂರು: ಹಿರಿಯ ಪತ್ರಕರ್ತರು ಹಾಗೂ ಮುಖ್ಯಮಂತ್ರಿಗಳ ಮಾಧ್ಯಮ ಸಂಯೋಜಕರಾಗಿದ್ದ ಗುರುಲಿಂಗಸ್ವಾಮಿ ಹೊಳಿಮಠ ಅವರ ನಿಧನಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಸಂತಾಪ ಸೂಚಿಸಿದ್ದಾರೆ. ‘ಮಾಧ್ಯಮ ಕ್ಷೇತ್ರದಲ್ಲಿ ಸಾಕಷ್ಟು ಕ್ರಿಯಾಶೀಲರಾಗಿ ಕಾರ್ಯನಿರ್ವಹಿಸಿದ ಗುರುಲಿಂಗಸ್ವಾಮಿ ಅವರ ಅಕಾಲಿಕ ನಿಧನದ ಸುದ್ದಿ ಕೇಳಿ ಮನಸ್ಸಿಗೆ ಬಹಳ ಬೇಸರವಾಗಿದೆ. ಅವರ ಆತ್ಮಕ್ಕೆ ಸದ್ಗತಿ ಸಿಗಲಿ. ಈ ಅಗಲಿಕೆಯ ನೋವು ಭರಿಸುವ ಶಕ್ತಿಯನ್ನು ಅವರ ಕುಟುಂಬ ವರ್ಗದವರು, ಸ್ನೇಹಿತರು, ಬಂಧುಗಳಿಗೆ ಸಿಗಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ’ ಎಂದು ಶಿವಕುಮಾರ್ ಅವರು ಸಂತಾಪದ ನುಡಿಯಲ್ಲಿ ತಿಳಿಸಿದ್ದಾರೆ.

Follow Us:
Download App:
  • android
  • ios