ಕರ್ನಾಟಕದ ನೆಲ ಮತ್ತು ಇಲ್ಲಿನ ಪ್ರೀತಿಯ ಜನರಿಂದ ನಾನು ಬಹಳಷ್ಟು ಕಲಿತಿದ್ದೇನೆ. ರಾಜ್ಯದ ಜನರಿಗಾಗಿ ನಿಷ್ಠೆ ಮತ್ತು ಪ್ರಾಮಾಣಿಕತೆಯಿಂದ ಸೇವೆ ಸಲ್ಲಿಸಿದ್ದೇನೆ ಎಂದು ಬೀಳ್ಕೊಡುಗೆ ವೇಳೆ ಥಾವರ್ ಚಂದ್ ಗೆಹ್ಲೋಟ್ ಹೇಳಿದ್ದಾರೆ.
ಬೆಂಗಳೂರು (ಅ.15): ಕರ್ನಾಟಕದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರ ಅಧಿಕಾರಾವಧಿ ಪೂರ್ಣಗೊಂಡ ಹಿನ್ನೆಲೆಯಲ್ಲಿ ಲೋಕಭವನದ ವತಿಯಿಂದ ಅವರಿಗೆ ಆತ್ಮೀಯ ಬೀಳ್ಕೊಡುಗೆ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ “ಕರ್ನಾಟಕ ರಾಜ್ಯದ ಸೇವೆ ಸಲ್ಲಿಸಲು ಅವಕಾಶ ದೊರೆತಿರುವುದು ತಮ್ಮ ಭಾಗ್ಯ. “ಕರ್ನಾಟಕದ ನೆಲ ಮತ್ತು ಇಲ್ಲಿನ ಪ್ರೀತಿಯ ಜನರಿಂದ ನಾನು ಬಹಳಷ್ಟು ಕಲಿತಿದ್ದೇನೆ. ರಾಜ್ಯದ ಜನರಿಗಾಗಿ ನಿಷ್ಠೆ ಮತ್ತು ಪ್ರಾಮಾಣಿಕತೆಯಿಂದ ಸೇವೆ ಸಲ್ಲಿಸಿದ್ದೇನೆ” ಎಂದು ಹೇಳಿದರು.
ತಮ್ಮ ಕಾರ್ಯಾವಧಿಯಲ್ಲಿ ಸಹಕಾರ ನೀಡಿದ ಲೋಕಭವನದ ಅಧಿಕಾರಿಗಳು, ಸಿಬ್ಬಂದಿ ಹಾಗೂ ಸಹೋದ್ಯೋಗಿಗಳಿಗೆ ಕೃತಜ್ಞತೆ ಸಲ್ಲಿಸಿದ ಅವರು, ಎಲ್ಲರ ಸಹಕಾರ ಮತ್ತು ಬೆಂಬಲವನ್ನು ಸ್ಮರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಲೋಕಭವನದ ಅಧಿಕಾರಿಗಳು ಹಾಗೂ ಸಿಬ್ಬಂದಿ, ಗೌರವಾನ್ವಿತ ರಾಜ್ಯಪಾಲರ ಮಾರ್ಗದರ್ಶನ, ಸಹಕಾರ ಮತ್ತು ಪ್ರೋತ್ಸಾಹವನ್ನು ಸ್ಮರಿಸಿ, ಅವರ ಸೇವೆಯನ್ನು ಶ್ಲಾಘಿಸಿದರು. ಅವರೊಂದಿಗೆ ಕಾರ್ಯನಿರ್ವಹಿಸಿದ ಅವಧಿಯು ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಉತ್ತಮ ಅನುಭವ ಹಾಗೂ ಕಲಿಕೆಯ ಅವಕಾಶವನ್ನು ನೀಡಿದೆ ಎಂದು ತಿಳಿಸಿದರು.
ಲೋಕಭವನದ ಅಧಿಕಾರಿಗಳು ಹಾಗೂ ಸಿಬ್ಬಂದಿ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಕೃತಜ್ಞತೆಗಳನ್ನು ಸಲ್ಲಿಸಿ, ಅವರ ಮುಂದಿನ ಜೀವನ ಹಾಗೂ ಸಾರ್ವಜನಿಕ ಸೇವಾ ಪಯಣಕ್ಕೆ ಶುಭ ಹಾರೈಸಿದರು.
ಕರ್ನಾಟಕ ದ ರಾಜ್ಯಪಾಲರಾಗಿ ಡಾ.ಸುಧಾ ಯಾದವ್ ನೇಮಕ
ಇತ್ತೀಚೆಗೆ ಕರ್ನಾಟಕ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ನೇಮಕಗೊಂಡಿದ್ದಾರೆ. ಕರ್ನಾಟಕ ಸೇರಿದಂತೆ ಕೆಲ ರಾಜ್ಯಪಾಲರ ಬದಲಾವಣೆ ಮಾಡಲಾಗಿತ್ತು. ಸಿಕ್ಕಿಂನ ರಾಜ್ಯಪಾಲರಾದ ಓಂ ಪ್ರಕಾಶ್ ಮಾಥುರ್ ಈಗ ಕೇರಳದ ರಾಜ್ಯಪಾಲರಾಗಿ ನೇಮಕ ಮಾಡಲಾಗಿದೆ. ಕೇರಳದ ರಾಜ್ಯಪಾಲರಾದ ಜವಾಬ್ದಾರಿ ಯಿಂದ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಬಿಡುಗಡೆ ಮಾಡಲಾಗಿದೆ. ಒಡಿಶಾದ ರಾಜ್ಯಪಾಲರಾಗಿ ಬ್ರಜ್ ಮೋಹನ್ ರಾಮ್ ನೇಮಕ ಗೊಂಡಿದ್ದಾರೆ. ಉತ್ತರಾಖಂಡದ ರಾಜ್ಯಪಾಲರಾಗಿ ಡಾ. ಧಲ್ ಸಿಂಗ್ ಬಿಸೆನ್ ಹಾಗೂ ಸಿಕ್ಕಿಂನ ರಾಜ್ಯಪಾಲರಾಗಿ ದುಷ್ಯಂತ್ ಗೌತಮ್ ನೇಮಕಗೊಂಡಿದ್ದಾರೆ.


