ಬೆಂಗಳೂರಿಗೆ ಮುಂದಿನ ಮೂರು ಗಂಟೆ ಆರೇಂಜ್ ಅಲರ್ಟ್, ಭಾರಿ ಮಳೆ ಮುನ್ಸೂಚನೆ, ಇಂದು ಸಂಜೆ ಬೆಂಗಳೂರಿನಲ್ಲಿ ಭಾರಿ ಮಳೆಯಾಗಿದೆ. ಇದೀಗ ಹವಾಮಾನ ಇಲಾಖೆ ಆರೇಂಜ್ ಅಲರ್ಟ್ ಮುನ್ಸೂಚನೆ ನೀಡಿದೆ.

ಬೆಂಗಳೂರು (ಸೆ.18) ಕರ್ನಾಟಕದ ಹಲವು ಭಾಗದಲ್ಲಿ ಮತ್ತೆ ಮಳೆ ಆರ್ಭಟಿಸಲು ಆರಂಭಗೊಂಡಿದೆ. ಉತ್ತರ ಭಾರತದಲ್ಲಿ ಮಳೆ ಆರ್ಬಟಕ್ಕೆ ಹಲವು ಗ್ರಾಮಗಳು, ನದಿ ತಟದ ಪ್ರದೇಶಗಳು ಕೊಚ್ಚಿ ಹೋಗಿದೆ. ಇದೀಗ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದೆ. ಇಂದು (ಸೆ.18) ಬೆಂಗಳೂರಿನಲ್ಲಿ ಭಾರಿ ಮಳೆಯಾಗಿದೆ. ಮೆಜೆಸ್ಟಿಕ್ ಸುತ್ತಮುತ್ತ, ಶಿವನಾಂದ ಸರ್ಕಲ್, ಬನ್ನೇರುಘಟ್ಟ ಸೇರಿದಂತೆ ಬೆಂಗಳೂರಿನ ಬಹುತೇಕ ಕಡೆ ಭಾರಿ ಮಳೆಯಾಗಿದೆ. ಇದೀಗ ಹವಾಮಾನ ಇಲಾಖೆ ಮತ್ತೊಂದು ಮುನ್ಸೂಚನೆ ನೀಡಿದೆ. ಮುಂದಿನ ಮೂರು ಗಂಟೆ ಬೆಂಗಳೂರಿಗೆ ಆರೇಂಜ್ ಅಲರ್ಟ್ ನೀಡಿದೆ.

ಆರೇಂಜ್ ಅಲರ್ಟ್ ನೀಡಿದ ಹವಾಮಾನ ಇಲಾಖೆ

ಈಗಾಗಲೇ ಬೆಂಗಳೂರಿನಲ್ಲಿ ಮಳೆ ಅಬ್ಬರಿಸಿದೆ. ಇದರ ಬೆನ್ನಲ್ಲೇ ಮುಂದಿನ ಮೂರು ಗಂಟೆಗಳ ಕಾಲ ನಗರದಲ್ಲಿ ಆರೇಂಜ್ ಅಲರ್ಟ್ ನೀಡಿದೆ. ಈ ಮೂಲಕ ಸಾರ್ವಜನಿಕರು ಎಚ್ಚರಿಕೆಯಿಂದ ಇರಲು ಸೂಚಿಸಿದೆ. ಬೆಂಗಳೂರು ನಗರ, ಬೆಂಗಳೂರು ಗ್ತಾಮಾಂತರ, ಬಾಗಲಕೋಟೆ, ಬಳ್ಳಾರಿ, ವಿಜಯಪುರ ಜಿಲ್ಲೆಗೆ ಆರೆಂಜ್ ಅಲರ್ಟ್ ನೀಡಲಾಗಿದೆ.

Uttarakhand Cloudburst: ಉತ್ತರಾಖಂಡ್‌ನಲ್ಲಿ ಮತ್ತೆ ಮೇಘಸ್ಫೋಟ ಪ್ರವಾಹ: ತಪಕೇಶ್ವರ ದೇವಾಲಯ ಜಲಾವೃತ: ಹಲವರು ನಾಪತ್ತೆ

ಬನ್ನೇರುಘಟ್ಟದ ಡಾಲರ್ಸ್ ಕಾಲೋನಿ ಬಳಿ ರಸ್ತೆ ಜಲಾವೃತ

ಬನ್ನೇರುಘಟ್ಟ ಮುಖ್ಯರಸ್ತೆಯ ಡಾಲರ್ಸ್ ಕಾಲೋನಿ ರಸ್ತೆಗಳು ಸುರಿದ ಭಾರಿ ಮಳೆಗೆ ಜಲಾವೃತಗೊಂಡಿದೆ. ಮಳೆ ನೀರಿನ ಜೊತೆಗೆ ರಸ್ತೆಯಲ್ಲಿ ಹರಿಯುತ್ತಿರುವ ಚರಂಡಿ ನೀರು ಹರಿಯುತ್ತಿದೆ. ಜಲಾವೃತವಾದ ರಸ್ತೆಯಲ್ಲಿ ಸಂಚರಿಸಲಾಗದೆ ವಾಹನ ಸವಾರರ ಪರದಾಡಿದ್ದಾರೆ. ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ವಿರುದ್ಧ ವಾಹನ ಸವಾರರ ಆಕ್ರೋಶ ಹೊರಹಾಕಿದ್ದಾರೆ.

ರಾಜ್ಯದ 14 ಜಿಲ್ಲೆಗಳಿಗೆ ಮುನ್ಸೂಚನೆ ನೀಡಿದ್ದ ಹವಾಮಾನ ಇಲಾಖೆ

ಇಂದು ರಾಜ್ಯದ 14 ಜಿಲ್ಲೆಗಲಿಗೆ ಹವಾಮಾನ ಇಲಾಖೆ ಮಳೆ ಮುನ್ಸೂಚನೆ ನೀಡಿತ್ತು. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಮೈಸೂರು, ಮಂಡ್ಯ, ಕೊಡಗು, ಹಾಸನ ಜಿಲ್ಲೆಗಳಿಗೆ ಭಾರಿ ಮಳೆಯ ಮುನ್ಸೂಚನೆ ನೀಡಿತ್ತು. ಇದರಂತೆ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಿದೆ. ಯಾದಗಿರಿ, ವಿಜಯಪುರ, ರಾಯಚೂರು, ಕಲಬುರಗಿ, ಬೀದರ್, ಬೆಳಗಾವಿ ಹಾಗೂ ಬಾಗಲಕೋಟೆ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಿತ್ತು. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಶಿವಮೊಗ್ಗ, ತುಮಕೂರು, ಚಿಕ್ಕಮಗಳೂರು, ಚಿತ್ರದುರ್ಗ, ಚಿಕ್ಕಬಳ್ಳಾಪುರ, ದಾವಣಗೆರೆ, ಕೋಲಾರ, ಧಾರವಾಡ, ಗದಗ, ಹಾವೇರಿ, ಚಾಮರಾಜನಗರ ಹಾಗೂ ವಿಜಯನಗರ ಜಿಲ್ಲೆಗಳಿಗೂ ಮಳೆ ಅಲರ್ಟ್ ನೀಡಲಾಗಿತ್ತು.

ನಿನ್ನೆ ತಡರಾತ್ರಿ ಸುರಿದ ಭಾರಿ ಮಳೆ

ಬೆಂಗಳೂರಿನಲ್ಲಿ ನಿನ್ನೆ (ಸೆ.17) ಭಾರಿ ಮಳೆಯಾಗಿದೆ. ಹಲವು ರಸ್ತೆಗಳು ಜಲಾವೃತಗೊಂಡಿತ್ತು. ಇದೇ ವೇಳೆ ಲಾಲ್ ಬಾಗ್ ಮುಖ್ಯ ರಸ್ತೆಯಲ್ಲಿ ಮರಗಳು ಧರೆಗುರುಳಿತ್ತು. ಮರ ರಸ್ತೆಗೆ ಬಿದ್ದ ಕಾರಣ ಟ್ರಾಫಿಕ್ ಜಾಮ್ ಸಂಭವಿಸಿತ್ತು. ಮರ ಬಿದ್ದ ಪರಿಣಾಮ ವಿದ್ಯುತ್ ಕೇಬಲ್ ತುಂಡಾಗಿ ಬಿದ್ದಿತ್ತು. ಇತ್ತ ವಿದ್ಯುತ್ ಕೂಡ ಸ್ಥಗಿತಗೊಳಿಸಿರಲಿಲ್ಲ. ಹೀಗಾಗಿ ಸಾರ್ವಜನಿಕರು ತೀವ್ರ ಆತಂಕಗೊಂಡಿದ್ದರು. ಅಧಿಕಾರಿಗಳು ತಕ್ಷಣಕ್ಕೆ ಸ್ಪಂದಿಸಿಲ್ಲ ಎಂದು ಜನರು ಆಕ್ರೋಶ ಹೊರಹಾಕಿದ್ದರು. ರಸ್ತೆಗೆ ಮರಬಿದ್ದ ಪರಿಣಾಮ ಟ್ರಾಫಿಕ್ ಜಾಮ್ ನಿಂದಾಗಿ ವಾಹನ ಸವಾರರ ಪರದಾಡಿದ್ದರು.

ಸೆ.21ರವರೆಗೆ ರಾಜ್ಯದಲ್ಲಿ ಮಳೆಯ ಅಬ್ಬರ, ಉತ್ತರ ಕರ್ನಾಟಕದ ಈ ಜಿಲ್ಲೆಗಳಿಗೂ ಯೆಲ್ಲೋ ಅಲರ್ಟ್ ಘೋಷಣೆ!