ವಿಧಾನ ಪರಿಷತ್ ಮುಖ್ಯ ಸಚೇತಕರಾಗಿ ಮುಂಜುನಾಥ್ ಭಂಡಾರಿ ನೇಮಸಿ ಅಧಿಕೃತ ಆದೇಶ ಹೊರಬಿದ್ದಿದೆ. ವಿಧಾನ ಪರಿಷತ್ ಕರಾರ್ಯದರ್ಶಿಯಿಂದ ಅಧಿಸೂಚನೆ ಹೊರಬಿದ್ದಿದೆ. ಇದರ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ರಾಜಕೀಯ ಚಟುವಟಿಕೆ ಗರಿಗೆದರಿದೆ.

ಬೆಂಗಳೂರು (ನ.21) ವಿಧಾನ ಪರಿಷತ್ತಿನ ಶಾಸಕರಾದ ಮಂಜುನಾಥ್ ಭಂಡಾರಿ ಅವರನ್ನು ಕರ್ನಾಟಕ ವಿಧಾನ ಪರಿಷತ್ತಿನ ಸರ್ಕಾರಿ ಮುಖ್ಯ ಸಚೇತಕರನ್ನಾಗಿ ನೇಮಕ ಮಾಡಲಾಗಿದೆ. ಈ ಕುರಿತು ವಿಧಾನ ಪರಿಷತ್ ಕರಾರ್ಯದರ್ಶಿ ನವೆಂಬರ್ 21ರಿಂದ ಜಾರಿಗೆ ಬರುವಂತೆ ಅಧಿಕೃತ ಆದೇಶ ಹೊರಡಿಸಿದ್ದಾರೆ. ವಿಪ್ ನೇಮಕದ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ರಾಜಕೀಯ ಚಟುವಟಿಕೆ ಗರಿಗೆದರಿದೆ.

ಕೆಪಿಸಿಸಿ ಕಾರ್ಯಾಧ್ಯಕ್ಷ ನೇಮಕ ಚರ್ಚೆ

ಇಂದು ಬೆಳಗ್ಗೆ ಕೆಪಿಸಿಸಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ದಿಢೀರ್ ದೆಹಲಿಗೆ ಹಾರಿದ್ದಾರೆ. ದೆಹಲಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ನೇಮಕ ಚರ್ಚೆ ನಡೆಸುವ ಸಾಧ್ಯತೆ ಇದೆ. ಪಕ್ಷ ಸಂಘಟನೆ ವಿಚಾರವಾಗಿ ದೆಹಲಿಗೆ ತೆರಳಿರುವ ಬಿಕೆ ಹರಿಪ್ರಸಾದ್, ಕೆಪಿಸಿಸಿಗೆ ಹೊಸ ಕಾರ್ಯಧ್ಯಕ್ಷ ನೇಮಕಕ್ಕೆ ಹೈ ಕಮಾಂಡ್ ಜೊತೆ ಚರ್ಚಿಸುವ ಸಾಧ್ಯತೆ ಇದೆ. ಕೆಪಿಸಿಸಿ ಕಾರ್ಯಧ್ಯಕ್ಷ ರೇಸ್‌ನಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್ , ರಹೀಮ್ ಖಾನ್, ಎಂ ನಾರಾಯಣಸ್ವಾಮಿ, ಮಹದೇವಪ್ಪ ಹೆಸರು ಮುಂಚೂಣಿಯಲ್ಲಿದೆ. ರಾಜ್ಯದ ನಾಲ್ಕು ವಲಯಕ್ಕೆ ಪ್ರತಿನಿದ್ಯ ಕೊಡುವ ನಿಟ್ಟಿನಲ್ಲಿ ನಾಲ್ವರ ಹೆಸರು ಮುಂಚೂಣಿಯಲ್ಲಿದೆ. ಈ ಪಟ್ಟಿಯೊಂದಿಗೆ ಹೈಕಮಾಂಡ್ ನಾಯಕರ ಜೊತೆ ಚರ್ಚೆ ಮಾಡುವ ಸಾಧ್ಯತೆ ಇದೆ.

ಎಐಸಿಸಿ ಸಂಘಟನಾ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ ಭೇಟಿ ಮಾಡಿರುವ ಬಿಕೆ ಹರಿಪ್ರಸಾದ್ ಮಹತ್ವದ ಚರ್ಚೆ ನಡೆಸಿದ್ದಾರೆ. ದೆಹಲಿಯ ನಿವಾಸದಲ್ಲಿ ಭೇಟಿ ಮಾಡಿದ ಬಿಕೆ ಹರಿಪ್ರಸಾದ್, ನವೆಂಬರ್ 26 ಸಂವಿಧಾನ ದಿನಾಚರಣೆ ಕಾರ್ಯಕ್ರಮಕ್ಕೆ ಆಹ್ವಾನ ನೀಡಿದ್ದಾರೆ. ಇದೇ ವೇಳೆ ರಾಜ್ಯದ ವಿದ್ಯಮಾನಗಳು ಚರ್ಚೆ ನಡೆದಿದೆ. ಅರ್ಧಗಂಟೆಗೂ ಹೆಚ್ಚು ಕಾಲ ಮಾತುಕತೆ ನಡೆದಿದೆ.

ಇತ್ತ ನಿಗಮ ಮಂಡಳಿಗೆ ಎರಡನೇ ಪಟ್ಟಿಯಲ್ಲಿ 81 ಮಂದಿಗೆ ಸ್ಥಾನಮಾನ ನೀಡಲಾಗಿದೆ. ಪಕ್ಷದ ಕಾರ್ಯಕರ್ತರಿಗೆ ಅದೃಷ್ಠ ಒಲಿದಿದೆ. ಬಹುದಿನಗಳಿಂದ ಕಾಯುತ್ತಿದ್ದ ಆಕಾಂಕ್ಷಿಗಳಿಗೆ ಸಿಹಿಸುದ್ದಿ ನೀಡಿದೆ. ಪಕ್ಷ ಸಂಘಟನೆಗೆ ದುಡಿದವರಿಗೆ ಹುದ್ದೆ ಭಾಗ್ಯ ನೀಡಲಾಗಿದೆ. ನಿಗಮ ಮಂಡಳಿ ನೇಮಕದ ಮೂಲಕ ಅಸಮಾಧಾನ ಶಮನಕ್ಕೆ ಕಸರತ್ತು ಶುರುವಾಗಿದೆ.