ಪ್ರಯಾಣಿಕರ ಆಕ್ರೋಶ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಮೆಟ್ರೋ ವಿರುದ್ದ ಅಭಿಯಾನದ ಹಿನ್ನೆಲೆಯಲ್ಲಿ ಬಿಎಂಆರ್‌ಸಿಎಲ್ ಮೆಟ್ರೋ ದರ ಇಳಿಕೆಗೆ ಮುಂದಾಗಿದೆ.
ಬೆಂಗಳೂರು: ಪ್ರಯಾಣಿಕರ ಆಕ್ರೋಶಕ್ಕೆ ಮಣಿದಿರುವ ಬಿಎಂಆರ್‌ಸಿಎಲ್ ದರ ಇಳಿಕೆಗೆ ಮುಂದಾಗಿದೆ. ಬೆಲೆ ಏರಿಕೆಯಿಂದಾಗಿ ನಮ್ಮ ಮೆಟ್ರೋ ಪ್ರಯಾಣಿಕರ ಸಂಖ್ಯೆ 80 ಸಾವಿರದಷ್ಟು ಇಳಿಕೆಯಾಗಿತ್ತು. ಮತ್ತೊಂದೆಡೆ ಸೋಶಿಯಲ್ ಮೀಡಿಯಾದಲ್ಲಿ boycott Nama Metro ಎಂದು ಟ್ರೆಂಡ್ ಕ್ರಿಯೇಟ್ ಆಗಿತ್ತು. ಈ ಹಿನ್ನೆಲೆ ಮೆಟ್ರೋ ದರ ಇಳಿಕೆ ಮಾರ್ಪಾಡಿಗೆ ಬಿಎಂಆರ್‌ಸಿಎಲ್ ಮುಂದಾಗಿದೆ. ಶೇ.100, ಶೇ 75ರಷ್ಟು ಏರಿಕೆ ಆಗಿರೋ ಭಾಗದಲ್ಲಿ ದರ ಇಳಿಕೆ ಮಾಡಲಾಗುವುದು. 100% ಏರಿಕೆ ಆಗಿದೆ ಅಂತಾ ಜನ ಸೋಶಿಯಲ್ ಮೀಡಿಯಾದಲ್ಲಿ ದರ ತೋರಿಸಿದ್ದಾರೆ. ಹಾಗಾಗಿ ಅ ಭಾಗದಲ್ಲಿ ಫೇರ್ ಮ್ಯಾಟ್ರಿಕ್ಸ್ ನಲ್ಲಿ ದರ ಮಾರ್ಪಾಡು ಮಾಡಲಾಗುವುದು ಎಂದು ಬಿಎಂಆರ್‌ಸಿಎಲ್ ಎಂಡಿ ಹೇಳಿಕೆ ನೀಡಿದ್ದಾರೆ.
ದರ ಇಳಿಕೆ ಆಗಲ್ಲ ಅಡ್ಜೆಸ್ಟ್ ಮೆಂಟ್ ಮಾಡಲು ಪ್ರಯತ್ನಿಸುತ್ತೇವೆ
ಸೋಮವಾರ ದರ ಏರಿಕೆ ಮಾಡಿದ್ದೇವೆ. ಆ ಬಳಿಕ ಸಾಕಷ್ಟು ಕಡೆಗಳಲ್ಲಿ 100%, 90% ಜಂಪ್ ಆಗಿದೆ ಅಂತಾ ಮಾಹಿತಿ ಬಂದಿದೆ. ಸಾಕಷ್ಟು ಕಡೆ ಸಾರ್ವಜನಿಕರು ವಿರೋಧ ವ್ಯಕ್ತಪಡಿಸಿದ್ದಾರೆ. ದರ ನಿಗದಿ ಸಮಿತಿ ನೀಡಿರುವ ವರದಿ ಆಧಾರದ ಮೇಲೆ ಟಿಕೆಟ್ ದರ ಏರಿಕೆ ಮಾಡಿದ್ದೇವೆ. ಈಗಾಗಲೇ ನಮ್ಮ ಅಧಿಕಾರಿಗಳು ಮತ್ತೊಮ್ಮೆ ದರ ನಿಗದಿ ಸಮಿತಿಯ ವರದಿಯನ್ನ ಪರಿಶೀಲನೆ ಮಾಡುತ್ತಿದ್ದಾರೆ. ಬೆಲೆ ಇಳಿಕೆ ಬಗ್ಗೆ ಸಿಎಂ ಕೂಡ ಸೂಚನೆ ಕೊಟ್ಟಿದ್ದು, ಅಧಿಕಾರಿಗಳು ಪರಿಶೀಲನೆ ಮಾಡ್ತಾರೆ .ಎಲ್ಲೆಲ್ಲಿ ಹೆಚ್ಚು ದರ ಏರಿಕೆ ಆಗಿದೆ ಅಲ್ಲಿ ಏನು ಮಾಡಬಹುದು ಅಂತಾ ಚೆಕ್ ಮಾಡ್ತೇವೆ. ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ಸಂಪೂರ್ಣವಾಗಿ ವಿವರಣೆ ನೀಡುತ್ತೇವೆ. ಅಧಿಕಾರಿಗಳ ಜೊತೆ ಮೀಟಿಂಗ್ ಮಾಡಿ ಯಾವ ರೀತಿ ಜಂಪ್ ಆಗಿರೋ ದರ ಮರು ನಿಗದಿ ಮಾಡಬಹುದು ಅಂತಾ ನೋಡುತ್ತೇವೆ. ದರ ಇಳಿಕೆ ಆಗಲ್ಲ ಅಡ್ಜೆಸ್ಟ್ ಮೆಂಟ್ ಮಾಡಲು ಪ್ರಯತ್ನ ಪಡುತ್ತೇವೆ ಎಂದು ಬಿಎಂಆರ್‌ಸಿಎಲ್ ಎಂಡಿ ಮಹೇಶ್ವರ ರಾವ್ ಹೇಳಿದ್ದಾರೆ.
ಶೇ.40ರಿಂದ ಆರಂಭವಾಗಿ ದುಪ್ಪಟ್ಟು ಪ್ರಮಾಣದಲ್ಲಿ ದರ ಏರಿಕೆ ಮಾಡಿದ್ದ ನಮ್ಮ ಮೆಟ್ರೋಗೆ ಪ್ರಯಾಣಿಕರ ಅಸಮಾಧಾನದ ಬಿಸಿ ತಟ್ಟುತ್ತಿದೆ. ಫೆ.4 ರಂದು 8,58,417 ಮಂದಿ ಪ್ರಯಾಣಿಸಿದ್ದರು. ಪ್ರಯಾಣಿಕರ ಸಂಖ್ಯೆ ಫೆ.10ರಂದು 8,28,149ರಷ್ಟಿತ್ತು. 79,643 ಮಂದಿ ಪ್ರಯಾಣಿಕರ ಕುಸಿತವನ್ನು ನಮ್ಮ ಮೆಟ್ರೋ ದಾಖಲಿಸಿದೆ.
ಬಿಜೆಪಿ ವಿರುದ್ಧ ಸಿಎಂ ಆಕ್ರೋಶ
ಮೆಟ್ರೋ ಪ್ರಯಾಣ ದರ ಹೆಚ್ಚಳವನ್ನು ವಿರೋಧಿಸುತ್ತಿರುವ ವಿರೋಧ ಪಕ್ಷವಾದ ಬಿಜೆಪಿಯ ನಾಯಕರು ಯಥಾಪ್ರಕಾರ ಸುಳ್ಳು ಮತ್ತು ತಿರುಚಿದ ಮಾಹಿತಿಯನ್ನು ಬಳಸಿಕೊಂಡು ರಾಜ್ಯ ಸರ್ಕಾರದ ವಿರುದ್ಧ ಆರೋಪಗಳನ್ನು ಮಾಡಿ ಸಾರ್ವಜನಿಕರ ಹಾದಿ ತಪ್ಪಿಸುತ್ತಿದ್ದಾರೆ. ಸರ್ಕಾರದ ಯಾವುದೇ ನೀತಿ-ನಿರ್ಧಾರಗಳನ್ನು ವಿರೋಧಿಸುವ ಅಧಿಕಾರ ಸಾರ್ವಜನಿಕರಿಗೆ ಇದೆ, ಸಂವಿಧಾನಬದ್ಧವಾದ ಅವರ ಹಕ್ಕನ್ನು ನಾನು ಗೌರವಿಸುತ್ತೇನೆ.
ಇದನ್ನೂ ಓದಿ: ಮೆಟ್ರೋ ಟಿಕೆಟ್ ಏರಿಕೆ ನಿರ್ಧಾರ ಕೇಂದ್ರದ್ದು: ಸಿಎಂ | ದರ ಪರಿಷ್ಕರಣೆಗೆ ಪತ್ರ ಬರೆದಿದ್ದೆ ರಾಜ್ಯ ಸರ್ಕಾರ: ತೇಜಸ್ವಿ ಸೂರ್ಯ!
ಆದರೆ ವಿರೋಧ ಪಕ್ಷದ ಸ‍್ಥಾನದಲ್ಲಿ ಜನ ಕೂರಿಸಿರುವ ರಾಜ್ಯದ ಬಿಜೆಪಿ ರಾಜಕೀಯ ದುರುದ್ದೇಶದಿಂದ ಸುಳ್ಳು ಮಾಹಿತಿಗಳನ್ನು ನೀಡಿ ಸಾರ್ವಜನಿಕರ ಪ್ರತಿಭಟನೆಗೆ ಕುಮ್ಮಕ್ಕು ನೀಡುತ್ತಿರುವುದು ಅಕ್ಷಮ್ಯ. ಒಂದೆಡೆ ಮೆಟ್ರೋ ರೈಲು ನಿರ್ಮಾಣದ ಸಾಧನೆ ಕೇಂದ್ರದ ಬಿಜೆಪಿ ಸರ್ಕಾರದ್ದು ಎಂದು ಡಂಗುರ ಬಾರಿಸುತ್ತಿರುವ ಬಿಜೆಪಿ ನಾಯಕರು ದರ ಪರಿಷ್ಕರಣೆ ವಿರುದ್ಧ ಜನಾಕ್ರೋಶ ವ್ಯಕ್ತವಾಗುತ್ತಿರುವುದನ್ನು ಕಂಡು ಅದರ ಜವಾಬ್ದಾರಿಯನ್ನು ರಾಜ್ಯ ಸರ್ಕಾರದ ಮೇಲೆ ಹೊರಿಸುತ್ತಿರುವುದು ಆತ್ಮವಂಚಕ ನಡವಳಿಕೆಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದರು.
ಇದನ್ನೂ ಓದಿ: ನಮ್ಮ ಮೆಟ್ರೋ ದರ ಏರಿಕೆ ಬಳಿಕ ನಾಲ್ಕೇ ದಿನದಲ್ಲಿ 80 ಸಾವಿರ ಪ್ರಯಾಣಿಕರು ಕಡಿಮೆ!
