ಬೆಂಗಳೂರು [ಅ.22]:  ಬಂಗಾಳ ಕೊಲ್ಲಿ ಹಾಗೂ ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ನಗರದಲ್ಲಿ ಭಾರೀ ಮಳೆಯಾಗುತ್ತಿದೆ.

ಕಳೆದ ಮೂರ್ನಾಲ್ಕು ದಿನಗಳಿಂದ ನಗರದಲ್ಲಿ ನಿರಂತವಾಗಿ ಮಳೆಯಾಗುತ್ತಿದ್ದು, ಸೋಮವಾರ ಬೆಳಗ್ಗೆಯಿಂದಲೇ ಮೋಡ ಕವಿದ ವಾತಾವರಣ, ತುಂತುರು ಮಳೆ ಆಯಿತು. ಸಂಜೆ ವೇಳೆಗೆ ಹಲವೆಡೆ ಧಾರಾಕಾರವಾಗಿ ಮಳೆ ಸುರಿದ ಹಿನ್ನೆಲೆಯಲ್ಲಿ ರಸ್ತೆಗಳು ಅಕ್ಷರಶಃ ಹೊಳೆಗಳಾಗಿ ಮಾರ್ಪಟ್ಟವು. ಮ್ಯಾನ್‌ ಹೋಲ್‌, ಚರಂಡಿಗಳು ಉಕ್ಕಿ ಹರಿದವು.

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ನಗರದಲ್ಲಿ ‘ಯೆಲ್ಲೋ ಅಲರ್ಟ್‌’ : ನಗರದಲ್ಲಿ ಅ.25ರವರೆಗೆ 65ರಿಂದ 115 ಮಿ.ಮೀ ವರೆಗೆ ಮಳೆಯಾಗುವ ಸಾಧ್ಯತೆ ಇರುವುದರಿಂದ ಭಾರತೀಯ ಹವಾಮಾನ ಇಲಾಖೆ ಬೆಂಗಳೂರು ನಗರಕ್ಕೆ ‘ಯೆಲ್ಲೋ ಅಲರ್ಟ್‌’ ಎಚ್ಚರಿಕೆ ನೀಡಿದೆ.

ಬೆಂಗಳೂರು- ಎರ್ನಾಕುಲಂ ಎಕ್ಸ್‌ಪ್ರೆಸ್‌ ರೈಲು ಸೇವೆ ರದ್ದು

ಬೆಂಗಳೂರು: ಕೇರಳದಲ್ಲಿ ಭಾರೀ ಮಳೆ ಹಿನ್ನೆಲೆಯಲ್ಲಿ ಮಂಗಳವಾರ (ಅ.22) ನಗರದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಿಂದ ಹೊರಡಬೇಕಿದ್ದ ಕೆಎಸ್‌ಆರ್‌ ಬೆಂಗಳೂರು- ಎರ್ನಾಕುಲಂ ಇಂಟರ್‌ಸಿಟಿ ಎಕ್ಸ್‌ಪ್ರೆಸ್‌ (ರೈಲು ಸಂಖ್ಯೆ 12677) ಸಂಚಾರನ್ನು ನೈಋುತ್ಯ ರೈಲ್ವೆ ರದ್ದುಗೊಳಿಸಿದೆ. ಎರ್ನಾಕುಲಂ ಸೇರಿದಂತೆ ಸುತ್ತಮುತ್ತಲ ಪ್ರದೇಶಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಪ್ರವಾಹದ ಸ್ಥಿತಿ ನಿರ್ಮಾಣವಾಗಿದೆ. ಅಲ್ಲದೆ, ಹಳಿಗಳ ಮೇಲೆ ನೀರು ಹರಿಯುತ್ತಿರುವುದರಿಂದ ಪ್ರಯಾಣಿಕರ ಸುರಕ್ಷತೆ ದೃಷ್ಟಿಯಿಂದ ರೈಲು ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ ಎಂದು ನೈಋುತ್ಯ ರೈಲ್ವೆ ತಿಳಿಸಿದೆ.