ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿಗೆ ಆಗಮಿಸಿದ್ದಾರೆ. ಕಾಳೇನ ಅಗ್ರಹಾರ ದಿಂದ ನಾಗಾವರ ಮೆಟ್ರೋ ಸೇವೆ ಉದ್ಘಾಟನೆಗೆಗಾಗಿ ತಾವರಕೆರೆ ಮೋದಿ ಆಗಮಿಸುತ್ತಿದ್ದಾರೆ. ಹೀಗಾಗಿ ಸುತ್ತ ಮುತ್ತಲಿನ ರಸ್ತೆಗಳನ್ನು ಸಂಪೂರ್ಣ ಬಂದ್ ಮಾಡಲಾಗಿದೆ.

ಬೆಂಗಳೂರು (ನ.13) ಮೆಟ್ರೋ ನಿಲ್ದಾಣ ಉದ್ಘಾಟನೆ ಸೇರಿದಂತೆ ಹಲು ಕಾರ್ಯಕ್ರಮಗಳ ನಿಮಿತ್ತ ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿಗೆ ಆಗಮಿಸಿದ್ದಾರೆ. ತಾವರೆಕೆರೆ ಮೆಟ್ರೋ ನಿಲ್ದಾಣಕ್ಕೆ ಆಗಮಿಸಲಿರುವ ಪ್ರಧಾನಿ ಮೋದಿ ಕಾಳೇನ ಅಗ್ರಹಾರ ದಿಂದ ನಾಗಾವರ ಮೆಟ್ರೋ ಸೇವೆಯ ಮೊದಲ ಹಂತದಲ್ಲಿ ಪೂರ್ಣಗೊಂಡಿರುವ ಮೆಟ್ರೋ ಸೇವೆಯನ್ನು ಉದ್ಘಾಟಿಸಲಿದ್ದಾರೆ. ತಾವರೆಕೆರೆಗೆ ಪ್ರಧಾನಿ ಮೋದಿ ಆಗಮಿಸುವ ಹಿನ್ನಲೆಯಲ್ಲಿ ಹಲವು ರಸ್ತೆಗಳು ಬಂದ್ ಮಾಡಲಾಗಿದೆ. ಜೆಪಿ ನಗರಕ್ಕೆ ಹೋಗುವ ರಸ್ತೆ, ವೆಗಾ ಸಿಟಿ ಮಾಲ್ ರಸ್ತೆ ಸೇರಿದಂತೆ ಹಲವು ರಸ್ತೆಗಳು ಬಂದ್ ಆಗಿದೆ.

ಕೆಲ ರಸ್ತೆ ಸಂಚಾರ ಸಂಪೂರ್ಣ ಬಂದ್

ಪ್ರಧಾನಿ ನರೇಂದ್ರ ಮೋದಿ ತಾವರೆಕೆರೆ ಮೆಟ್ರೋ ನಿಲ್ದಾಣಕ್ಕೆ ಆಗಮಿಸುತ್ತಿರುವ ಹಿನ್ನಲೆಯಲ್ಲಿ ಮೆಗಾ ಸಿಟಿ ಮಾಲ್ ಜಂಕ್ಷನ್ ರಸ್ತೆ ಸಂಪೂರ್ಣ ಬಂದ್ ಮಾಡಲಾಗಿದೆ. ಪೊಲೀಸರು ಬ್ಯಾರಿಕೇಡ್ ಹಾಕಿ ರಸ್ತೆ ಬಂದ್ ಮಾಡಿದ್ದಾರೆ. ಇದೇ ವೇಳೆ ಪರ್ಯಾಣ ರಸ್ತೆಗಳನ್ನು ಸೂಚಿಸಿದ್ದಾರೆ. ಇನ್ನು ಜೆಪಿ ನಗರಕ್ಕೆ ಹೋಗುವ ರಸ್ತೆಯನ್ನು ಸಂಪೂರ್ಣ ಬಂದ್ ಮಾಡಲಾಗಿದೆ. ಪೊಲೀಸರು ರಸ್ತೆಗಳ ಬಂದ್ ಮಾಡಿ ಬಂದೋಬಸ್ತ್ ಮಾಡಿದ್ದಾರೆ.

ಹೆಲಿಕಾಪ್ಟರ್ ಮೂಲಕ ತಾವರೆಕೆರೆಗೆ ಮೋದಿ ಆಗಮನ

ಆನೇಕಲ್‌ನ ಜಿಗಣಿಯ ಪ್ರಶಾಂತಿ ಕುಟಿರಾದಿಂದ ಪ್ರಧಾನಿ ಮೋದಿ ನೆರವಾಗಿ ತಾವರೆಕೆರೆ ಹೆಲಿಪ್ಯಾಡ್‌ಗೆ ಆಗಮಿಸಲಿದ್ದಾರೆ. ಈ ಹಿನ್ನಲೆಯಲ್ಲಿ ತಾವರೆಕೆರೆ ಹೆಲಿಪ್ಯಾಡ್ ಬಳಿ ಬಿಜೆಪಿ ಕಾರ್ಯಕರ್ತರು ಜಮಾಯಿಸಿದ್ದಾರೆ. ಮೋದಿ ಆಗಮನ ಹಿನ್ನಲೆಯಲ್ಲಿ ಸುತ್ತ ಮುತ್ತಲಿನ ಕೆಲ ರಸ್ತೆಗಳನ್ನು ಬಂದ್ ಮಾಡಲಾಗಿದೆ.

ತಾವರೆಕೆರೆ ಮೆಟ್ರೋ ನಿಲ್ದಾಣದ ಬಳಿ ಬಿಜೆಪಿ ಕಾರ್ಯಕರ್ತರು ಮೋದಿ ಮೋದಿ ಘೋಷಣೆ ಕೂಗುತ್ತಿದ್ದಾರೆ. ಮೋದಿ ಸಾಗುವ ರಸ್ತೆಯಲ್ಲಿ ಕಾರ್ಯಕರ್ತರು ಜಮಾಯಿಸಿದ್ದಾರೆ. ಮೋದಿಯನ್ನು ನೋಡಲು ಮಹಿಳಾ ಕಾರ್ಯಕರ್ತರು ಆಗಮಿಸಿದ್ದಾರೆ. ಇದೇ ವೇಳೆ ಕಲಾತಂಡಗಳಿಂದ ಪ್ರದರ್ಶನ ನೀಡಿದೆ. ಇದೇ ವೇಳೆ ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತರು ಡಿಕೆ ಶಿವಕುಮಾರ್ ಕುರಿತು ಘೋಷಣೆ ಕೂಗುತ್ತಿದ್ದಾರೆ.

ಮೆಟ್ರೋ ನಿಲ್ದಾಣ ಉದ್ಘಾಟನೆಯಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಕ್ರೆಡಿಟ್ ಯುದ್ಧದಲ್ಲಿ ನಿರತವಾಗಿದೆ. ಹಲವೆಡೆ ಕಾಂಗ್ರೆಸ್ ಕಾರ್ಯಕರ್ತರು ಡಿಕೆ ಶಿವಕುಮಾರ್ ಹಾಗೂ ಸರ್ಕಾರದ ಬ್ಯಾನರ್ ಹಾಕಿದ್ದರೆ, ಇತ್ತ ಮೋದಿ ಸ್ವಾಗತಕ್ಕೆ ಬಿಜೆಪಿ ಕಾರ್ಯಕರ್ತರು ಬ್ಯಾನರ್ ಹಾಕಿದ್ದಾರೆ. ರಾತ್ರಿ 1.30 ರಲ್ಲಿ ಬಿಜೆಪಿ ಬ್ಯಾನರ್ ತೆರವು ಮಾಡಲಾಗಿದೆ. ಕಾಂಗ್ರೆಸ್ ಕೆಟ್ಟ ಸಂಸ್ಕೃತಿಗೆ ನಾಂದಿ ಹಾಡುತ್ತಿದೆ ಎಂದು ಜಯನಗರ ಶಾಸಕ ಸಿಕೆ ರಾಮಮೂರ್ತಿ ಹೇಳಿದ್ದಾರೆ. ಬ್ಯಾನರ್ ವಿಚಾರದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಜಟಾಪಟಿ ನಡೆದಿದೆ. ಕಾಂಗ್ರೆಸ್ ದ್ವೇಷ ರಾಜಕೀಯ ಮಾಡುತ್ತಿದೆ ಎಂದು ಬಿಜೆಪಿ ಆರೋಪಿಸಿದೆ. ಸರ್ಕಾರ ಪ್ರಧಾನಿ ಮೋದಿ ಸ್ವಾಗತ ವಿಚಾರದಲ್ಲೂ ರಾಜಕೀಯ ಮಾಡುತ್ತಿದೆ ಎಂದು ಆರೋಪಿಸಿದೆ.