ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿನ ತಾವರೆಕೆರೆ ಮೆಟ್ರೋ ನಿಲ್ದಾಣದಲ್ಲಿ ಪಿಂಕ್ ಲೈನ್ ಮೆಟ್ರೋಗೆ ಚಾಲನೆ ನೀಡಿದ್ದಾರೆ. ಬಳಿಕ ಗಣ್ಯರ ಜೊತೆ ಪ್ರಧಾನಿ ಮೋದಿ ನಮ್ಮ ಮೆಟ್ರೋದಲ್ಲಿ ಪ್ರಯಾಣ ಬೆಳೆಸಿದ್ದಾರೆ.

ಬೆಂಗಳೂರು (ನ.13) ಹಲವು ಕಾರ್ಯಕ್ರಮಗಳ ನಿಮಿತ್ತ ಬೆಂಗಳೂರಿಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಇಂದು ತಾವರೆಕೆರೆ ಮೆಟ್ರೋ ನಿಲ್ದಾಣದಲ್ಲಿ ಪಿಂಕ್ ಲೈನ್ ಮೆಟ್ರೋಗೆ ಚಾಲನೆ ನೀಡಿದ್ದಾರೆ. ಎರಡು ಹಂತದಲ್ಲಿ ನಡೆಯುತ್ತಿರುವ ಕಾಳೇನ ಅಗ್ರಹಾರ ದಿಂದ ನಾಗಾವರ ಮೆಟ್ರೋ ಸೇವೆಯಲ್ಲಿ ಮೊದಲ ಹಂತದ ಕಾಮಗಾರಿ ಪೂರ್ಣಗೊಂಡಿದೆ. ತಾವರೆಕೆರೆ ಮೋಟ್ರೋ ನಿಲ್ದಾಣಕ್ಕೆ ಆಗಮಿಸಿದ ಪ್ರಧಾನಿ ಮೋದಿ ಪಿಂಕ್ ಲೈನ್ ಮೆಟ್ರೋಗೆ ಚಾಲನೆ ನೀಡಿದ್ದಾರೆ.

ಬೆಂಗಳೂರಿನ ಗುಲಾಬಿ ಮಾರ್ಗ ಮೆಟ್ರೋಗೆ ಮೋದಿ ಚಾಲನೆ

ಪಿಂಕ್ ಲೈನ್ ಮೆಟ್ರೋಗೆ ಚಾಲನೆ ನೀಡಿದ ಪ್ರಧಾನಿ ಮೋದಿ ಬಳಿಕ ನಮ್ಮ ಮೆಟ್ರೋದಲ್ಲಿ ಪ್ರಯಾಣ ಬೆಳೆಸಿದ್ದಾರೆ. ಒಟ್ಟು 6 ಕೋಚ್‌ಗಳ ರೈಲಿನಲ್ಲಿ ಗಣ್ಯರ ಜೊತೆ ಮೋದಿ ಪ್ರಯಾಣ ಬೆಳೆಸಿದ್ದಾರೆ. ರಾಜ್ಯಪಾಲ ಡಾ. ಸುಧಾ ಯಾದವ್, ಕರ್ನಾಟಕ ಮುಖ್ಯಮಂತ್ರಿ ಡಿಕೆ ಶಿವಕುಮಾರ್,ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣಬೈರೇಗೌಡ, ಸಂಸದ ತೇಜಸ್ವಿ ಸೂರ್ಯ ಪ್ರಯಾಣ ಬೆಳೆಸಿದ್ದಾರೆ.ಇನ್ನು ಪ್ರಧಾನಿ ಕಾರ್ಯಾಲದ ಅಧಿಕಾರಿಗಳು, ಸಿಬ್ಬಂದಿಗಳು, ರಾಜ್ಯ ಅಧಿಕಾರಿಗಳು ಇದೇ ಮೆಟ್ರೋ ರೈಲಿನಲ್ಲಿ ಮೋದಿ ಜೊತೆ ಪ್ರಯಾಣ ಬೆಳೆಸಿದ್ದಾರೆ.

ತಾವರೆಕೆ ಮೆಟ್ರೋ ನಿಲ್ದಾಣದಿಂದ ಬಿಳೇಕಹಳ್ಳಿ ಮೆಟ್ರೋ ನಿಲ್ದಾಣದವರೆಗೆ ಮೋದಿ ಪ್ರಯಾಣ ಬೆಳೆಸಲಿದ್ದಾರೆ. ಮೋದಿ ಜೊತೆ ನಾಲ್ವರು ಗಣ್ಯರು ಪ್ರಯಾಣ ಮಾಡಿದ್ದಾರೆ. ಎಸ್.ಜಿ ಪಾಳ್ಯ ಮೆಟ್ರೋ ನಿಲ್ದಾಣದಿಂದ ಪ್ರಯಾಣ ಆರಂಭಿಸಿದ ಮೋದಿ ಬಿಳೇಕಹಳ್ಳಿ IIMB ಮೆಟ್ರೋ ನಿಲ್ದಾಣದಲ್ಲಿ ಇಳಿದಿದ್ದಾರೆ. ಇಲ್ಲಿಂದ ಮೋದಿ IIMB ಸಂಭಾಗಣಕ್ಕೆ ತೆರಳಲಿದ್ದಾರೆ. ಇಲ್ಲಿ ಹಲವು ಯೋಜನೆಗಳಿಗೆ ಮೋದಿ ಚಾಲನೆ ನೀಡಲಿದ್ದಾರೆ. ಹಲವು ಅಭಿವೃದ್ಧಿ ಕಾರ್ಯಕ್ರಮಗಳಿಗೆ ಮೋದಿ ಚಾಲನೆ ನೀಡಲಿದ್ದಾರೆ. IIMB ಸಂಭಾಗಣದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಜಮಾಯಿಸಿದ್ದಾರೆ. ಕೆಲ ಕಾಂಗ್ರೆಸ್ ಕಾರ್ಯಕರ್ತರು ರಾಹುಲ್ ಗಾಂಧಿ ಹಾಗೂ ಡಿಕೆ ಶಿವಕುಮಾರ್ ಪರ ಘೋಷಣೆ ಕೂಗಿದ್ದಾರೆ.

ಬೆಂಗಳೂರಿನ ಪ್ರಶಾಂತಿ ಕುಟೀರದಿಂದ ಹೆಲಿಕಾಪ್ಟರ್ ಮೂಲಕ ಮೋದಿ ಆಗಮಿಸಿದ್ದಾರೆ. ತಾವರೆಕೆರೆ ಮೆಟ್ರೋ ನಿಲ್ದಾಣಕ್ಕೆ ಮೋದಿ ಆಗಮಿಸುತ್ತಿದ್ದಂತೆ ಕಾರ್ಯಕರ್ತು ಮೋದಿ ಮೋದಿ ಘೋಷಣೆ ಕೂಗಿದ್ದಾರೆ. ಮೋದಿ ಆಗಮಿಸುವ ರಸ್ತೆಯ ಬದಿಗಳಲ್ಲಿ ಕಾರ್ಯಕರ್ತರು ಜಮಾಯಿಸಿ ಮೋದಿ ಘೋಷಣೆ ಕೂಗಿದ್ದಾರೆ. ಕಾರ್ಯಕರ್ತರ ಜೋಶ್ ನೋಡಿದ ಮೋದಿ ಕಾರು ನಿಧಾನವಾಗಿ ಸಾಗಿದೆ. ಕಾರ್ಯಕರ್ತರಿಗೆ ಕೈಬೀಸುತ್ತಾ ಮೋದಿ ಸಾಗಿ ತಾವರೆಕೆ ಮೆಟ್ರೋ ನಿಲ್ದಾಣಕ್ಕೆ ಆಗಮಿಸಿದ್ದರು.