POCSO Accused Jumps to Death from 5th Floor of Bengaluru City Civil Court ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ ಆವರಣದಲ್ಲಿ ಪೋಕ್ಸೋ ಪ್ರಕರಣದ ಆರೋಪಿ ಗೌತಮ್, ಕಟ್ಟಡದ 5ನೇ ಮಹಡಿಯಿಂದ ಹಾರಿ ಆತ್ಮಹ* ಮಾಡಿಕೊಂಡಿದ್ದಾನೆ.
ಬೆಂಗಳೂರು (ಅ.9): ಇಲ್ಲಿ ಸಿಟಿ ಸಿವಿಲ್ ಕೋರ್ಟ್ ಆವರಣದಲ್ಲಿ ಗುರುವಾರ (ಅ.9) ಆಘಾತಕಾರಿ ಘಟನೆಯೊಂದು ನಡೆದಿದೆ. ಪೋಕ್ಸೋ (POCSO) ಪ್ರಕರಣದ ಆರೋಪಿ ಗೌತಮ್ ಎಂಬಾತ ನ್ಯಾಯಾಲಯದ ಕಟ್ಟಡದ 5ನೇ ಮಹಡಿಯಿಂದ ಹಾರಿ ಆತ್ಮಹ*ಗೆ ಯತ್ನಿಸಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಘಟನೆಯ ಹಿನ್ನೆಲೆ:
ಆಡುಗೋಡಿ ಪೊಲೀಸ್ ಠಾಣೆಯಲ್ಲಿ ಗೌತಮ್ ವಿರುದ್ಧ ಪೋಕ್ಸೋ ಕೇಸ್ ದಾಖಲಾಗಿತ್ತು. ಪ್ರಕರಣದ ವಿಚಾರಣೆ ಹಿನ್ನೆಲೆಯಲ್ಲಿ ಪೊಲೀಸರು ಆರೋಪಿಯನ್ನು ಇಂದು ನ್ಯಾಯಾಲಯಕ್ಕೆ ಕರೆತಂದಿದ್ದರು. ಕೋರ್ಟ್‌ಗೆ ಆತನ ಪೋಷಕರು ಮತ್ತು ಸಂಬಂಧಿಕರು ಕೂಡ ಬಂದಿದ್ದರು. ಈ ಸಂದರ್ಭದಲ್ಲಿ ತೀವ್ರ ಅವಮಾನಕ್ಕೆ ಒಳಗಾಗಿ ಆತ್ಮಹ*ಗೆ ಶರಣಾಗಿದ್ದಾನೆ ಎಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಹಲಸೂರು ಗೇಟ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕಳೆದ ಏಪ್ರಿಲ್ ತಿಂಗಳಲ್ಲಿ ಪೋಕ್ಸೋ ಕೇಸ್ ದಾಖಲಾಗಿತ್ತು. ಆಡುಗೋಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದರೆ, ಇತ್ತೀಚೆಗೆ ಆತನ ಡಿಎನ್‌ಎ ಕೂಡ ಮ್ಯಾಚ್ ಆಗಿತ್ತು. ಇದರಿಂದಾಗಿ ಗೌತಮ್‌ನಲ್ಲಿ ಬಂಧಿಸಿ ಪೊಲೀಸರು ಜೈಲಿಗೆ ಅಟ್ಟಿದ್ದರು.
ಡಿಸಿಪಿ ಪರಿಶೀಲನೆ: ಸಿಟಿ ಸಿವಿಲ್ ಕೋರ್ಟ್ ಮೇಲಿಂದ ಬಿದ್ದು ಆರೋಪಿ ಆತ್ಮಹತ್ಯೆ ಮಾಡಿಕೊಂಡಿರುವ ಬೆನ್ನಲ್ಲಿಯೇ ಘಟನಾ ಸ್ಥಳಕ್ಕೆ ಕೇಂದ್ರ ವಿಭಾಗದ ಡಿಸಿಪಿ ಅಕ್ಷಯ್ ಮಚೀಂದ್ರ ಭೇಟಿ ಪರಿಶೀಲನೆ ಮಾಡಿದ್ದಾರೆ.
