ಬೆಂಗಳೂರಿನ ಹಲವು ಬಡಾವಣೆಗಳಲ್ಲಿ ಇಂದು ವಿದ್ಯತ್ ವ್ಯತ್ಯಯವಾಗುತ್ತಿದೆ. ಬಹುತೇಕ ಅರ್ಧ ಬೆಂಗಳೂರಿನಲ್ಲಿ ಇಂದು ಸಂಜೆವರೆಗೆ ವಿದ್ಯುತ್ ಇಲ್ಲ. ಯಾವ ಬಡಾವಣೆ, ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ?
ಬೆಂಗಳೂರು(ಜೂ.21) ಬೆಸ್ಕಾಂ ತುರ್ತು ಕಾಮಗಾರಿ ಹಿನ್ನಲೆಯಲ್ಲಿ ಇಂದು (ಜೂ.21) ಬೆಂಗಳೂರಿನ ಅರ್ಧ ಭಾಗದಲ್ಲಿ ವಿದ್ಯುತ್ ಸಮಸ್ಯೆಯಾಗುತ್ತಿದೆ. ಬೆಂಗಳೂರಿನ ಹಲವು ಬಡಾವಣೆಗಳಲ್ಲಿ ಇಂದು ಬೆಳಗ್ಗೆಯಿಂದ ಸಂಜೆವರೆಗೂ ವಿದ್ಯುತ್ ಇರಲ್ಲ. ಕೆಪಿಟಿಸಿಎಲ್ ತುರ್ತು ನಿರ್ವಹಣಾ ಕಾಮಾಗಾರಿಯಿಂದ ವಿದ್ಯುತ್ ವ್ಯತ್ಯಯವಾಗುತ್ತಿದೆ. ಬೆಂಗಳೂರಿನ ಜಯನಗರ, ಕೋರಮಂಗಲ ಸೇರಿದಂತೆ ಬಹುತೇಕ ಬಡಾವಣೆಗಳಲ್ಲಿ ವಿದ್ಯುತ್ ಸಮಸ್ಯೆಯಾಗಲಿದೆ. ಬೆಳಗ್ಗೆ 10 ಗಂಟೆಯಿಂದ ಸಂಜೆ 05:00 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ತಿಳಿಸಿದೆ.
220/66/11 ಕೆವಿ ಎಸ್ ಆರ್ ಎಸ್ ಪೀಣ್ಯ ಹಾಗೂ 66/11 ಸೊಲ್ಲದೇವನಹಳ್ಳಿ ಕೆಪಿಟಿಸಿಎಲ್ ಉಪಕೇಂದ್ರ ವ್ಯಾಪ್ತಿಯಲ್ಲಿನ ಪ್ರದೇಶಗಳಲ್ಲಿ ಕಾಮಗಾರಿ ಹಿನ್ನೆಲೆಯಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಸಾರ್ವಜನಿಕರಿಗೆ ಬೆಸ್ಕಾಂ ಈ ಕುರಿತು ಮನವಿ ಮಾಡಿದೆ.
ಯಾವೆಲ್ಲಾ ವಲಯದಲ್ಲಿ ವಿದ್ಯುತ್ ವ್ಯತ್ಯಯ
ಎಚ್‌ಎಂಟಿ ರಸ್ತೆ, ಆರ್‌ಎನ್‌ಎಸ್ ಅಪಾರ್ಟ್ ಮೆಂಟ್, ಬೋರ್ಲಿಂಗಪ್ಪ ಗಾರ್ಡನ್, ಪೀಣ್ಯ ಪೊಲೀಸ್ ಠಾಣೆ ರಸ್ತೆ, ಟೆಲಿಫೋನ್ ಎಕ್ಸ್ ಚೆಂಜ್, 6ನೇ ಕ್ರಾಸ್, ರಿಲಯನ್ಸ್ ಕಮ್ಯೂನಿಕೇಶನ್, ಗಣಪತಿನಗರ ಮುಖ್ಯ ರಸ್ತೆ, ಪೊಲೀಸ್ ಠಾಣೆ ರಸ್ತೆ, ಚಾಮೂಂಡಿಪುರ, ಮುನೇಶ್ವರ ದೇವಸ್ಥಾನ ರಸ್ತೆ, ಎಂಇಸಿ ಲೇಔಟ್, ಮಲಯಾಳ ಅತಿಥಿ ಗೃಹ ರಸ್ತೆ, ಕೆಎಚ್‌ಬಿ ಲೇಔಟ್, ರಾಜರಾಜೇಶ್ವರಿನಗರ, ಆಕಾಶ್ ಥೀಟರ್ ರಸ್ತೆ, ಫ್ರಂಡ್ಸ್ ಸರ್ಕಲ್, ವಿಜ್ಞಾನ ಪಬ್ಲಿಕ್ ಸ್ಕೂಲ್ ರಸ್ತೆ, ಬೀಮೇಶ್ವರ ನಗರ, ಬ್ಯಾಂಕ್ ಕಾಲೋನಿ, 6ನೇ ಮುಖ್ಯ ರಸ್ತೆ, ವಿಭಾಗ ರಸ್ತೆ, 5ನೇ ಮುಖ್ಯ ರಸ್ತೆ, ಯುಕೋ ಬ್ಯಾಂಕ್ ರಸ್ತೆ, ಥೆರ್ಲಾಕ್ ರಸ್ತೆ, 7ನೇ ಮುಖ್ಯ ರಸ್ತೆ, 3ನೇ ಹಂತ, ರಾಜಗೋಪಾಲ ನಗರ, ಕಸ್ತೂರಿ ಬಡಾವಣೆ, ಜಿಕೆಡಬ್ಲ್ಯೂ ಲೇಔಟ್, ಬೈರವೇಶ್ವರ ನಗರ, ಇಎಸ್‌ಐ ಆಸ್ಪತ್ರೆ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಇಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆವರೆಗೆ ವಿದ್ಯುತ್ ಇರುವುದಿಲ್ಲ.
ಕೆವಿ ಎಸ್ ಆರ್ ಎಸ್ ಪೀಣ್ಯ ಹಾಗೂ ಸೊಲ್ಲದೇವನಹಳ್ಳಿ ಉಪಕೇಂದ್ರದಲ್ಲಿ ನಿರ್ವಹಣೆ ಕಾಮಾಗಾರಿ ನಡೆಯಲಿದೆ. ಹೀಗಾಗಿ ವಿದ್ಯುತ್ ಸಮಸ್ಯೆಯಾಗಲಿದೆ. ಇಂದು ಬರೋಬ್ಬರಿ 7 ಗಂಟೆ ವಿದ್ಯುತ್ ಸಮಸ್ಯೆಯಾಗಲಿದೆ. 7 ಗಂಟೆ ಕಾಲ ದುರಸ್ತಿ ಕಾಮಗಾರಿಗಳು ನಡೆಯಲಿದೆ ಎಂದು ಬೆಸ್ಕಾಂ ಪ್ರಕಟಣೆಯಲ್ಲಿ ಹೇಳಿದೆ. ನಿರ್ವಹಣಾ ಕಾಮಾಗಾರಿಯಿಂದ ವಿದ್ಯುತ್ ಅಡಚಣೆಯಾಗಲಿದೆ ಎಂದು ಬೆಸ್ಕಾಂ ಹೇಳಿದೆ.
