ಪೋಷಕರೇ ಗಮನಿಸಿ. ಇಂದು ನಿಮ್ಮ ಮಕ್ಕಳ ಶಾಲಾ ವಾಹನ ಮನೆ ಬಾಗಿಲಿಗೆ ಬರುವುದಿಲ್ಲ. ಕಾರಣವೇನು ? 

ಬೆಂಗಳೂರು [ಅ.23]: ರಾಜಧಾನಿಯಲ್ಲಿ ಬುಧವಾರ ಖಾಸಗಿ ಶಾಲೆಗಳ ಮಕ್ಕಳನ್ನು ಶಾಲೆಗಳಿಗೆ ಕರೆದೊಯ್ಯುವ ಖಾಸಗಿ ವಾಹನಗಳ ಸೇವೆಯಲ್ಲಿ ವ್ಯತ್ಯಯವಾಗಲಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಎಐಯುಟಿಯುಸಿ ಸಂಯೋಜಿತ ಕರ್ನಾಟಕ ಸಂಯುಕ್ತ ಶಾಲಾ ಹಾಗೂ ಲಘು ವಾಹನ ಚಾಲಕರ ಸಂಘವು ಮಂಗಳವಾರ ಬೆಳಗ್ಗೆ 11ಕ್ಕೆ ಮಲ್ಲೇಶ್ವರಂನ ಶಿರೂರು ಪಾರ್ಕ್ನಲ್ಲಿ ಚಾಲಕರ ಸಮಾವೇಶ ಹಮ್ಮಿಕೊಂಡಿದೆ. 

ಈ ಸಮಾವೇಶದಲ್ಲಿ ಚಾಲಕರು ಪಾಲ್ಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಮಕ್ಕಳನ್ನು ಕರೆದೊಯ್ಯುವ ಖಾಸಗಿ ವಾಹನಗಳ ಸೇವೆಯಲ್ಲಿ ವ್ಯತ್ಯಯವಾಗಲಿದೆ. ಈಗಾಗಲೇ ಚಾಲಕರು ಮಕ್ಕಳ ಪೋಷಕರಿಗೆ ಈ ವಿಚಾರವನ್ನು ತಿಳಿಸಿದ್ದಾರೆ. ಅವರು ಸಹ ಸಮಾವೇಶಕ್ಕೆ ಬೆಂಬಲ ನೀಡುವುದಾಗಿ ಹೇಳಿದ್ದಾರೆ ಎಂದು ಸಂಘದ ಅಧ್ಯಕ್ಷ ಷಣ್ಮುಗಂ ತಿಳಿಸಿದರು.

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಈ ಸಮಾವೇಶ ಯಾರ ವಿರುದ್ಧದ ಪ್ರತಿಭಟನೆ ಅಥವಾ ಧರಣಿಯಲ್ಲ. ಚಾಲಕರು ಎದುರಿಸುತ್ತಿರುವ ಸಮಸ್ಯೆಗಳು ಹಾಗೂ ಬೇಡಿಕೆಗಳ ಬಗ್ಗೆ ಮುಕ್ತವಾಗಿ ಚರ್ಚಿಸಲಾಗುತ್ತದೆ. ಈ ಸಮಾವೇಶದಲ್ಲಿ ಚಾಲಕರು ಪಾಲ್ಗೊಳ್ಳಲೇ ಬೇಕಿರುವುದರಿಂದ ಸೇವೆಯಲ್ಲಿ ಕೊಂಚ ವ್ಯತ್ಯಯವಾಗಲಿದೆ. ಈ ಸಮಾವೇಶಕ್ಕೆ ಜೈ ಭುವನೇಶ್ವರಿ ಶಾಲಾ ವಾಹನ ಚಾಲಕರ ಸಂಘ ಸೇರಿದಂತೆ ಹಲವು ಚಾಲಕರ ಸಂಘಟನೆಗಳು ಬೆಂಬಲ ಸೂಚಿಸಿವೆ ಎಂದು ಹೇಳಿದರು.