ಬೆಂಗಳೂರು [ನ.07] : ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ನಾಯಕ ಎಸ್.ಎಂ. ಕೃಷ್ಣ ಅವರು ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಅವರ ನಿವಾಸಕ್ಕೆ ಭೇಟಿ ನೀಡಿ ಮಾತುಕತೆ ನಡೆಸಿದರು. 

ಬೆಂಗಳೂರಿನ ಸದಾಶಿವ ನಗರದ ಶಿವಕುಮಾರ್ ಅವರ ನಿವಾಸಕ್ಕೆ ಪತ್ನಿ ಪ್ರೇಮಾ ಕೃಷ್ಣ ಅವರ ಸಹಿತ ಭೇಟಿ ನೀಡಿದ್ದ ಕೃಷ್ಣ ಅವರು ಡಿ.ಕೆ. ಶಿವಕುಮಾರ್ ಅವರೊಂದಿಗೆ ಚರ್ಚೆ ನಡೆಸಿದರು. ಶಿವಕುಮಾರ್ ಬೆಂಗಳೂರಿಗೆ ವಾಪಸಾದ ಎರಡು ವಾರಗಳ ಬಳಿಕ ಭೇಟಿ ಮಾಡಿದ ಎಸ್.ಎಂ. ಕೃಷ್ಣ ಶಿವಕುಮಾರ್ ಮೇಲಿನ ಪ್ರಕರಣ ಹಾಗೂ ಜೈಲು ವಾಸ ಮತ್ತಿತರ ವಿಷಯಗಳ ಬಗ್ಗೆ ಮಾತನಾಡಿದರು ಎಂದು ತಿಳಿದುಬಂದಿದೆ. 

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಎಸ್. ಎಂ. ಕೃಷ್ಣ ಕಾಂಗ್ರೆಸ್‌ನಲ್ಲಿದ್ದಾಗ ಅವರಿಗೆ ಡಿ.ಕೆ.ಶಿವಕುಮಾರ್ ಆಪ್ತರಾಗಿದ್ದರು. ರಾಜಕೀಯೇ ತರವಾಗಿ ಇರುವ ವೈಯಕ್ತಿಕ ಬಾಂಧವ್ಯದಿಂದ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.

ಡಿಕೆಶಿ ಪತ್ನಿ , ತಾಯಿಗೆ ಇ.ಡಿ. ಸಮನ್ಸ್ ಪ್ರಶ್ನಿಸಿದ ಅರ್ಜಿ ವಿಚಾರಣೆ ಇಂದು : ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ(ಇ.ಡಿ.) ನೀಡಿರುವ ಸಮನ್ಸ್ ಅನ್ನು ಪ್ರಶ್ನಿಸಿ ಡಿ.ಕೆ.ಶಿವಕುಮಾರ್ ಅವರ ಪತ್ನಿ ಉಷಾ ಶಿವಕುಮಾರ್ ಮತ್ತು ತಾಯಿ ಗೌರಮ್ಮ, ಇತರ ನಾಲ್ವರು ಸಲ್ಲಿಸಿರುವ ಅರ್ಜಿಯ ವಿಚಾರಣೆ ದೆಹಲಿ ಹೈ ಕೋರ್ಟಿನಲ್ಲಿ ಇಂದು ನಡೆಯಲಿದೆ.