ನಿವೃತ್ತ ಐಎಎಸ್ ಅಧಿಕಾರಿ ಪುತ್ರ ಆತ್ಮಹತ್ಯೆ
ನಿವೃತ್ತ ಐಎಎಸ್ ಅಧಿಕಾರಿಯ ಪುತ್ರನೊಬ್ಬ ದೊಮ್ಮಲೂರಿನ ಅಪಾರ್ಟ್‌ಮೆಂಟ್‌ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಕೊಳೆತ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ.
ಬೆಂಗಳೂರು(ನ.11): ನಿವೃತ್ತ ಐಎಎಸ್ ಅಧಿಕಾರಿಯ ಪುತ್ರನೊಬ್ಬ ದೊಮ್ಮಲೂರಿನ ಅಪಾರ್ಟ್‌ಮೆಂಟ್‌ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಕೊಳೆತ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ.
ಜಾರ್ಖಂಡ್ ಮೂಲದ ನಿವೃತ್ತ ಐಎಎಸ್ ಅಧಿಕಾರಿ ಹರೇಂದ್ರ ಸಿಂಗ್ ಅವರ ಪುತ್ರ ರೋಹಿತ್ ಸಿಂಗ್ (27) ಆತ್ಮಹತ್ಯೆ ಮಾಡಿಕೊಂಡವರು. ಘಟನೆಗೆ ನಿಖರ ಕಾರಣ ತಿಳಿದಿಲ್ಲ. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸ ಲಾಗುತ್ತಿದೆ ಎಂದು ಇಂದಿರಾನಗರ ಪೊಲೀಸರು ಹೇಳಿದ್ದಾರೆ.
ರಾಮನಗರದಲ್ಲಿ ಇಬ್ಬರು ಮಹಿಳೆಯರು ಸೇರಿ 8 ಶಂಕಿತರು ಅರೆಸ್ಟ್
ಹರೇಂದ್ರ ಸಿಂಗ್ ಅವರು ಜಾರ್ಖಂಡ್ ಮುಖ್ಯಮಂತ್ರಿ ಸಲಹೆಗಾರರಾಗಿದ್ದರು. ಅವಿವಾಹಿತರಾಗಿರುವ ಪುತ್ರ ರೋಹಿತ್ ಸಿಂಗ್ ಕೆಲ ವರ್ಷಗಳಿಂದ ದೊಮ್ಮಲೂರಿನಲ್ಲಿರುವ ಸಾಯಿಕೃಷ್ಣ ಅಪಾರ್ಟ್‌ಮೆಂಟ್‌ನಲ್ಲಿ ಒಬ್ಬರೇ ನೆಲೆಸಿದ್ದರು.
ಎಂ.ಜಿ.ರಸ್ತೆಯಲ್ಲಿ ರುವ ಕೊಟೆಕ್ ಮಹೇಂದ್ರ ಬ್ಯಾಂಕ್‌ನಲ್ಲಿ ರೋಹಿತ್ ಡೆಪ್ಯೂಟಿ ಮ್ಯಾನೇಜರ್ ಆಗಿದ್ದರು. ಶನಿವಾರ ಬೆಳಗ್ಗೆ ರೋಹಿತ್ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ಇದ್ದು, ಕೊಳೆ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ.
ಗೆಳತಿಯ ಬಾತ್‌ರೂಮ್‌ನಲ್ಲೇ ಹಿಡನ್ ಕ್ಯಾಮರಾ ಇಟ್ಟ ಮೇಕಪ್ ಮ್ಯಾನ್..!
[ಸಮಸ್ಯೆಗಳು ಜೀವನದ ಅವಿಭಾಜ್ಯ ಅಂಗ. ಸಮಸ್ಯೆಯಿಲ್ಲದ ಮನುಷ್ಯನಿಲ್ಲ. ಯಾವುದೇ ಸಮಸ್ಯೆ ಜೀವನದ ಅಂತ್ಯವಲ್ಲ. ಆತ್ಮಹತ್ಯೆ ಆಲೋಚನೆ ಬಂದರೆ ಸರ್ಕಾರದ ಸಹಾಯವಾಣಿಗೆ ಕರೆ ಮಾಡಿ: 080 25497777 ಅಥವಾ ಆರೋಗ್ಯ ಸಹಾಯವಾಣಿ 104 ಗೆ ಕರೆ ಮಾಡಿ]