ಬೆಂಗಳೂರು(ನ.13): ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ವಿದೇಶದಿಂದ ಕಪ್ಪು ಹಣ ತಂದು ಪ್ರತಿಯೊಬ್ಬರಿಗೂ ತಲಾ ₹15ಲಕ್ಷ ನೀಡುತ್ತೇವೆ ಎಂದು ಹೇಳಿಯೇ ಇಲ್ಲ. ಆ ರೀತಿ ಹೇಳಿದ ಬಗ್ಗೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರ ಬಳಿ ದಾಖಲೆಗಳಿದ್ದರೆ ಬಿಡುಗಡೆ ಮಾಡಲಿ ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿಯೂ ಆದ ವಿಧಾನಪರಿಷತ್ ಸದಸ್ಯ ಎನ್.ರವಿಕುಮಾರ್ ಸವಾಲು ಎಸೆದಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಮೋದಿ ಅವರು ವಿದೇಶದಲ್ಲಿನ ಕಪ್ಪು ಹಣ ವಾಪಸ್ ತಂದರೆ ಪ್ರತಿಯೊಬ್ಬರಿಗೂ ₹15 ಲಕ್ಷ ಸಿಗಬಹುದು ಎಂದಷ್ಟೇ ಹೇಳಿದ್ದಾರೆ ಎಂದಿದ್ದಾರೆ. ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ಮುಖಂ ಡರು ವಾಸ್ತವಾಂಶಗಳ ಬಗ್ಗೆ ತಿಳಿದುಕೊಳ್ಳದೆ ತಪ್ಪು ಹೇಳಿಕೆಗಳನ್ನು ನೀಡುತ್ತಿದ್ದಾರೆ. ಬ್ಯಾಂಕಾಕ್ ನಲ್ಲಿ ಪ್ರಧಾನಿ ಅವರು ಆರ್‌ಸಿಇಪಿ ಒಪ್ಪಂದಕ್ಕೆ ಸಹಿ ಹಾಕದೆ ಹಿಂತಿರುಗಿದ್ದಾರೆ. ಈ ಕನಿಷ್ಠ ಜ್ಞಾನವೂ ಸಿದ್ದರಾಮಯ್ಯ ಅವರಿಗೆ ಇಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.

ಬೈಕ್‌ಗೆ ಬೆಂಕಿಹಚ್ಚಿ ಹಣ ಕೇಳಿದವ್ರಿಗೆ ಬಿತ್ತು ಗುಂಡೇಟು..!.

ಪಕ್ಷದ ವಕ್ತಾರ ಅಶ್ವತ್ಥನಾರಾಯಣ ಮಾತನಾಡಿ, ಕಾಂಗ್ರೆಸ್‌ನಲ್ಲಿ ಮೂಲ ಮತ್ತು ವಲಸೆ ನಾಯಕರ ನಡುವಿನ ಭಿನ್ನಾಭಿಪ್ರಾಯ ಮುಚ್ಚಿಕೊಳ್ಳಲು ಸಿದ್ದರಾಮಯ್ಯ ವ್ಯಂಗ್ಯವಾಗಿ ಮಾತನಾಡುವ ಚಾಳಿ ರೂಢಿಸಿಕೊಂಡಿದ್ದಾರೆ ಎಂದು ಛೇಡಿಸಿದರು. ಪಕ್ಷದ ಸಹ ವಕ್ತಾರರಾದ ಎಸ್.ಪ್ರಕಾಶ್, ಎ.ಎಸ್.ಆನಂದ್ ಉಪಸ್ಥಿತರಿದ್ದರು.

ಶಾಲಾ ಆವರಣಕ್ಕೂ ಕೆರೆ ನೀರು, ತೇಲಿ ಹೋದ ಪುಸ್ತಕಗಳು..!