ಬೆಂಗಳೂರಿನ ಜಯ ಕರ್ನಾಟಕ ಸಂಘಟನೆ ಬೆಂಗಳೂರಿನಲ್ಲಿ ವಿಶ್ವ ಕನ್ನಡಿಗರ ಸಮ್ಮಿಲನ ಕಾರ್ಯಕ್ರಮ ನಡೆಸಿದ್ದು, ಈ ಕಾರ್ಯಕ್ರಮದಲ್ಲಿ ಸುವರ್ಣ ನ್ಯೂಸ್ ನಿರೂಪಕಿ ಶ್ವೇತಾ ಆಚಾರ್ಯ ಅವರಿಗೆ ಸನ್ಮಾನಿಸಲಾಯಿತು.

ಬೆಂಗಳೂರು: ಬೆಂಗಳೂರಿನ ಜಯ ಕರ್ನಾಟಕ ಸಂಘಟನೆ ಬೆಂಗಳೂರಿನಲ್ಲಿ ವಿಶ್ವ ಕನ್ನಡಿಗರ ಸಮ್ಮಿಲನ ಕಾರ್ಯಕ್ರಮ ನಡೆಸಿದ್ದು, ಈ ಕಾರ್ಯಕ್ರಮದಲ್ಲಿ ಸುವರ್ಣ ನ್ಯೂಸ್ ನಿರೂಪಕಿ ಶ್ವೇತಾ ಆಚಾರ್ಯ ಅವರಿಗೆ ಸನ್ಮಾನಿಸಲಾಯಿತು. ಕನ್ನಡ ಮಾಧ್ಯಮ ಕ್ಷೇತ್ರದಲ್ಲಿ ಮಾಡಿದ ಸಾಧನೆಗಾಗಿ ನಿರೂಪಕಿ ಶ್ವೇತಾ ಆಚಾರ್ಯ ಅವರನ್ನು ಜಯ ಕರ್ನಾಟಕ ಸಂಘಟನೆ ವತಿಯಿಂದ ಸನ್ಮಾನಿಸಲಾಯಿತು. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಜಯ ಕರ್ನಾಟಕ ಸಂಘಟನೆಯೂ ಕಳೆದ 15 ವರ್ಷಗಳಿಂದ ನಾಡಿನಾದ್ಯಂತ ನೆಲ, ಜಲ ಭಾಷೆ ಸಂಸ್ಕೃತಿ ವಿಚಾರದಲ್ಲಿ ಜನಾಂದೋಲನದ ಮೂಲಕ ಅರಿವು ಮೂಡಿಸುವ ಕೆಲಸ ಮಾಡುತ್ತಿದ್ದು, ಉತ್ತಮ ಹೆಸರನ್ನು ಹೊಂದಿದೆ. ಕನ್ನಡ ಭಾಷೆ ಸಂಸ್ಖೃತಿ, ಸಾಹಿತ್ಯ ಕಲೆ ಹಾಗೂ ಈ ಮಣ್ಣಿನ ಸೊಗಡನ್ನು ಇನ್ನಷ್ಟು ಪಸರಿಸುವ ಉದ್ದೇಶದಿಂದ ಈ ಕನ್ನಡ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ವಿವಿಧ ದೇಶಗಳ ರಾಯಭಾರಿಗಳು, ಕನ್ನಡ ಸಾಹಿತಿಗಳು, ನಟರು, ಉದ್ಯಮಿಗಳು ಸೇರಿದಂತೆ ಅನೇಕ ಗಣ್ಯರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.