ಬೆಂಗಳೂರು: ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿರುವ ‘ನಾಗಮಂಡಲ’ ಖ್ಯಾತಿಯ ನಟಿ ವಿಜಯಲಕ್ಷ್ಮಿ ಅವರಿಗೆ ಚಿತ್ರೋದ್ಯಮ ಆರ್ಥಿಕ ನೆರವು ನೀಡಲು ಮುಂದೆ ಬಂದಿದೆ. 

ಆರ್ಥಿಕ ಸಂಕಷ್ಟದಲ್ಲಿ ಬಳಲುತ್ತಿರುವ ವಿಜಯಲಕ್ಷ್ಮಿ ಚಿಕಿತ್ಸಾ ವೆಚ್ಚಗಳಿಗೆ ಚಿತ್ರರಂಗ ನೆರವು ನೀಡುವಂತೆ ಅವರ ಸಹೋದರಿ ಉಷಾದೇವಿ ಮಾಡಿಕೊಂಡಿದ್ದ ಕೋರಿಕೆಗೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಸ್ಪಂದಿಸಿದೆ. 

ನಗರದ ಮಲ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ವಿಜಯಲಕ್ಷ್ಮಿ ಅವರನ್ನು ಭೇಟಿ ಮಾಡಿದ ವಾಣಿಜ್ಯ ಮಂಡಳಿ ಗೌರವ ಕಾರ್ಯದರ್ಶಿ ಬಾ.ಮಾ. ಹರೀಶ್, ಆಸ್ಪತ್ರೆಯ ವೆಚ್ಚಗಳನ್ನು ಭರಿಸಲು ವಾಣಿಜ್ಯ ಮಂಡಳಿ ಕಡೆಯಿಂದ ಅಗತ್ಯ ಕ್ರಮಕೈಗೊಳ್ಳಲಾಗುವುದು’ ಎಂದರು.